Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:‘ಕಬ್ಜ’ ಏಳು ಭಾಷೆಯಲ್ಲ, ಒಂಭತ್ತು ಭಾಷೆಗಳಲ್ಲಿ ಬಿಡುಗಡೆ ಮಾಡುತ್ತಾರಂತೆ ನಿರ್ದೇಶಕ ಆರ್.ಚಂದ್ರು
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ‘ಕಬ್ಜ’ ಏಳು ಭಾಷೆಯಲ್ಲ, ಒಂಭತ್ತು ಭಾಷೆಗಳಲ್ಲಿ ಬಿಡುಗಡೆ ಮಾಡುತ್ತಾರಂತೆ ನಿರ್ದೇಶಕ ಆರ್.ಚಂದ್ರು

Cinema

‘ಕಬ್ಜ’ ಏಳು ಭಾಷೆಯಲ್ಲ, ಒಂಭತ್ತು ಭಾಷೆಗಳಲ್ಲಿ ಬಿಡುಗಡೆ ಮಾಡುತ್ತಾರಂತೆ ನಿರ್ದೇಶಕ ಆರ್.ಚಂದ್ರು

Public TV
Last updated: September 19, 2022 12:20 pm
Public TV
Share
3 Min Read
FotoJet 1 52
SHARE

ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಕಿಚ್ಚ ಸುದೀಪ (Sudeep) ಅಭಿನಯದ, ಆರ್ ಚಂದ್ರು ನಿರ್ದೇಶಿಸಿರುವ, ಕನ್ನಡದ ಹೆಮ್ಮೆಯ ಪ್ಯಾನ್ ಇಂಡಿಯಾ ಸಿನಿಮಾ “ಕಬ್ಜ”ದ (Kabzaa) ಟೀಸರ್ ಇತ್ತೀಚಿಗೆ ಬಿಡುಗಡೆಯಾಗಿದೆ. ದಕ್ಷಿಣ ಭಾರತದ ಖ್ಯಾತ ನಟ ರಾಣಾ ದಗ್ಗುಬಾಟಿ  “ಕಬ್ಜ” ಚಿತ್ರದ ಟೀಸರ್ ಬಿಡುಗಡೆ ಮಾಡಿದರು. ಬಿಡುಗಡೆಯಾದ ಕ್ಷಣದಿಂದಲೇ ಟೀಸರ್ ಗೆ (Teaser) ಅಪಾರ ಮೆಚ್ಚುಗೆ ವ್ಯಕ್ತವಾಗಿದ್ದು, ವೀಕ್ಷಣೆಯಲ್ಲಿ ದಾಖಲೆ ನಿರ್ಮಿಸುತ್ತಿದೆ. ಉಪೇಂದ್ರ ಸರ್ ಮುಂದೆ ನಿಂತು  ಮಾತನಾಡುವುದಕ್ಕೆ ಭಯ ಆಗತ್ತೆ. ಅಂತಹ ಅದ್ಭುತ ನಟ ಅವರು. ಖ್ಯಾತ ನಟಿ ಶ್ರೀಯಾ ಶರಣ್ ಸಹ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಆರ್ ಚಂದ್ರು ಮತ್ತು ತಂಡದ ಅದ್ಭುತ ಕೆಲಸ ಟೀಸರ್ ನಲ್ಲಿ ಕಾಣುತ್ತಿದೆ. “ಕಬ್ಜ” ಭರ್ಜರಿ ಯಶಸ್ಸು ಕಾಣಲಿ ಎಂದು ರಾಣಾ ದಗ್ಗುಬಾಟಿ ಹಾರೈಸಿದರು.

UPENDRA 1

ನನಗೆ ಆರ್ ಚಂದ್ರು ಅವರು ಕಥೆ ಹೇಳಲು ಬಂದಾಗ, ಕಥೆ ಕೇಳಿ,  ನಿಜವಾಗಿಯೂ ಈ ರೀತಿ ಮಾಡಲು ಆಗುವುದಾ? ಅಂತಾ ಕೇಳಿದ್ದೆ. ಚಿತ್ರೀಕರಣ ನಡೆಯುತ್ತಿರುವಾಗ ಚಂದ್ರು ಅವರ ಕಾರ್ಯ ವೈಖರಿ ನೋಡಿ ಆಶ್ಚರ್ಯವಾಯಿತು. ಈಗಂತೂ ಟೀಸರ್ ನೋಡಿ ಬಹಳ ಸಂತೋಷವಾಗಿದೆ. ಚಿತ್ರ ಬಿಡುಗಡೆಗೆ  ನಾನು ಕಾತುರದಿಂದ ಕಾಯುತ್ತಿದ್ದೇನೆ. ಹೆಚ್ಚಿನ ಕ್ರೆಡಿಟ್ ಚಂದ್ರು ಅವರಿಗೆ ಸೇರಬೇಕು. ಶ್ರೀಯಾ ಅವರು ಅಭಿನಯ ಕೂಡ ಚೆನ್ನಾಗಿದೆ. ಟೀಸರ್ ಬಿಡುಗಡೆ ಮಾಡಿಕೊಟ್ಟ ರಾಣಾ (Rana Daggubati) ಅವರಿಗೆ ಧನ್ಯವಾದ ಎಂದರು ರಿಯಲ್ ಸ್ಟಾರ್ ಉಪೇಂದ್ರ. ಇದನ್ನೂ ಓದಿ: ಸೋನು ಶ್ರೀನಿವಾಸ್ ಗೌಡ ಸಂಬಳ ಕೇಳಿದ್ರೆ, ನೀವೂ ಅದೇ ಕೆಲಸ ಮಾಡ್ತೀರಿ

kabzaa 1

ಈ ಚಿತ್ರದಲ್ಲಿ ಅಭಿನಯಿಸಿರುವುದಕ್ಕೆ ನನಗೆ ಖುಷಿಯಾಗಿದೆ. ಅದರಲ್ಲೂ ಸೂಪರ್ ಸ್ಟಾರ್ ಉಪೇಂದ್ರ (Upendra) ಅವರ ಜೊತೆ ನಟಿಸಿರುವುದು ಹೆಚ್ಚಿನ ಸಂತೋಷ ತಂದಿದೆ. ತುಂಬಾ ಸಹೃದಯಿ, ಸರಳವ್ಯಕ್ತಿ ಅವರು. ಚಂದ್ರು ಸರ್ ಅವರ ನಿರ್ದೇಶನದ ಬಗ್ಗೆ ಎಷ್ಟು ಹೇಳಿದರು ಕಡಿಮೆ. ನನ್ನ ಪಾತ್ರ‌ ಕೂಡ ತುಂಬಾ ಚೆನ್ನಾಗಿದೆ ಎಂದ ನಾಯಕಿ ಶ್ರೀಯಾ ಶರಣ್ (Shriya Saran), ಟೀಸರ್ ಬಿಡುಗಡೆ ಮಾಡಿದ ರಾಣಾ  ಅವರಿಗೆ ಧನ್ಯವಾದ ತಿಳಿಸಿದರು.

FotoJet 74

“ಕಬ್ಜ” ನನ್ನ ಕನಸು. ಈ ಹಿಂದೆ “ತಾಜ್ ಮಹಲ್”, ” ಚಾರ್ ಮಿನಾರ್”, “ಮೈಲಾರಿ” ನಂತಹ‌ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದೇನೆ. ಆದರೆ ಇದು ಬೇರೆಯದೆ ತರಹದ ಸಿನಿಮಾ. “ಕಬ್ಜ” ಚಿತ್ರ ಉತ್ತಮವಾಗಿ ಮೂಡಿಬಂದಿದೆ ಅಂದರೆ ಅದು ನನ್ನೊಬ್ಬನಿಂದ ಅಲ್ಲ. ಇಡೀ ತಂಡದಿಂದ. ಅದರಲ್ಲೂ ಉಪೇಂದ್ರ ಸರ್ ಅವರ ಸಹಕಾರ ಅಪಾರ. ಈ ಸಮಯದಲ್ಲಿ ಕಿಚ್ಚ ಸುದೀಪ್ ಅವರನ್ನು ನೆನಪಿಸಿಕೊಳ್ಳಬೇಕು. ನಾನು ಈ ರೀತಿಯ ಪಾತ್ರವಿದೆ ಅಂತ ಹೇಳಿದೆ. ಅವರು ಒಪ್ಪಿಕೊಂಡು ಅಭಿನಯಿಸಿದ್ದಾರೆ.

kabzaa 3 1

ಈಗಾಗಲೇ ಸಾಕಷ್ಟು ಹೆಸರು ಮಾಡಿರುವ ಶ್ರೀಯಾ ಶರಣ್ ಅವರು ಈ ಚಿತ್ರದಲ್ಲಿ ಅಭಿನಯಿಸಿರುವುದು ಹೆಚ್ಚಿನ ಖುಷಿ ತಂದಿದೆ.  ಟೀಸರ್ ಬಿಡುಗಡೆ ಮಾಡಿಕೊಡಲು ಕೇಳಿದಾಗ ಒಪ್ಪಿ ಬಂದು ಟೀಸರ್ ಬಿಡುಗಡೆ ಮಾಡಿಕೊಟ್ಟಿರುವುದಕ್ಕೆ ದಕ್ಷಿಣ ಭಾರತದ ಖ್ಯಾತ ನಟ ರಾಣಾ ದಗ್ಗುಬಾಟಿ ಅವರಿಗೆ ಹಾಗೂ ಇಂದಿನ ಸಮಾರಂಭಕ್ಕೆ ಆಗಮಿಸಿರುವ ಎಲ್ಲಾ ಅತಿಥಿಗಳಿಗೆತುಂಬು ಹೃದಯದ ಧನ್ಯವಾದ.  ನಮ್ಮ‌”ಕಬ್ಜ” ಚಿತ್ರ ಏಳು ಭಾಷೆಗಳ ಚಿತ್ರವಲ್ಲ. ಒಟ್ಟು ಒಂಭತ್ತು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಚಿತ್ರದ ಬಿಡುಗಡೆ ಸೇರಿದಂತೆ ಅನೇಕ ವಿಷಯಗಳನ್ನು ಮುಂದಿನ ದಿನಗಳಲ್ಲಿ ಹಂಚಿಕೊಳ್ಳುತ್ತೇನೆ‌ ಎಂದರು ನಿರ್ದೇಶಕ ಹಾಗೂ ನಿರ್ಮಾಪಕ ಆರ್ ಚಂದ್ರು. ಕಲಾ ನಿರ್ದೇಶಕ ಶಿವಕುಮಾರ್, ಛಾಯಾಗ್ರಾಹಕ ಎ ಜೆ ಶೆಟ್ಟಿ  ಸೇರಿದಂತೆ ಚಿತ್ರತಂಡದ ಸದಸ್ಯರು “ಕಬ್ಜ” ದ ಬಗ್ಗೆ ಮಾತನಾಡಿದರು. ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳು ಚಿತ್ರಕ್ಕೆ ಶುಭ ಕೋರಿದರು.

Live Tv
[brid partner=56869869 player=32851 video=960834 autoplay=true]

TAGGED:KabzaaRana DaggubatisandalwoodShriya Saransudeepteaserupendraಉಪೇಂದ್ರಕಬ್ಜಟೀಸರ್ರಾಣಾ ದಗ್ಗುಬಾಟಿಶ್ರೀಯಾ ಸರಣ್ಸುದೀಪ್ಸ್ಯಾಂಡಲ್ ವುಡ್
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

MK Stalin
Latest

ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌ಗೆ ಸೋಲು – ದಳಪತಿ ಅಬ್ಬರಕ್ಕೆ ಡಿಎಂಕೆ ಧೂಳಿಪಟ

Public TV
ByPublic TV
11 minutes ago
Darshan bail
Bengaluru City

ಜೈಲಲ್ಲಿ ದರ್ಶನ್‌ಗೆ ಮೂಲಸೌಕರ್ಯ – 1 ವಾರದೊಳಗೆ ವರದಿ ಸಲ್ಲಿಸಲು ಸರ್ಕಾರಕ್ಕೆ ಸುಪ್ರೀಂ ನಿರ್ದೇಶನ

Public TV
ByPublic TV
17 minutes ago
udf congress rahul gandhi
Latest

ಕೇರಳದಲ್ಲಿ ಕಾಂಗ್ರೆಸ್ ಅಬ್ಬರ: ಪಿಣರಾಯಿ ಪಲ್ಟಿ, ಯುಡಿಎಫ್ ಚಕ್ರವರ್ತಿ!

Public TV
ByPublic TV
22 minutes ago
Vijay Car Driver
Latest

ವಿಜಯ್‌ ಕಾರು ಚಾಲಕನ ಪುತ್ರನಿಗೆ ಖುಲಾಯಿಸಿದ ಅದೃಷ್ಟ – ಗೆಲುವಿನ ಸನಿಹದತ್ತ ಶಬರಿನಾಥನ್‌

Public TV
ByPublic TV
47 minutes ago
R Ashok 3
Bengaluru City

ಬಂಗಾಳ ಫಲಿತಾಂಶದಿಂದ ಬಾಂಗ್ಲಾ, ಪಾಕಿಸ್ತಾನಕ್ಕೆ ಆಘಾತ: ಆರ್.ಅಶೋಕ್

Public TV
ByPublic TV
49 minutes ago
bjp flag
Latest

ಕಳೆದ ಬಾರಿ ಶೂನ್ಯ – ಈ ಬಾರಿ ಕೇರಳದಲ್ಲಿ ಖಾತೆ ತೆರೆದ ಬಿಜೆಪಿ

Public TV
ByPublic TV
57 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?