– ಸೈಬರ್ ಅಪರಾಧ ವಿಭಾಗಕ್ಕೆ 5 ಕೋಟಿ ರೂ.
ಬೆಂಗಳೂರು: ರಾಜ್ಯವು ನಕ್ಸಲ್ ಮುಕ್ತವಾಗಿರುವುದರಿಂದ ನಕ್ಸಲ್ ನಿಗ್ರಹ ಪಡೆಯನ್ನು (Anti Naxal Force) ವಿಸರ್ಜನೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ (Siddaramaiah) ಘೋಷಿಸಿದ್ದಾರೆ.
Advertisement
ದಾಖಲೆಯ 16ನೇ ಬಜೆಟ್ ಮಂಡಿಸಿದ ಸಿಎಂ, ನಮ್ಮ ಸರ್ಕಾರದ ಅವಧಿಯಲ್ಲಿ 6 ಜನ ಭೂಗತ ನಕ್ಸಲರು ನಕ್ಸಲ್ ಶರಣಾಗತಿ ಮತ್ತು ಪುನರ್ವಸತಿ ಯೋಜನೆ ಸಮಿತಿಯ ಮುಂದೆ ಶರಣಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಕ್ಸಲ್ ನಿಗ್ರಹ ದಳ ವಿಸರ್ಜನೆ ಮಾಡುವುದಾಗಿ ಹೇಳಿದ್ದಾರೆ. ಇದನ್ನೂ ಓದಿ: ಪ್ರಾಜೆಕ್ಟ್ ಮೆಜೆಸ್ಟಿಕ್ – ಹೈಟೆಕ್ ಆಗಲಿದೆ ಬಸ್ ನಿಲ್ದಾಣ
Advertisement
ಶರಣಾಗಿರುವ ನಕ್ಸಲರನ್ನು ಮುಖ್ಯವಾಹಿನಿಗೆ ಸೇರ್ಪಡೆಗೊಳಿಸಲು, ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಮೂಲಸೌಕರ್ಯ ಒದಗಿಸಲು 10 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ರೂಪಿಸುವುದಾಗಿ ತಿಳಿಸಿದರು. ಇದನ್ನೂ ಓದಿ: ಸ್ಕೂಟಿಯಿಂದ ಹಣ ಕದ್ದು ಕಳ್ಳರು ಪರಾರಿ – 1.40 ಲಕ್ಷ ಹಣ ಕಳ್ಳತನ
Advertisement
Advertisement
ಸೈಬರ್ ಅಪರಾಧ ವಿಭಾಗಕ್ಕೆ 5 ಕೋಟಿ ರೂ.:
ರಾಜ್ಯದಲ್ಲಿ ಹೆಚ್ಚುತ್ತಿರುವ ಸೈಬರ್ ಅಪರಾಧ ಮತ್ತು ಮಾದಕದ್ರವ್ಯ ಬಳಕೆ ಮತ್ತು ವ್ಯಾಪಾರದ ವಿರುದ್ಧ ಕಠಿಣಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಮಾದಕ ದ್ರವ್ಯ ಮತ್ತು ಸೈಬರ್ ಅಪರಾಧ ವಿಭಾಗವನ್ನು ಬಲಗೊಳಿಸಲು 5 ಕೋಟಿ ರೂ. ಅನುದಾನ ನೀಡುವುದಾಗಿ ಸಿಎಂ ಘೋಷಿಸಿದ್ದಾರೆ. ಇದನ್ನೂ ಓದಿ: ಅಭಿವೃದ್ಧಿಯ ಬಜೆಟ್ ಇದು, ಗ್ಯಾರಂಟಿ ಮೀರಿ ಅಭಿವೃದ್ಧಿಗೆ ಒತ್ತು ಕೊಟ್ಟಿದ್ದೇನೆ: ಸಿಎಂ