‘ಕಾಡಿಮಿ ಕಿಲಾಡಿಗಳು’ ಖ್ಯಾತಿಯ ರಾಕೇಶ್ ಪೂಜಾರಿ (Rakesh Poojari) ಅವರ ನಿಧನಕ್ಕೆ ನಿರ್ದೇಶಕ ಯೋಗರಾಜ್ ಭಟ್ (Yogaraj Bhat) ಸಂತಾಪ ಸೂಚಿಸಿದ್ದಾರೆ. ಅವನ ಅಕಾಲಿಕ ಮರಣ ತುಂಬಾ ನೋವು ತಂದಿದೆ ಎಂದು ಕಂಬಿನಿ ಮಿಡಿದಿದ್ದಾರೆ. ಇದನ್ನೂ ಓದಿ:ರಾಕೇಶ್ ಸಾವಿನ ಸುದ್ದಿ ಅರಗಿಸಿಕೊಳ್ಳೋಕೆ ಆಗ್ತಿಲ್ಲ: ‘ಬಿಗ್ ಬಾಸ್’ ಲೋಕೇಶ್ ಭಾವುಕ
‘ಕಾಮಿಡಿ ಕಿಲಾಡಿಗಳು 3’ರ ತೀರ್ಪುಗಾರರಾಗಿದ್ದ ಯೋಗರಾಜ್ ಭಟ್ ಅವರು ರಾಕೇಶ್ ಜೊತೆಗಿನ ಒಡನಾಟದ ಬಗ್ಗೆ ‘ಪಬ್ಲಿಕ್ ಟಿವಿ’ಗೆ ಮಾತನಾಡಿ, ರಾಕೇಶ್ ನಟನೆಯನ್ನು ಹತ್ತಿರದಿಂದ ನೋಡಿದ್ದೇವೆ. ಅವರ ಸಾವಿನ ಸುದ್ದಿ ಕೇಳಿದಾಗ ಅದನ್ನು ಅರಗಿಸಿಕೊಳ್ಳೋಕೆ ಅರ್ಧ ಗಂಟೆ ಬೇಕಾಯಿತು. ಯಾವುದೇ ಹಿನ್ನೆಲೆ ಇಲ್ಲದೇ ಚಿತ್ರರಂಗಕ್ಕೆ ಬಂದಿರೋ ವ್ಯಕ್ತಿ. ಕರಾವಳಿಯಿಂದ ಬಂದಂತಹ ಅಪ್ರತಿಮ ಕಲಾವಿದ. ನಮ್ಮ ಸೆಟ್‌ನಲ್ಲಿ ಅವರನ್ನು ಮುದ್ದಿನ ನಟನಾಗಿ ಆರೈಕೆ ಮಾಡುತ್ತಿದ್ವಿ. ಅವರ ಮೇಲೆ ವಿಶೇಷ ಅಕ್ಕರೆ ಇತ್ತು. ‘ಕಾಮಿಡಿ ಕಿಲಾಡಿಗಳು’ ಗೆದ್ದಾಗ ಖುಷಿಪಟ್ಟಿದ್ದ ಎಂದಿದ್ದಾರೆ. ಇದನ್ನೂ ಓದಿ:ರಾಕೇಶ್ ಗುಣ ಮಗುವಿನಂತೆ – ಬಿಕ್ಕಿ ಬಿಕ್ಕಿ ಅತ್ತ ದಿವ್ಯಾಶ್ರೀ


ಇಂದು ಬೆಳಗ್ಗಿನ ಜಾವ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ಸಂಜೆ ಹುಟ್ಟೂರು ಉಡುಪಿಯಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ.


