ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರೊಂದಿಗೆ ಮಿಲನ ಪ್ರಕಾಶ್ ಅವರು ಮತ್ತೊಂದು ಸಿನಿಮಾ ಮಾಡಲು ಮುಂದಾಗಿದ್ದಾರೆ.
ಈ ಹಿಂದೆ ತಾರಕ್ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಿದ್ದ ಪ್ರಕಾಶ್ ಅವರು ಇದೀಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರೊಂದಿಗೆ ಮತ್ತೊಂದು ಸಿನಿಮಾ ಮಾಡಬೇಕೆಂಬ ಯೋಜನೆಯಲ್ಲಿದ್ದಾರೆ. ಇಬ್ಬರು ಜೊತೆಯಲ್ಲಿ ಮಾಡುತ್ತಿರುವುದು 2 ನೇ ಸಿನಿಮಾವಾಗಿದ್ದು, ನಿದೇರ್ಶಕರಾದ ಪ್ರಕಾಶ್ ಅವರ ಸಮ್ಮುಖದಲ್ಲಿ ಚಿತ್ರದ ಕಥೆಯ ಕೆಲಸಗಳು ನಡೆಯುತ್ತಿವೆ. ಈ ಚಿತ್ರದ ಕಥೆ ವಿಭಿನ್ನ ರೀತಿಯಲ್ಲಿದ್ದು, ಬೇಗನೆ ಚಿತ್ರದ ಟೈಟಲ್ ಹಾಗೂ ಸಿನಿಮಾವನ್ನು ತಿಳಿಸುವುದಾಗಿ ಹೇಳಿದ್ದಾರೆ.
ಚಾಲೆಂಜಿಂಗ್ ದರ್ಶನ್ ಅವರಿಗೆ ಕಾರ್ ಅಪಘಾತ ಸಂಭವಿಸಿದ್ದು, ಈಗ ವಿಶ್ರಾಂತಿ ಪಡೆಯುತ್ತಿದ್ದಾರೆ. ಆದರೆ ಗಾಯದ ನೋವಿನಲ್ಲೂ ತಮ್ಮ ಕರ್ತವ್ಯವನ್ನು ನಿಭಾಯಿಸುತ್ತಿದ್ದಾರೆ.
ಸದ್ಯಕ್ಕೆ ದಚ್ಚು `ಒಡೆಯ’ ಸಿನಿಮಾದ ಒಂದು ಶೆಡ್ಯೂಲ್ ಕಂಪ್ಲೀಟ್ ಮಾಡಿದ್ದರು. ಅಪಘಾತವಾದ ಮರುದಿನದಿಂದ ಒಡೆಯ ಸಿನಿಮಾದ ಶೂಟಿಂಗ್ ಬೆಂಗಳೂರಿನಲ್ಲಿ ಶುರುವಾಗಬೇಕಿತ್ತು. ಆದ್ರೆ ಅದನ್ನು ಮುಂದೂಡಲಾಗಿತ್ತು. ಆದರೆ ವಿಶ್ರಾಂತಿಯ ಜೊತೆಗೆ `ಯಜಮಾನ’ ಚಿತ್ರದ ಡಬ್ಬಿಂಗ್ ಕೆಲಸವನ್ನು ಮುಗಿಸಿದ್ದಾರೆ. ಸಂಪೂರ್ಣವಾಗಿ ಚೇತರಿಸಿಕೊಂಡ ಬಳಿಕ ಅಂದ್ರೆ ನವೆಂಬರ್ 20ರಿಂದ ದರ್ಶನ್ ಚಿತ್ರೀಕರಣಕ್ಕೆ ಎಂಟ್ರಿಯಾಗಲಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv