ಸ್ಮಗ್ಲಿಂಗ್ ಅಡ್ಡಗಳ ಮೇಲೆ ದಾಳಿ- 16.5 ಕೋಟಿ ರೂ. ಮೌಲ್ಯದ ಚಿನ್ನ ವಶ

Public TV
1 Min Read
GOLD BARS

ಕೋಲ್ಕತ್ತಾ: ಚಿನ್ನವನ್ನು ಸಾಗಿಸುತ್ತಿದ್ದ ಅಡ್ಡಗಳ ಮೇಲೆ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ದಾಳಿ ನಡೆಸಿ, 16.5 ಕೋಟಿ ರೂ. ಮೌಲ್ಯದ 42 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ 10 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಒಟ್ಟು 42 ಕೆಜಿ ಚಿನ್ನದಲ್ಲಿ 500 ಗ್ರಾಂ ಆಭರಣ ಚಿನ್ನವಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ದೂರು ಬಂದ ಹಿನ್ನೆಲೆ ಕೋಲ್ಕತ್ತಾದ ವಿವಿಧ ಸ್ಥಳಗಳಲ್ಲಿರುವ ಆರೋಪಿಗಳ ಮನೆ ಮೇಲೆ ದಾಳಿ ಮಾಡಿ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಚಿನ್ನವನ್ನು ಬಾಂಗ್ಲಾದೇಶದಿಂದ ಭಾರತಕ್ಕೆ ಆಮದು ಮಾಡಿಕೊಳ್ಳುತ್ತಿದ್ದರು ಎಂದು ಡಿಆರ್‌ಐ ಅಧಿಕಾರಿಗಳು ತಿಳಿಸಿದ್ದಾರೆ.

DRI CBIC CGST Customs directorate of revenue intelligence

ಹೆಚ್ಚಿನ ತನಿಖೆಯನ್ನು ಮುಂದುವರಿಸಿದ್ದು, ಕೋಲ್ಕತ್ತಾದಲ್ಲಿ ಮಾತ್ರವಲ್ಲದೆ ರಾಯಪುರ, ಮುಂಬೈನಲ್ಲಿಯೂ ಸಹ ಸ್ಮಗ್ಲಿಂಗ್ ಮಾಡಿದ್ದ ಚಿನ್ನವನ್ನು ವಶಪಡಿಸಿಕೊಂಡಿದ್ದೇವೆ. ಈ ಎರಡು ನಗರಗಳಿಂದ ಮೂವರನ್ನು ಬಂಧಿಸಲಾಗಿದೆ ಎಂದು ಡಿಆರ್‌ಐ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಡಿಆರ್‍ಐ ಅಧಿಕಾರಿಗಳು ಸ್ಮಗ್ಲಿಂಗ್ ಮಾಡುತ್ತಿದ್ದ 219 ಕೆಜಿಗೂ ಅಧಿಕ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *