ಹುಬ್ಬಳ್ಳಿ: ಬಿಜೆಪಿಯಲ್ಲಿ (BJP) ಶಿಸ್ತು ಹೋಗಿದೆ. ಕಾಂಗ್ರೆಸ್ (Congress) ಗಾಳಿ ನಮ್ಮ ಮೇಲೂ ಬಂದಿದೆ. ವಲಸಿಗರಿಂದ (Immigrants) ಬಿಜೆಪಿ ಹಾಳಾಗುತ್ತಿದೆ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ (KS Eshwarappa) ಕಾಂಗ್ರೆಸ್‌ನಿಂದ ವಲಸೆ ಬಂದವರ ಮೇಲೆ ವಾಗ್ದಾಳಿ ನಡೆಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಈಶ್ವರಪ್ಪ, ಕಾಂಗ್ರೆಸ್ ನಾಯಕರನ್ನು ಕರೆದುಕೊಂಡು ಬಂದಿದ್ದಕ್ಕೆ ನಾವು ಈಗ ಅನುಭವಿಸುತ್ತಿದ್ದೇವೆ. ಕಾಂಗ್ರೆಸ್ ನಾಯಕರು ಬಂದ ಮೇಲೆ ಅಲ್ಪ ಸ್ವಲ್ಪ ಅಶಿಸ್ತು ಬಂದಿದ್ದು ನಿಜ. ಆಪರೇಷನ್ ಕಮಲವೇ ಬಿಜೆಪಿ ಸೋಲಿಗೆ ಮುಳುವಾಯ್ತು. ಮುಂದೆ ನಮ್ಮ ನಾಯಕರು ಬಾಲ ಕಟ್ ಮಾಡ್ತಾರೆ ಎಂದು ಈಶ್ವರಪ್ಪ ಕಿಡಿಕಾರಿದ್ದಾರೆ. ಇದನ್ನೂ ಓದಿ: ಎಲ್ಲಾ ದಂಗೆ, ಕೊಲೆಗಳಿಗೆ ಬಿಜೆಪಿಯೇ ನೇರ ಹೊಣೆ – ಪ್ರಮೋದ್ ಮುತಾಲಿಕ್ ಕಿಡಿ
ಹೊಂದಾಣಿಕೆ ರಾಜಕೀಯದ ಬಗ್ಗೆ ಮಾತನಾಡಿದ ಅವರು, ಬಹಿರಂಗವಾಗಿ ಅಡ್ಜಸ್ಟ್ಮೆಂಟ್ ರಾಜಕಾರಣದ ಬಗ್ಗೆ ಚರ್ಚೆ ಆಗುತ್ತಿರುವುದು ದುರ್ದೈವ. ಬಹಿರಂಗವಾಗಿ ಯಾರು ಕೂಡಾ ಈ ರೀತಿ ಮಾತನಾಡಬಾರದು. ಇದು 4 ಗೋಡೆಗಳ ಮಧ್ಯೆ ನಡೆಯಬೇಕಾದ ಚರ್ಚೆ ಎಂದು ಹೇಳಿದರು. ಇದನ್ನೂ ಓದಿ: ಇಂದು ಕೇರಳಕ್ಕೆ ತೆರಳಲಿದ್ದಾನೆ ಬೆಂಗಳೂರು ಬಾಂಬ್ ಸ್ಫೋಟದ ಆರೋಪಿ ಮದನಿ