ಶಾಲಾ ಮಕ್ಕಳು ಲೈಂಗಿಕ ಶಿಕ್ಷಣವನ್ನು ಕಲಿಯುವುದರ ಅವಶ್ಯಕತೆ ಇದೆ. ಶಾಲಾ ಪಠ್ಯಕ್ರಮದ ಭಾಗವಾಗಿ ಲೈಂಗಿಕ ಶಿಕ್ಷಣವನ್ನು ಸೇರ್ಪಡೆ ಮಾಡುವುದರ ಬಗ್ಗೆ ಕೇರಳ ಹೈಕೋರ್ಟ್ ಅಭಿಪ್ರಾಯ ವ್ಯಕ್ತ ಪಡಿಸಿರುವ ತಮಿಳಿನ ಖ್ಯಾತ ನಿರ್ದೇಶಕ ವೆಟ್ರಿಮಾರನ್, ಇದನ್ನು ತಮಿಳುನಾಡಿನಲ್ಲೂ ಜಾರಿಗೊಳಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ. ವಿಶ್ವ ಲೈಂಗಿಕ ಆರೋಗ್ಯ ದಿನ ಸಂದರ್ಭದಲ್ಲಿ ಮಾತನಾಡಿದ ಅವರು ಸಲಿಂಗ ವಿವಾಹವನ್ನೂ ಬೆಂಬಲಿಸುವುದಾಗಿ ಘೋಷಿಸಿದ್ದಾರೆ.
Advertisement
ಬಾಂಗ್ಲಾದೇಶದ ಮಹಿಳೆ ಮತ್ತು ತಮಿಳುನಾಡಿನ ಮಹಿಳೆಯ ನಡುವೆ ನಡೆದ ಮದುವೆಯನ್ನು ಉದಾಹರಣೆಯಾಗಿ ತಗೆದುಕೊಂಡ ಅವರು ಇಂತಹ ಮದುವೆಯನ್ನು ನಾಗರೀಕ ಸಮಾಜ ಪ್ರೋತ್ಸಾಹಿಸಬೇಕು ಎಂದು ಅವರು ಮನವಿ ಮಾಡಿದರು. ಅಲ್ಲದೇ, ತಮಿಳುನಾಡಿನ ಸುಭಿಕ್ಷಾ ಸುಬ್ರಮಣಿ ಹಾಗೂ ಟೀನಾ ದಾಸ್ ಸಲಿಂಗಿಗಳು ತಮಿಳು ಸಾಂಪ್ರದಾಯಿಕ ಶೈಲಿಯಲ್ಲಿ ಮದುವೆಯಾಗಿದ್ದನ್ನೂ ಅವರು ನೆನಪಿಸಿಕೊಂಡರು. ಇದನ್ನೂ ಓದಿ: ಮತ್ತೆ ಶುರುವಾಯ್ತು ಬಾಲಿವುಡ್ ಬಾಯ್‌ಕಾಟ್ ಟ್ರೆಂಡ್: `ಬ್ರಹ್ಮಾಸ್ತ್ರʼ ಚಿತ್ರಕ್ಕೆ ವಿರೋಧ
Advertisement
Advertisement
ಪ್ರತಿಯೊಬ್ಬರೂ ತಮ್ಮ ತಮ್ಮ ಹಕ್ಕುಗಳನ್ನು ಪಡೆದುಕೊಂಡು ಬದುಕಬೇಕು. ತೃತಿಯ ಲಿಂಗಿಗಳಿಗೆ ತಮ್ಮದೇ ಆದ ಬದುಕಿನ ಹಕ್ಕು ನೀಡುವಂತೆ ಕರೆಕೊಟ್ಟ ವೆಟ್ರಿಮಾರನ್, ಲೈಂಗಿಕ ಶಿಕ್ಷಣದ ಬಗ್ಗೆ ಒತ್ತು ನೀಡುವಂತೆ ಅವರು ಕೇಳಿಕೊಂಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಮದ್ರಾಸ್ ಹೈಕೋರ್ಟ್ ನಿವೃತ್ತ ನ್ಯಾಯಾಧೀಶರು ಸೇರಿದಂತೆ ಹಲವು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.