ಬೆಂಗಳೂರು: ಹಸುವಿನ ಕೆಚ್ಚಲು ಕೊಯ್ದವರಿಗೆ ಕೆರದಲ್ಲಿ ಹೊಡೀಬೇಕು ಎಂದು ನಿರ್ದೇಶಕ ಪ್ರೇಮ್ (Director Prem) ಕಿಡಿಕಾರಿದ್ದಾರೆ.
ಹಸುವಿನ ಕೆಚ್ಚಲು (Cow’s Udder) ಕೊಯ್ದ ಘಟನೆ ಕುರಿತು ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ಮಕ್ಕಳು ಹುಟ್ಟಿದಾಗ ತಾಯಿ ಎದೆಹಾಲು ಕುಡಿಸಿ ಎನ್ನುತ್ತೇವೆ. ಗೋವನ್ನು ಮಾತೆ, ತಾಯಿ ಎನ್ನುತ್ತೇವೆ. ಆದರೆ ಅಂಥ ತಾಯಿ ಎದೆ ಕೊಯ್ದಿದ್ದಾನೆ. ಕರ್ನಾಟಕ ಪೊಲೀಸ್ ಸ್ಟ್ರಾಂಗ್ ಇದ್ದಾರೆ. ಅವರನ್ನು ಹಿಡಿದು ತಕ್ಕ ಶಿಕ್ಷೆ ಕೊಡಿಸುತ್ತಾರೆ. ಕಾನೂನನ್ನ ಕೈಗೆ ತೆಗೆದುಕೊಳ್ಳಬಾರದು. ಆದರೆ ಅವರು ಕೈಗೆ ಸಿಕ್ಕರೇ ಅಲ್ಲೇ ಹೊಡೆದು ಸಾಯಿಸಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಚಾಮರಾಜಪೇಟೆಯಲ್ಲಿ (Chamrajpet) ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಕಾಟನ್‌ಪೇಟೆ ಪೊಲೀಸರು (Cottonpet Police) ಬಂಧಿಸಿದ್ದಾರೆ. ಆರೋಪಿಯನ್ನು ಬಂಧಿಸಿ ಸ್ಥಳ ಮಹಜರು ನಡೆಸಿರುವ ಸೋಕೋ ಟೀಂ ತಡರಾತ್ರಿಯಿಂದಲೇ ವಿಚಾರಣೆ ಆರಂಭಿಸಿದೆ.
ಪ್ರಕರಣ ಏನು?
ಬೀದಿಯಲ್ಲಿ ಮಲಗಿದ್ದ 3 ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದಿರುವ ಘಟನೆ ಚಾಮರಾಜಪೇಟೆಯಲ್ಲಿ ಭಾನುವಾರ ನಡೆದಿದೆ. ವಿನಾಯಕ ನಗರದಲ್ಲಿ ತಡರಾತ್ರಿ ಕರ್ಣ ಎಂಬುವರಿಗೆ ಸೇರಿದ್ದ 3 ಹಸುಗಳ ಕೆಚ್ಚಲು ಕೊಯ್ದ ರಕ್ತದ ಕೋಡಿಯನ್ನೇ ಹರಿಸಿದ್ದರು. ಸದ್ಯ ಹಸುಗಳಿಗೆ ಚಾಮರಾಜಪೇಟೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಕಾಟನ್ ಪೇಟೆ ಪೊಲೀಸರು ತನಿಖೆ ಆರಂಭಿಸಿದ್ದರು.