‘ಮೈನಾ’ ಚಿತ್ರದ ನಿರ್ದೇಶಕ ನಾಗಶೇಖರ್ (Nagashekar) ಅವರು ಕಾರು ಅಪಘಾತದ (Car Accident) ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಕಾರಿನಲ್ಲಿ ಹೋಗುವಾಗ ಸ್ವಲ್ಪ ಕಣ್ಮುಚ್ಚಿದೆ ಇದರಿಂದ ಅಪಘಾತವಾಗಿದೆ ಎಂದು ನಿರ್ದೇಶಕ ‘ಪಬ್ಲಿಕ್ ಟಿವಿ’ಗೆ ಮಾತನಾಡಿದ್ದಾರೆ. ಇದನ್ನೂ ಓದಿ:ದರ್ಶನ್ ಹೊಡೆತದಿಂದಲೇ ರೇಣುಕಾಸ್ವಾಮಿ ಸಾವು? – ಆ 3 ಹೊಡೆತಗಳ ಬಗ್ಗೆ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ
ಇಂದು ಮಧ್ಯಾಹ್ನ 1:30ಕ್ಕೆ ಕಾರಿನಲ್ಲಿ ಹೋಗುತ್ತಿರುವಾಗ ಅಪಘಾತವಾಗಿದೆ. ಈ ವೇಳೆ ಓರ್ವ ಮಹಿಳೆಗೆ ಗಾಯವಾಗಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಲಾಗಿದೆ. ಅವರ ಕಾಲಿಗೆ ಸಣ್ಣದಾಗಿ ಗಾಯವಾಗಿರೋದಾಗಿ ತಿಳಿಸಿದ್ದಾರೆ. ಕಾರಿನಲ್ಲಿ ಹೋಗುವಾಗ ಸ್ವಲ್ಪ ಕಣ್ಮುಚ್ಚಿದ ಪರಿಣಾಮ ಅಪಘಾತಕ್ಕೆ ಕಾರಣವಾಯಿತು. ಕಾರು ಡ್ಯಾಮೇಜ್ ಆಗಿದೆ, ಅದು ಬಿಟ್ಟರೆ ನನಗೇನು ತೊಂದರೆ ಆಗಿಲ್ಲ ಎಂದು ನಾಗಶೇಖರ್ ಮಾತನಾಡಿದ್ದಾರೆ.
ಅಂದಹಾಗೆ, ಮೈನಾ, ಸಂಜು ವೆಡ್ಸ್ ಗೀತಾ, ಅಮರ್ ಸೇರಿದಂತೆ ಹಲವು ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದಾರೆ. ಪ್ರಸ್ತುತ `ಸಂಜು ವೆಡ್ಸ್ ಗೀತಾ 2′ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ ನಾಗಶೇಖರ್.