ಮಠ, ಎದ್ದೇಳು ಮಂಜುನಾಥ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ (Guruprasad) ಅವರ ಅಂತ್ಯಕ್ರಿಯೆ ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿದೆ. ಇದನ್ನೂ ಓದಿ:ಏಕಾಂಗಿಯಾಗಿ ಬದುಕನ್ನು ಅಂತ್ಯ ಮಾಡಿಕೊಂಡಿರೋದು ಬೇಜಾರಿನ ಸಂಗತಿ: ಮಾಳವಿಕಾ
Advertisement
ಇಂದು ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ಕುಟುಂಬಸ್ಥರಿಂದ ಗುರುಪ್ರಸಾದ್ ಅವರ ಅಂತ್ಯಕ್ರಿಯೆ ನೆರವೇರಿಸಲಾಯಿತು. ಈ ವೇಳೆ, ಯೋಗರಾಜ್ ಭಟ್, ದುನಿಯಾ ವಿಜಯ್, ಡಾಲಿ, ಸತೀಶ್ ನೀನಾಸಂ, ತಬಲಾ ನಾಣಿ ಸೇರಿದಂತೆ ಅನೇಕರು ಭಾಗಿಯಾಗಿದ್ದರು.
Advertisement
Advertisement
ಅಂದಹಾಗೆ, 1972ರಲ್ಲಿ ಕನಕಪುರದಲ್ಲಿ ಜನಿಸಿದ ಗುರುಪ್ರಸಾದ್ ರಾಮಚಂದ್ರ ಶರ್ಮಾ 2006 ರಲ್ಲಿ ತೆರೆಕಂಡ ‘ಮಠ’ ಚಿತ್ರದ ಮೂಲಕ ನಿರ್ದೇಶಕನಾಗಿ ಕನ್ನಡ ಚಿತ್ರರಂಗದಲ್ಲಿ ಸಿನಿಪಯಣ ಆರಂಭಿಸಿದರು. ಇದು ನವರಸ ನಾಯಕ ಜಗ್ಗೇಶ್‌ರ 100ನೇ ಚಿತ್ರ.
Advertisement
2009 ರಲ್ಲಿ ಇದೇ ಜೋಡಿ ‘ಎದ್ದೇಳು ಮಂಜುನಾಥ’ ಚಿತ್ರದ ಮೂಲಕ ಮತ್ತೊಂದು ಸಮಾಜಿಕ ಚಿತ್ರ ನೀಡಿತು. ಈ ಚಿತ್ರಕ್ಕೆ ಫಿಲ್ಮಫೇರ್ ಪ್ರಶಸ್ತಿ ದೊರಕಿತು. ನಂತರ ‘ಡೈರೆಕ್ಟರ್ ಸ್ಪೇಷಲ್’,’ಎರಡನೇ ಸಲ’ ಚಿತ್ರಗಳನ್ನು ನಿರ್ದೇಶಿಸಿದರು. ನಿರ್ದೇಶಕ ಮಾತ್ರವಲ್ಲದೇ ನಟನಾಗಿ ‘ಮಠ’, ‘ಎದ್ದೇಳು ಮಂಜುನಾಥ’,’ಮೈಲಾರಿ’, ‘ಹುಡುಗರು’,’ಅನಂತು v/s ನುಸ್ರತ್’ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ.
ಕಿಚ್ಚ ಸುದೀಪ್ ನಿರೂಪಣೆಯ ಕನ್ನಡ ಬಿಗ್‌ಬಾಸ್ ಅವತರಣಿಕೆಯಲ್ಲಿ ಭಾಗವಹಿಸಿದ್ದ ಇವರು ಹಲವು ರಿಯಾಲಿಟಿ ಶೋಗಳಲ್ಲಿ ತೀರ್ಪುಗಾರರಾಗಿ ಭಾಗವಹಿಸಿದ್ದಾರೆ.