ಬೆಂಗಳೂರು: ಕೆಜಿಎಫ್ ಸಿನಿಮಾ ರಿಲೀಸ್ ನಂತರ ರಾಕಿಭಾಯ್ ಎಂದೇ ಖ್ಯಾತರಾಗಿರೋ ರಾಕಿಂಗ್ ಸ್ಟಾರ್ ಯಶ್ ಅವರು ಇಂದು 33ನೇ ವಸಂತಕ್ಕೆ ಕಾಲಿಟ್ಟಿದ್ದು, ಅಭಿಮಾನಿಗಳೆಲ್ಲರೂ ಕಾಮನ್ ಡಿಪಿ ಬಳಸುವಂತೆ ನಿರ್ದೇಶಕರೊಬ್ಬರು ಸಲಹೆ ನೀಡಿದ್ದಾರೆ.
ನಿರ್ದೇಶಕ ಸಂತೋಷ್ ಆನಂದ್‍ರಾಮ್ ಅವರು ಯಶ್ ಅವರ ಕೆಜಿಎಫ್ ಸಿನಿಮಾದ ಸ್ಟೈಲಿಶ್ ಫೋಟೋವನ್ನು ಬಳಸಿ ಪೋಸ್ಟರ್ ಮಾಡಿದ್ದಾರೆ. ಅಲ್ಲದೇ ಈ ಫೋಟೋವನ್ನು ಕಾಮನ್ ಡಿಪಿಯಾಗಿ ಬಳಸಿ ಎಂದು ಅಭಿಮಾನಿಗಳಿಗೆ ಸಲಹೆ ನೀಡಿದ್ದಾರೆ.
As per the wish of Rocking star fans I am revealing the common DP for his birthday 🙂 as big admirer of his work & achievements it’s my pleasure to unveil this! Happy birthday in advance Rocky bhai???? #YASHBirthdayCDP pic.twitter.com/J0L03oLm31
— Santhosh Ananddram (@SanthoshAnand15) January 6, 2019
ಸಂತೋಷ್ ಆನಂದ್‍ರಾಮ್ ಅವರು ಯಶ್ ಹಾಗೂ ರಾಧಿಕಾ ಪಂಡಿತ್ ಅಭಿನಯಿಸಿದ ‘ಮಿ. & ಮಿಸಸ್ ರಾಮಾಚಾರಿ’ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಈ ಚಿತ್ರ ಸಂತೋಷ್ ಅವರ ಮೊದಲ ಚಿತ್ರ ಕೂಡ ಆಗಿದ್ದು, ಚಿತ್ರ ಸಾಕಷ್ಟು ಯಶಸ್ಸು ಕಂಡಿತ್ತು.
ಯಶ್ ಪ್ರತಿ ವರ್ಷ ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳ ಜೊತೆ ಆಚರಿಸಿಕೊಳ್ಳುತ್ತಿದ್ದರು. ಆದರೆ ಈ ಬಾರಿ ಅಂಬರೀಶ್ ಅವರು ನಿಧನರಾದ ಹಿನ್ನೆಲೆಯಲ್ಲಿ ತಾವು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲ ಎಂದು ತಮ್ಮ ಅಭಿಮಾನಿಗಳಿಗೆ ತಿಳಿಸಿದ್ದರು. ಹಾಗಾಗಿ ಅಭಿಮಾನಿಗಳು ಇಂದು ಸಾಮಾಜಿಕ ಜಾಲತಾಣಗಳಲ್ಲಿ ಯಶ್ ಫೋಟೋ ಹಾಕುವುದರ ಮೂಲಕ ಹುಟ್ಟುಹಬ್ಬಕ್ಕೆ ಶುಭ ಕೋರುತ್ತಿದ್ದಾರೆ.
ಯಶ್ ಅವರು ತಂದೆಯಾದ ಬಳಿಕ ಇದು ಅವರ ಮೊದಲನೇ ಹುಟ್ಟುಹಬ್ಬವಾಗಿದ್ದು, ಭಾನುವಾರ ಯಶ್ ಟ್ವಿಟ್ಟರಿನಲ್ಲಿ ಲೈವ್ ವಿಡಿಯೋ ಮೂಲಕ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿ, ಈ ವರ್ಷ ಜನ್ಮದಿನ ಆಚರಿಸುತ್ತಿಲ್ಲ. ಅಭಿಮಾನಿಗಳು ಸಹಕಾರ ನೀಡಬೇಕೆಂದು ಮನವಿ ಮಾಡಿಕೊಂಡಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv