ರಜನಿಯ ‘ಜೈಲರ್’ ಸಿನಿಮಾ ವಿರುದ್ಧ ನಿರ್ದೇಶಕ ಸಕ್ಕಿರ್ ಪ್ರತಿಭಟನೆ

Public TV
1 Min Read
Jailer

ಮೂರು ಭಾಷೆಗಳಲ್ಲಿ ತಯಾರಾಗಿ ಮುಂದಿನ ವಾರದಲ್ಲಿ ಬಿಡುಗಡೆ ಆಗಲಿರುವ ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ಮತ್ತು ಕನ್ನಡದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕಾಂಬಿನೇಷನ್ ನ ಜೈಲರ್ ಸಿನಿಮಾದ ವಿರುದ್ಧ ಮಲಯಾಳಂ (Malayalam) ನಿರ್ದೇಶಕರೊಬ್ಬರು ಬೀದಿಗೆ ಇಳಿದು ಪ್ರತಿಭಟನೆ (Protest) ಮಾಡುತ್ತಿದ್ದಾರೆ. ಜೈಲರ್ ಸಿನಿಮಾವನ್ನು ಕೇರಳದಲ್ಲಿ ಬಿಡುಗಡೆ ಮಾಡಿದರೆ, ಆ ಟೈಟಲ್ ಅನ್ನು ಬದಲಾಯಿಸಿ ಎಂದು ಅವರು ಒತ್ತಾಯ ಮಾಡಿದ್ದಾರೆ.

jailer 1

ಮಲಯಾಳಂನಲ್ಲಿ ಈಗಾಗಲೇ ನಿರ್ದೇಶಕ ಸಕ್ಕಿರ್ ಮಡತ್ತಿಲ್ಲ (Sakkir Madattilla) ‘ಜೈಲರ್’ ಹೆಸರಿನಲ್ಲಿ ಸಿನಿಮಾ ಮಾಡಿದ್ದಾರೆ. ಅದು ಕೂಡ ಬಿಡುಗಡೆಗೆ ಸಿದ್ಧವಾಗಿದೆ. ಮಲಯಾಳಂನಲ್ಲಿ ರಜನಿ ಜೈಲರ್ ಸಿನಿಮಾ ಕೂಡ ಬಿಡುಗಡೆ ಆಗುತ್ತಿರುವುದರಿಂದ, ಮಲಯಾಳಂನಲ್ಲಿ ಟೈಟಲ್ ಬದಲಾಯಿಸಿ ರಿಲೀಸ್ ಮಾಡುವಂತೆ ಅವರು ಮನವಿ ಮಾಡಿಕೊಂಡಿದ್ದರು. ಆದರೆ, ಅದು ಆಗುವುದಿಲ್ಲ ಎಂದು ಸನ್ ಪಿಕ್ಚರ್ ನಿರ್ಮಾಣ ಸಂಸ್ಥೆ ಉತ್ತರ ಬರೆದಿತ್ತು. ಇದನ್ನೂ ಓದಿ:ಎಂಗೇಜ್‌ಮೆಂಟ್ ಸಂಭ್ರಮದಲ್ಲಿ ನಿರ್ಮಾಪಕ ಅನುರಾಗ್ ಕಶ್ಯಪ್ ಪುತ್ರಿ ಆಲಿಯಾ

jailer 2

ನಂತರ ಸಕ್ಕಿರ್ ಮಡತ್ತಿಲ್ಲ ತಮಿಳಿನ ಜೈಲರ್ ಸಿನಿಮಾದ ವಿರುದ್ಧ ಕೋರ್ಟ್ ಮೆಟ್ಟಿಲು ಏರಿದ್ದರು. ಜೊತೆ ಜೊತೆಗೆ ರಜನಿಕಾಂತ್ ನಟನೆಯ ಜೈಲರ್ ಸಿನಿಮಾ ರಿಲೀಸ್ ದಿನವೇ ಮಲಯಾಳಂನಲ್ಲಿ ತಮ್ಮ ಜೈಲರ್ ಚಿತ್ರವನ್ನು ರಿಲೀಸ್ ಮಾಡುವುದಾಗಿ ಘೋಷಿಸಿದ್ದರು. ಆದರೆ, ಇದೀಗ ಮಲಯಾಳಂ ಫಿಲ್ಮ್ ಚೇಂಬರ್ ವಿರುದ್ಧ ಪ್ರತಿಭಟನೆಗೆ ಕೂತಿದ್ದಾರೆ.

 

ಸೂಪರ್‌ಸ್ಟಾರ್ ರಜನಿಕಾಂತ್ (Rajinikanth) ನಟನೆಯ ‘ಜೈಲರ್’ (Jailer) ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದು. ತಲೈವ ವೃತ್ತಿ ಬದುಕಿನ ವಿಶೇಷ ಚಿತ್ರ‌ ಇದಾಗಿದ್ದು, ದಕ್ಷಿಣ ಭಾರತ ಹಾಗೂ ಬಾಲಿವುಡ್‌ ದಿಗ್ಗಜರು‌ ಜೈಲರ್ ಸಿನಿಮಾದ ಭಾಗವಾಗಿದ್ದಾರೆ. ಸದ್ಯ ಕಾವಾಲಾಯ್ಯ ಹಾಡಿನ ಮೂಲಕ ಭಾರೀ ಸೆನ್ಸೇಷನ್ ಸೃಷ್ಟಿಸುತ್ತಿರುವ ಈ ಚಿತ್ರ ಆಗಸ್ಟ್ 10ಕ್ಕೆ ಕನ್ನಡ, ತಮಿಳು ಹಾಗೂ ತೆಲುಗು ಭಾಷೆಯಲ್ಲಿ ಬೆಳ್ಳಿತೆರೆಗೆ ಎಂಟ್ರಿ ಕೊಡುತ್ತಿದೆ.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article