ಬೆಳಗಾವಿ: ಬಜೆಟ್‌ನಲ್ಲಿ (Karnataka Budget 2024) ಚಿಕ್ಕೋಡಿ (Chikkodi )ಪ್ರತ್ಯೇಕ ಜಿಲ್ಲೆಯಾಗುವ ನಿರೀಕ್ಷೆಯಲ್ಲಿದ್ದ ಜನರಿಗೆ ನಿರಾಸೆಯಾಗಿದೆ. ಈ ಸಲುವಾಗಿ ಚಿಕ್ಕೋಡಿಯಲ್ಲಿ ಹೋರಾಟ ಸಮಿತಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಳೆದ 30 ವರ್ಷಗಳಿಂದ ಸತತವಾಗಿ ಹೋರಾಟ ಮಾಡಿದರೂ ಸರ್ಕಾರ ಸ್ಪಂದಿಸುವ ಕೆಲಸ ಮಾಡಿಲ್ಲ. ಚಳಿಗಾಲದ ಅಧಿವೇಶನದಲ್ಲಿ ಪ್ರತ್ಯೇಕ ಜಿಲ್ಲೆ ಘೋಷಣೆ ಆಗುತ್ತೆ ಎಂಬ ನಿರೀಕ್ಷೆ ಇತ್ತು. ಜಿಲ್ಲೆಯ ವಿಭಜನೆ ಆಗದೇ ಇರುವುದು ಚಿಕ್ಕೋಡಿ ಭಾಗದ ಜನರ ನಿರೀಕ್ಷೆಯನ್ನು ಹುಸಿಯಾಗಿಸಿದೆ ಎಂದು ಹೋರಾಟಗಾರರು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ರಾಜ್ಯದ ಅಭಿವೃದ್ಧಿಯನ್ನು 20 ವರ್ಷ ಹಿಂದಕ್ಕೆ ಕೊಂಡೊಯ್ಯುವ ಬಜೆಟ್: ವಿಜಯೇಂದ್ರ ವಾಗ್ದಾಳಿ
Advertisement
Advertisement
ಮುಂದಿನ ದಿನಗಳಲ್ಲಿ ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ಹೋರಾಟ ಅನಿವಾರ್ಯವಾಗಿದೆ. ಇನ್ನು ಮುಂದೆ ಜನ ಪ್ರತಿನಿಧಿಗಳು ಜಿಲ್ಲಾ ವಿಭಜನೆ ಕುರಿತು ಮಾತನಾಡಬಾರದು. ಮಾತನಾಡಿದರೆ ಅಂತವರ ವಿರುದ್ಧ ಧಿಕ್ಕಾರ ಕೂಗುವ ಕೆಲಸ ಮಾಡುತ್ತೇವೆ. ಜನ ಪ್ರತಿನಿಧಿಗಳ ಮನೆ ಮುಂದೆ ಪ್ರತಿಭಟನೆ ಮಾಡುವ ಕೆಲಸ ಮಾಡುತ್ತೇವೆ ಎಂದು ಹೋರಾಟ ಸಮಿತಿ ಸದಸ್ಯರು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಮೈಸೂರು ಏರ್‌ಪೋರ್ಟ್ ರನ್‌ವೇ ವಿಸ್ತರಣೆಗೆ ಅನುದಾನ ಘೋಷಣೆ – ತವರು ಜಿಲ್ಲೆಗೆ ಸಿಎಂ ಕೊಡುಗೆ ಏನು?