ಚುನಾವಣೆ ವೇಳೆ ಸೌಲಭ್ಯ ನೀಡಿ ಬಳಿಕ ಸ್ಥಗಿತ – ಗ್ರಾ.ಪಂ. ಕಚೇರಿಗೆ ಮುತ್ತಿಗೆ ಹಾಕಿ ಸಿಬ್ಬಂದಿಯನ್ನು ಕೂಡಿ ಹಾಕಿದ ಗ್ರಾಮಸ್ಥರು

Public TV
1 Min Read
hubballi

ಹುಬ್ಬಳ್ಳಿ: ಚುನಾವಣಾ ಸಮಯದಲ್ಲಿ ಸೌಲಭ್ಯ ಕೊಟ್ಟು ಬಳಿಕ ನಿಲ್ಲಿಸಿದ ಅಧಿಕಾರಿಗಳ ನಡೆಗೆ ಬೇಸತ್ತು ಗ್ರಾಮ ಪಂಚಾಯಿತಿ ಕಚೇರಿಗೆ (Gram Panchayat Office) ಮುತ್ತಿಗೆ ಹಾಕಿದ ಗ್ರಾಮಸ್ಥರು, ಸಿಬ್ಬಂದಿಯನ್ನು ಕೂಡಿಹಾಕಿ ಬೀಗ ಜಡಿದಿರುವ ಘಟನೆ ಧಾರವಾಡ (Dharwad) ಜಿಲ್ಲೆಯ ಹುಬ್ಬಳ್ಳಿ (Hubballi) ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಜಗದೀಶ್ವರ ನಗರದಲ್ಲಿ ಕಳೆದ 6 ವರ್ಷಗಳಿಂದ ವಿದ್ಯುತ್ ಮತ್ತು ಕುಡಿಯುವ ನೀರಿನ ಸಂಪರ್ಕ ಇರಲಿಲ್ಲ. ಈ ಬಗ್ಗೆ ಸಾಕಷ್ಟು ಬಾರಿ ಗ್ರಾಮ ಪಂಚಾಯಿತಿಗೆ ನಿವಾಸಿಗಳು ಮನವಿ ಮಾಡಿದ್ದರು. ಇದನ್ನೂ ಓದಿ: ಬೆಳಗಾವಿಯಲ್ಲಿ ರಾತ್ರೋರಾತ್ರಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ – ಸ್ಥಳದಲ್ಲಿ ಬಿಗಿ ಪೊಲೀಸ್ ಭದ್ರತೆ

ಅಧಿಕಾರಿಗಳು ಚುನಾವಣಾ ಸಮಯದಲ್ಲಿ ತಾತ್ಕಾಲಿಕವಾಗಿ ನೀರು ಮತ್ತು ವಿದ್ಯುತ್ ಪೂರೈಕೆ ಮಾಡಿ, ಚುನಾವಣೆ ಬಳಿಕ ಮತ್ತೆ ಎಲ್ಲಾ ಸೌಲಭ್ಯವನ್ನು ಸ್ಥಗಿತಗೊಳಿಸಿದ್ದಾರೆ. ಇದರಿಂದಾಗಿ ಆಕ್ರೋಶಗೊಂಡ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಸಿಬ್ಬಂದಿಯನ್ನು ಕೂಡಿಹಾಕಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ವಿಶ್ವ ಪರಿಸರ ದಿನಾಚರಣೆಯಂದೇ ಅರಣ್ಯಾಧಿಕಾರಿಗಳಿಗೆ ಡಿಕೆಶಿ ಕ್ಲಾಸ್

Share This Article