ರಿಷಬ್ ಶೆಟ್ಟಿ (Rishabh Shetty) ನಟನೆಯ ಕಾಂತಾರ (Kantara) ಸಿನಿಮಾ ದೇಶ-ವಿದೇಶಗಳಲ್ಲಿ ಭರ್ಜರಿ ಪ್ರದರ್ಶನ ಕಾಣ್ತಿದೆ. ಆದರೆ ಇದಕ್ಕೆ ವ್ಯತಿರಿಕ್ತವಾಗಿ ಪ್ರತಿಕ್ರಿಯಿಸಿರುವ ನಟ ಚೇತನ್ ಅಹಿಂಸಾ (Chetan Ahimsa) ಭೂತಕೋಲವು ಹಿಂದೂ ಸಂಸ್ಕೃತಿಯಲ್ಲ ಎಂದು ಹೇಳಿದ್ದಾರೆ.
ಕಾಂತಾರ ಕನ್ನಡ ಭಾಷೆಯಲ್ಲಿ ಮಾತ್ರವಲ್ಲದೇ ತಮಿಳು, ತೆಲುಗು ಹಾಗೂ ಹಿಂದಿ ಭಾಷೆಯಲ್ಲೂ ಯಶಸ್ವಿ ಪ್ರದರ್ಶನ ಕಾಣ್ತಿದ್ದು, ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಕೇವಲ ಸ್ಯಾಂಡಲ್ ವುಡ್‌ಗೆ ಮಾತ್ರ ಸೀಮಿತ ಆಗಿದ್ದ ರಿಷಬ್, `ಕಾಂತಾರ’ದ ಕಾಂತಿಯಿಂದ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿದ್ದಾರೆ. ಹಾಗಾಗಿ ಅಭಿಮಾನಿಗಳು ತಮ್ಮ ನೆಚ್ಚಿನ ನಟ, ನಿರ್ದೇಶಕನಿಗೆ `ಡಿವೈನ್ ಸ್ಟಾರ್’ ಎಂದು ಬಿರುದು ಕೊಟ್ಟಿದ್ದು, ಅದೇ ಹೆಸರಿನಿಂದ ಕರೆಯುತ್ತಿದ್ದಾರೆ. ಇದನ್ನೂ ಓದಿ: ‘ಕಾಂತಾರ’ ನಂತರ ರಿಷಬ್ ಶೆಟ್ಟಿಗೆ ಹೊಸ ಬಿರುದು: ಡಿವೈನ್ ಸ್ಟಾರ್ ಎಂದ ಫ್ಯಾನ್ಸ್
`ಕಾಂತಾರ’ (Kantara) ಕುರಿತು ವ್ಯತಿರಿಕ್ತವಾಗಿ ಪ್ರತಿಕ್ರಿಯಿಸಿರುವ ನಟ ಚೇತನ್ ಅಹಿಂಸಾ (Chetan Ahimsa), ನಮ್ಮ ಕನ್ನಡದ ಚಲನಚಿತ್ರ `ಕಾಂತಾರ’ವು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಖುಷಿಯ ಸಂಗತಿ. ಭೂತಕೋಲವು ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ನಿರ್ದೇಶಕ ರಿಷಬ್ ಶೆಟ್ಟಿಯವರು ಹೇಳಿದ್ದಾರೆ. ಇದು ನಿಜವಲ್ಲ. ನಮ್ಮ ಪಂಬದ/ನಲಿಕೆ/ಪರವರ ಬಹುಜನ ಸಂಪ್ರದಾಯಗಳು, ವೈದಿಕ-ಬ್ರಾಹ್ಮಣ್ಯದ ಹಿಂದೂ ಧರ್ಮಕ್ಕಿಂತ ಹಿಂದಿನಿಂದ ಇರುವವು. ಮೂಲನಿವಾಸಿ ಸಂಸ್ಕೃತಿಗಳನ್ನು ಪರದೆಯ ಮೇಲೆಯಾಗಲಿ, ಅದರಾಚೆಯಾಗಲಿ, ಸತ್ಯ ಸಂಗತಿಗಳೊಂದಿಗೆ ತೋರಿಸಬೇಕೆಂದು ನಾವು ಕೇಳುತ್ತೇವೆ ಎಂದು ತಮ್ಮ ಫೇಸ್‌ಬುಕ್ ಪುಟದಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ‘ಬಿಗ್ ಬಾಸ್ ಸೀಸನ್ 9’ರ ಮೊದಲ ಮಹಿಳಾ ಕ್ಯಾಪ್ಟನ್ ಆಗಿ ದೀಪಿಕಾ ದಾಸ್ ಆಯ್ಕೆ
ಕಾಂತಾರ ಸಿನಿಮಾ ದೇಶಾದ್ಯಂತ ಜನಪ್ರಿಯತೆ ಗಳಿಸಿದೆ. ಸಿನಿಮಾವನ್ನು ಸ್ಟಾರ್ ಕಲಾವಿದರು ಕೂಡ ನೋಡಿದ್ದಾರೆ, ನೋಡಲು ಕಾಯುತ್ತಿದ್ದಾರೆ. ಬಾಲಿವುಡ್ (Bollywood) ಖ್ಯಾತ ನಟಿ ಕಂಗನಾ ರಣಾವತ್ ಕೂಡ ಕಾಂತಾರ ಸಿನಿಮಾ ನೋಡುವುದಾಗಿ ಹೇಳಿದ್ದಾರೆ.