– ಮೈಸೂರಿಗೆ ಸತೀಶ್ ತಿಪಟೂರು, ಧಾರವಾಡಕ್ಕೆ ರಾಜು ತಾಳಿಕೋಟೆ
ಬೆಂಗಳೂರು: ರಾಜ್ಯದ ಆರು ರಂಗಾಯಣಗಳಿಗೆ (Rangayana) ನಿರ್ದೇಶಕರನ್ನು ನೇಮಕ ಮಾಡಿ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ (Shivaraj Tangadagi) ಘೋಷಣೆ ಮಾಡಿದ್ದಾರೆ.
Advertisement
Advertisement
ಮೈಸೂರು ರಂಗಾಯಣದ ನಿರ್ದೇಶಕರಾಗಿ ಸತೀಶ್ ತಿಪಟೂರು, ಧಾರವಾಡ ರಂಗಾಯಣ – ರಾಜು ತಾಳಿಕೋಟೆ, ಶಿವಮೊಗ್ಗ ರಂಗಾಯಣ – ಪ್ರಸನ್ನ ಡಿ. ಸಾಗರ, ಕಲಬುರ್ಗಿ ರಂಗಾಯಣ – ಡಾ. ಸುಜಾತ ಜಂಗಮ ಶೆಟ್ಟಿ, ವೃತ್ತಿ ರಂಗಭೂಮಿ ರಂಗಾಯಣ, ದಾವಣಗೆರೆ – ಮಲ್ಲಿಕಾರ್ಜುನ ಕಡಕೋಳ ಅವರನ್ನು ನೇಮಕ ಮಾಡಲಾಗಿದೆ. ಯಕ್ಷರಂಗಾಯಣ, ಕಾರ್ಕಳದ ನಿರ್ದೇಶಕರಾಗಿ ವೆಂಕಟರಮಣ ಐತಾಳ ಅವರನ್ನು ನೇಮಿಸಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ. ಇದನ್ನೂ ಓದಿ: ನನಗೆ ಕಾರು, ಗನ್ ಮ್ಯಾನ್ ಕೊಟ್ಟಿಲ್ಲ, ಏನಾದ್ರೂ ಆದ್ರೆ ಸರ್ಕಾರವೇ ಹೊಣೆ: ಛಲವಾದಿ ನಾರಾಯಣಸ್ವಾಮಿ
Advertisement
Advertisement
ಈ ಸಂಬಂಧ ಅಧಿಕೃತ ಸರ್ಕಾರಿ ಆದೇಶವನ್ನು ಹೊರಡಿಸಲಾಗಿದೆ. ನಿರ್ದೇಶಕರು ಅಧಿಕಾರ ವಹಿಸಿಕೊಂಡ ಕೂಡಲೇ ರಂಗಾಯಣಗಳ ಕಾರ್ಯ ಚಟುವಟಿಕೆಗಳನ್ನು ವೇಗಗತಿಯಲ್ಲಿ ಕೈಗೊಳ್ಳಲು ಹಾಗೂ ರಂಗಭೂಮಿಯ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ವಿವಿಧ ಅಕಾಡೆಮಿಗಳಲ್ಲಿ ಖಾಲಿ ಇದ್ದ ಸದಸ್ಯರ ನೇಮಕಾತಿ ಆದೇಶವನ್ನು ಸಹ ಹೊರಡಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಕೆಸೆಟ್ ಪರೀಕ್ಷೆ – ಅರ್ಹತೆ ಪಡೆದವರಿಗೆ ಆ.17ರಂದು ದಾಖಲೆ ಪರಿಶೀಲನೆ: ಕೆಇಎ