ತಮಿಳಿನ ಖ್ಯಾತ ನಟ ಕಮಲ್ ಹಾಸನ್ ನಟನೆಯ ‘ವಿಕ್ರಮ್’ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಭರ್ಜರಿ ಬೇಟೆಯಾಡಿದೆ. ಅದು ಯಾವ ಮಟ್ಟಿಗೆ ಯಶಸ್ಸು ತಂದುಕೊಟ್ಟಿದೆ ಎಂದರೆ, ಕಮಲ್ ಈವರೆಗೂ ಮಾಡಿದ್ದ ಅಷ್ಟೂ ಸಾಲವನ್ನು ತೀರಿಸಿದೆಯಂತೆ. ಅಲ್ಲದೇ, ಹಲವು ವರ್ಷಗಳ ನಂತರ ಕಮಲ್ ಅವರಿಗೆ ದೊಡ್ಡ ಮಟ್ಟದ ಯಶಸ್ಸೂ ತಂದುಕೊಟ್ಟಿದೆ. ಹಾಗಾಗಿ ಕಮಲ್ ಜೊತೆ ನಿರ್ದೇಶಕ ಲೋಕೇಶ್ ಕೂಡ ಇದೀಗ ಸ್ಟಾರ್ ಡೈರೆಕ್ಟರ್ ಆಗಿದ್ದಾರೆ.
Advertisement
ವಿಕ್ರಮ್ ಭಾರೀ ಯಶಸ್ಸಿನ ಬೆನ್ನಲ್ಲೆ ಅವರಿಗೆ ಬಾಲಿವುಡ್ ನಲ್ಲಿ ಅವಕಾಶ ಸಿಕ್ಕಿದೆ ಎಂದು ಹೇಳಲಾಗುತ್ತಿದೆ. ಅದೂ ಸಲ್ಮಾನ್ ಖಾನ್ ಸಿನಿಮಾದಲ್ಲಿ ಅನ್ನುವುದು ಮತ್ತೊಂದು ವಿಶೇಷ. ಸ್ವತಃ ಸಲ್ಮಾನ್ ಖಾನ್ ಅವರೇ ಲೋಕೇಶ್ ಅವರನ್ನು ಸಂಪರ್ಕಿಸಿ, ಮುಂದಿನ ದಿನಗಳಲ್ಲಿ ಕೆಲಸ ಮಾಡುವ ಆಹ್ವಾನ ನೀಡಿದ್ದಾರಂತೆ. ಈ ವಿಷಯ ಬಿಟೌನ್ ನಲ್ಲಿ ಭಾರೀ ಸದ್ದಂತೂ ಮಾಡುತ್ತಿದೆ. ಸಲ್ಮಾನ್ ಖಾನ್ ಕೂಡ ಓಡುವ ಕುದುರೆ ಆಗಿರುವುದರಿಂದ ಈಗಿನಿಂದಲೇ ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಾಗಿದೆ. ಇದನ್ನೂ ಓದಿ:ಅವಳಿ ಮಕ್ಕಳಿಗೆ ತಾಯಿಯಾಗಲಿದ್ದಾರಾ ಆಲಿಯಾ: ರಣ್‌ಬೀರ್ ಕೊಟ್ರು ಬ್ರೇಕಿಂಗ್ ನ್ಯೂಸ್
Advertisement
Advertisement
ವಿಕ್ರಮ್ ಸಿನಿಮಾದ ಬಹುತೇಕ ಯಶಸ್ಸನ್ನು ತನ್ನ ನಿರ್ದೇಶಕ ಮತ್ತು ಟೀಮ್ ಗೆ ಅರ್ಪಿಸಿದ್ದರು ಕಮಲ್. ದುಬಾರಿ ಕಾರನ್ನು ಉಡುಗೊರೆಯಾಗಿ ನೀಡಿದ್ದರು. ಸಹಾಯಕ ನಿರ್ದೇಶಕರಿಗೂ ಕೂಡ ಹಲವು ಉಡುಗೊರೆಯನ್ನು ನೀಡಿದ್ದರು. ಅಷ್ಟರ ಮಟ್ಟಿಗೆ ವಿಕ್ರಮ್ ಸಿನಿಮಾ ಗೆಲುವನ್ನು ದಾಖಲಿಸಿತ್ತು. ಹಾಗಾಗಿ ವಿಕ್ರಮ್ ಯಶಸ್ಸು ನಿರ್ದೇಶಕರಿಗೆ ಮತ್ತೊಂದು ಗುರುತರ ಜವಾಬ್ದಾರಿಯನ್ನು ನೀಡಿದೆ.