‘ಎದ್ದೇಳು ಮಂಜುನಾಥ’, ‘ಮಠ’ (Mata) ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ (Guruprasad) ಅವರ ಆತ್ಮಹತ್ಯೆ (Suicide) ಸುದ್ದಿ ಚಿತ್ರರಂಗಕ್ಕೆ ಶಾಕ್ ಕೊಟ್ಟಿದೆ. ಬರ್ತ್‌ಡೇಗೂ ಮುನ್ನವೇ ಗುರುಪ್ರಸಾದ್ ಡೆತ್ ಡೇ ಮಾಡಿಕೊಂಡಿದ್ದಾರೆ. ಇದನ್ನೂ ಓದಿ:ನಟ, ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ


2009 ರಲ್ಲಿ ಇದೇ ಜೋಡಿ ‘ಎದ್ದೇಳು ಮಂಜುನಾಥ’ ಚಿತ್ರದ ಮೂಲಕ ಮತ್ತೊಂದು ಸಮಾಜಿಕ ಚಿತ್ರ ನೀಡಿತು. ಈ ಚಿತ್ರಕ್ಕೆ ಫಿಲ್ಮಫೇರ್ ಪ್ರಶಸ್ತಿ ದೊರಕಿತು. ನಂತರ ‘ಡೈರೆಕ್ಟರ್ ಸ್ಪೇಷಲ್’,’ಎರಡನೇ ಸಲ’ ಚಿತ್ರಗಳನ್ನು ನಿರ್ದೇಶಿಸಿದರು. ನಿರ್ದೇಶಕ ಮಾತ್ರವಲ್ಲದೇ ನಟನಾಗಿ ‘ಮಠ’, ‘ಎದ್ದೇಳು ಮಂಜುನಾಥ’,’ಮೈಲಾರಿ’, ‘ಹುಡುಗರು’,’ಅನಂತು v/s ನುಸ್ರತ್’ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ.
ಕಿಚ್ಚ ಸುದೀಪ್ ನಿರೂಪಣೆಯ ಕನ್ನಡ ಬಿಗ್ ಬಾಸ್ (Bigg Boss) ಅವತರಣಿಕೆಯಲ್ಲಿ ಭಾಗವಹಿಸಿದ್ದ ಇವರು ಹಲವು ರಿಯಾಲಿಟಿ ಶೋಗಳಲ್ಲಿ ತೀರ್ಪುಗಾರರಾಗಿ ಭಾಗವಹಿಸಿದ್ದಾರೆ.


