ಚಿಕ್ಕಮಗಳೂರು: ನಿನ್ನೆ ನಡೆದ ಪರಿಷತ್ ಚುನಾವಣೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ತಾನು ಚಲಾಯಿಸಿದ ಅಧಿಕೃತ ಮತಪತ್ರವನ್ನ ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದು ಬಹಿರಂಗಪಡಿಸಿರುವ ಘಟನೆ ತಾಲೂಕಿನಲ್ಲಿ ನಡೆದಿದೆ.
ಮತಪತ್ರವನ್ನ ಬಹಿರಂಗಪಡಿಸಿ ಕಾನೂನನ್ನ ಉಲ್ಲಂಘಿಸಿರುವ ಸದಸ್ಯರು ಹಾಗೂ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಕಾನೂನು ಕ್ರಮ ಜರುಗಿಸಬೇಕೆಂದು ಜಿಲ್ಲಾ ಕಾಂಗ್ರೆಸ್ ಒತ್ತಾಯಿಸಿದೆ. ಇದನ್ನೂ ಓದಿ: ಜಗಳ ಮಾಡಿಕೊಂಡು ಅಕ್ಕನ ಮನೆಗೆ ಬಂದಿದ್ದ ಪತ್ನಿಯನ್ನು ನಡುರಸ್ತೆಯಲ್ಲೇ ಕೊಲೆಗೈದ ಪತಿ!
Advertisement
Advertisement
ಈ ಪರಿಣಾಮ ಶುಕ್ರವಾರ ಸಂಜೆ ಜಿಲ್ಲಾ ಕಾಂಗ್ರೆಸ್ ವಕ್ತಾರ ಮತ್ತು ವಿಧಾನ ಪರಿಷತ್ ಚುನಾವಣಾ ಕಾಂಗ್ರೆಸ್ ಅಭ್ಯರ್ಥಿ ಏಜೆಂಟ್ ಹಿರೇಮಗಳೂರು ಪುಟ್ಟಸ್ವಾಮಿ ನೇತೃತ್ವದಲ್ಲಿ ಪಕ್ಷದ ಮುಖಂಡರು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ರಮೇಶ್ ಅವರಿಗೆ ದೂರು ನೀಡಿದ್ದಾರೆ.
Advertisement
Advertisement
ತಾಲೂಕಿನ ಕಸಬಾ ಹೋಬಳಿಯ ಮತಗಟ್ಟೆಯೊಂದರಲ್ಲಿ ಒಬ್ಬ ಸದಸ್ಯರು ತಾನು ಮತ ಚಲಾಯಿಸಿದ ಮತ ಪತ್ರವನ್ನ ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದು ಮೊಬೈಲ್ ನಲ್ಲೇ ಬಹಿರಂಗಪಡಿಸಿದ್ದಾರೆ. ಮತದಾನ ಮಾಡುವುದು ಗೌಪ್ಯವಾಗಿದ್ದು, ಸದರಿ ಸದಸ್ಯರು ತಮ್ಮ ಮೊಬೈಲ್ ನಲ್ಲಿ ಅದನ್ನು ಬಹಿರಂಗಪಡಿಸಿ ಕಾನೂನು ಉಲ್ಲಂಘನೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ಸಿಸಿ ಕ್ಯಾಮೆರಾ, ಭದ್ರತಾ ಸಿಬ್ಬಂದಿ ಮತ್ತು ಸಂಬಂಧಪಟ್ಟ ಅಧಿಕಾರಿಗಳ ನಡುವೆಯೂ ಮೊಬೈಲ್ ನಲ್ಲಿ ದೃಶ್ಯಗಳನ್ನು ಸೆರೆ ಹಿಡಿದಿರುವುದು ಗಮನಿಸಿದಾಗ ಕಾನೂನು ಉಲ್ಲಂಘನೆಯಾಗಿರುವುದು ಸ್ಪಷ್ಟವಾಗಿರುತ್ತದೆ. ಸಂಬಂಧಪಟ್ಟ ಅಧಿಕಾರಿಗಳು ಕರ್ತವ್ಯ ಲೋಪ ಎಸಗಿರುವುದು ಸ್ಪಷ್ಟವಾಗಿರುತ್ತದೆ. ಈ ಬಗ್ಗೆ ತನಿಖೆ ನಡೆಸಿ ಸಂಬಂಧಪಟ್ಟ ಸದಸ್ಯ ಮತ್ತು ಕರ್ತವ್ಯ ಲೋಪ ಎಸಗಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಸದಸ್ಯರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಓಮಿಕ್ರಾನ್ ಭೀತಿ: ಮುಂಬೈನಲ್ಲಿ 144 ಸೆಕ್ಷನ್ ಜಾರಿ- ರ‍್ಯಾಲಿ, ಮೆರವಣಿಗೆಗೆ ನಿಷೇಧ