ಪೃಥ್ವಿರಾಜ್ ಸುಕುಮಾರನ್, ಅಮಲಾ ಪೌಲ್ (Amala Paul) ನಟನೆಯ ‘ಆಡುಜೀವಿತಂ’ ಸಿನಿಮಾ ಮಾ.28ರಂದು ರಿಲೀಸ್ ಆಗಿದೆ. ಈ ಸಿನಿಮಾ ನೋಡಿದ ಪ್ರೇಕ್ಷಕರು ಸೇರಿದಂತೆ ಹಲವು ನಟ-ನಟಿಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದೀಗ ಸೌತ್‌ನ ಲೆಜೆಂಡರಿ ಡೈರೆಕ್ಟರ್ ಮಣಿರತ್ನಂ (Maniratnam) ಅವರು ‘ಆಡುಜೀವಿತಂ’ (Aadujeevitham) ಸಿನಿಮಾ ನೋಡಿ ಹಾಡಿ ಹೊಗಳಿದ್ದಾರೆ.

ಬಳಿಕ ಮರುಭೂಮಿಯಲ್ಲಿ ಎದುರಿಸುವ ವಿವಿಧ ಕಷ್ಟಗಳನ್ನು ತೋರಿಸಿದ್ದೀರಿ. ನಿಮ್ಮ ಮತ್ತು ಸುನೀಲ್ ಕೆಲಸ ಅದ್ಭುತವಾಗಿದೆ ಎಂದು ಮಣಿರತ್ನಂ ತಂಡಕ್ಕೆ ಭೇಷ್ ಎಂದಿದ್ದಾರೆ. ಪೃಥ್ವಿರಾಜ್ ಸುಕುಮಾರನ್ ನಟನೆ ನೋಡಿ ಕೊಂಡಾಡಿದ್ದಾರೆ. ಇದು ನಿಜವಾಗಿಯೂ ಸಂಭವಿಸಿದೆ ಎಂದು ಯೋಚಿಸಲು ಭಯಾನಕವಾಗಿದೆ ಎಂದಿದ್ದಾರೆ. ಈ ಚಿತ್ರವು ಸೆಂಟಿಮೆಂಟಲ್ ಆಗಿ ಮೂಡಿ ಬಂದಿದೆ. ಚಿತ್ರದ ಫಿನಿಶಿಂಗ್ ತುಂಬಾ ಇಷ್ಟವಾಯಿತು. ಚಿತ್ರತಂಡಕ್ಕೆ ಶುಭವಾಗಲಿ ಎಂದು ಮಣಿರತ್ನಂ ತಿಳಿಸಿದ್ದಾರೆ.
ಮಣಿರತ್ನಂ ಅವರ ಬೆಂಬಲಕ್ಕೆ ಆಡುಜೀವಿತಂ ನಿರ್ದೇಶಕ ಬ್ಲೆಸ್ಸಿ ಕೂಡ ಪ್ರತಿಕ್ರಿಯಿಸಿ, ಧನ್ಯವಾದಗಳು ಸರ್ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ನಿರ್ದೇಶಕ ಬ್ಲೆಸ್ಸಿ ಶೇರ್ ಮಾಡಿದ್ದಾರೆ.
View this post on Instagram
ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಬ್ಲೆಸ್ಸಿ ನಿರ್ದೇಶನದ ಈ ‘ಆಡು ಜೀವಿತಂ’ ಚಿತ್ರದ ಕಥೆ ಇಮಿಗ್ರಟ್ಸ್ ಸುತ್ತವೇ ಸಾಗುತ್ತದೆ. ತನ್ನ ಹೊಟ್ಟೆ ಪಾಡಿಗಾಗಿ ಕೆಲಸ ಅರಸಿ ಸೌದಿ ಅರೇಬಿಯಾಗೆ ವಲಸೆ ಹೋಗುವ ನಸೀಬ್ ಮೊಹಮ್ಮದ್ ಎನ್ನುವ ಕೇರಳದ ವ್ಯಕ್ತಿ ಅಲ್ಲಿ ಅನುಭವಿಸುವ ಕಷ್ಟ, ಎದುರಿಸುವ ಸಮಸ್ಯೆ ಹೈಲೆಟ್. ಇನ್ನು ಆತನ ಪಾಸ್ಪೋರ್ಟ್ ಕಸಿದು ಆತನಿಗೆ ಕೊಡುವ ಹಿಂಸೆಗಳು ಆ ಬಿಸಿಲಿನ ಮರುಭೂಮಿಯಲ್ಲಿ ಆತ ಪಡುವ ಯಾತನೆ ಕುರಿತು ಸಾಗುವ ಕಥೆ ಇಲ್ಲಿದೆ.
ನಿರ್ದೇಶಕ ಬ್ಲೆಸ್ಸಿ ಅವರ ಹದಿನೈದು ವರ್ಷದ ಕನಸಿನ ಕಥೆ ಇದು. ಅವರ ಕಲ್ಪನೆಯ ಪಾತ್ರದಲ್ಲಿ ವಲಸಿಗ ವ್ಯಕ್ತಿಯಾಗಿ ಹೊಸ ಲುಕ್ ಮೂಲಕ ಕಾಣಿಸಿಕೊಂಡಿರುವ ಪೃಥ್ವಿರಾಜ್ ಸುಕುಮಾರನ್, ಹಲವಾರು ವರ್ಷಗಳಿಂದ ಈ ಚಿತ್ರಕ್ಕಾಗಿ ದುಡಿದಿದ್ದಾರೆ. ಇಡೀ ಚಿತ್ರತಂಡ ಹಗಲು ರಾತ್ರಿ ಎನ್ನದೆ ಚಿತ್ರದ ಔಟ್ಪುಟ್ ಗಾಗಿ ದುಡಿದಿದೆ. ಪೃಥ್ವಿರಾಜ್ ನಿರೀಕ್ಷೆಯ ಚಿತ್ರ ಇದಾಗಿದ್ದು, ಬ್ಲೆಸ್ಸಿ ನಿರ್ದೇಶನದ `ಆಡುಜೀವಿತಂ’ 2008ರಲ್ಲಿ ಬೆನ್ಯಾಮಿನ್ ಬರೆದ ಅದೇ ಹೆಸರಿನ ಮಲಯಾಳಂ ಕಾದಂಬರಿ ಸಿನಿಮಾ ಇದು.
ನಜೀಬ್ ಎಂಬ ವಲಸಿಗ ಕಾರ್ಮಿಕನ ಕಥೆಯನ್ನು ಮತ್ತು ಸೌದಿ ಅರೇಬಿಯಾದ ಮರುಭೂಮಿಯಲ್ಲಿ ಅವನು ಅನುಭವಿಸುವ ದುಃಸ್ಥಿತಿ ಮತ್ತು ಅಸಹಾಯಕತೆಯ ಕಥೆ ಚಿತ್ರದ ಸಾರಾಂಶ ಎನ್ನುತ್ತಾರೆ. ಪೃಥ್ವಿರಾಜ್ ನಜೀಬ್ ಪಾತ್ರ ನಿರ್ವಹಿಸಿದ್ದಾರೆ.
ಚಿತ್ರದ ನಜೀಬ್ ಪಾತ್ರಕ್ಕಾಗಿ ಪೃಥ್ವಿರಾಜ್ ಸಾಕಷ್ಟು ದೇಹವನ್ನು ದಂಡಿಸಿದ್ದಾರೆ. ಅವರು ಸಿನುಮಾಗಾಗಿ ಸುಮಾರು 30 ಕೆಜಿ ತೂಕ ಇಳಿಸಿಕೊಂಡಿದ್ದಾರೆ ಕಳೆದ ಚಿತ್ರ ಐದು ವರ್ಷಗಳಿಂದ ತಯಾರಾಗುತ್ತಿದೆ ಎಂಬುದು ವಿಶೇಷ. ಚಿತ್ರದ ತಾಂತ್ರಿಕ ವಿಭಾಗದಲ್ಲಿ ಎ.ಆರ್.ರೆಹಮಾನ್ ಅವರ ಸಂಗೀತ, ಸುನಿಲ್ ಕೆ.ಎಸ್ ಅವರ ಕ್ಯಾಮೆರಾ ಕೈಚಳಕ, ರೆಸುಲ್ ಪೂಕುಟ್ಟಿ ಅವರ ಸೌಂಡ್ ಡಿಸೈನ್ ಮತ್ತು ಶ್ರೀಕರ್ ಪ್ರಸಾದ್ ಅವರ ಸಂಕಲನ ಕೆಲಸವಿದೆ.





