– ಮುಡಾ ವಿಚಾರದಲ್ಲಿ ಬಿಜೆಪಿ ರಾಜಕೀಯ
ಬೆಂಗಳೂರು: ತಮಿಳುನಾಡಿಗೆ (Tamil Nadu) ಕಾವೇರಿ ನೀರು (Cauvery Water) ಹರಿಸುವ ವಿಚಾರವಾಗಿ ಕಾನೂನು ತಜ್ಞರ ಜೊತೆ ಚರ್ಚೆ ಮಾಡಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿಳಿಸಿದ್ದಾರೆ.
Advertisement
ಜುಲೈ 31ರ ವರೆಗೆ ತಮಿಳುನಾಡಿಗೆ ನಿತ್ಯ 1 ಟಿಎಂಸಿ ನೀರು ಹರಿಸಬೇಕೆಂಬ ಕಾವೇರಿ ನೀರು ನಿಯಂತ್ರಣ ಸಮಿತಿ ಶಿಫಾರಸು ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ರೇಸ್ ಕೋರ್ಸ್ ರಸ್ತೆಯ ತಾಜ್ ವೆಸ್ಟ್ ಎಂಡ್ ಬಳಿ ಡಿಕೆಶಿ ಉತ್ತರಿಸಿದರು. ಇದನ್ನೂ ಓದಿ: ಬರ ಪರಿಹಾರ ಬಿಡುಗಡೆ ವಿಚಾರ – ಅಫಿಡವಿಟ್ ಸಲ್ಲಿಸಲು ಕೇಂದ್ರ ಸರ್ಕಾರಕ್ಕೆ ಕಾಲಾವಕಾಶ
Advertisement
Advertisement
ಕಾವೇರಿ ನೀರಿನ ವಿಚಾರವಾಗಿ ಮುಂದೆ ಏನು ಮಾಡಬೇಕೆಂದು ಅನಿಲ್ ದಿವಾನ್, ಕಾತರಕಿ ಸೇರಿದಂತೆ ಕಾನೂನು ತಜ್ಞರ ತಂಡದ ಜೊತೆ ಚರ್ಚೆ ಮಾಡಿದ್ದು, ನೀರಾವರಿ ಇಲಾಖೆ ಅಧಿಕಾರಿಗಳ ಜೊತೆ ಮಾತುಕತೆ ನಡೆಸುತ್ತೇವೆ ಎಂದರು. ಇದನ್ನೂ ಓದಿ: ಪಂಚಭೂತಗಳಲ್ಲಿ ಲೀನರಾದ ನಿರೂಪಕಿ ಅಪರ್ಣಾ
Advertisement
ಮುಡಾ ವಿಚಾರದಲ್ಲಿ ಬಿಜೆಪಿ ರಾಜಕೀಯ:
ಮುಡಾ (MUDA) ಹಗರಣದ ಬಗ್ಗೆ ಬಿಜೆಪಿ (BJP) ಟೀಕೆ ಬಗ್ಗೆ ಕೇಳಿದಾಗ, ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ. ಅವರ ಆರೋಪದಲ್ಲಿ ಹುರುಳಿಲ್ಲ. ಸಮಯ ಬಂದಾಗ ನಾವು ಏನು ಉತ್ತರ ನೀಡಬೇಕೋ ನೀಡುತ್ತೇವೆ. ಮುಡಾದಲ್ಲಿ ಏನೇ ಹಗರಣ ನಡೆದಿದ್ದರೂ ಅದು ಬಿಜೆಪಿ ಅವಧಿಯಲ್ಲಿ ನಡೆದಿದೆ. ಈ ರಾಜಕೀಯ ಆರೋಪಗಳನ್ನು ನಾವು ಸಮರ್ಥವಾಗಿ ಎದುರಿಸುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ದೆಹಲಿ ಸಿಎಂ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು – ಆದರೂ ಇಲ್ಲ ಬಿಡುಗಡೆ ಭಾಗ್ಯ
ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರನ್ನು ಇ.ಡಿ ವಿಚಾರಣೆ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, ವಾಲ್ಮೀಕಿ ನಿಗಮದ ಹಗರಣದ ಕುರಿತು ಎಸ್‌ಐಟಿ ವಿಚಾರಣೆ ನಡೆಸುತ್ತಿದೆ. ಇ.ಡಿ ವಿಚಾರಣೆ ಅವಶ್ಯಕತೆ ಇರಲಿಲ್ಲ. ಅವರ ತನಿಖೆ ಬಗ್ಗೆ ತಿಳಿದು ನಂತರ ಮಾತನಾಡುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಸಿದ್ದರಾಮಯ್ಯ ರಾಜೀನಾಮೆ ನೀಡಿ, ಮತ್ತೊಬ್ಬ ಹಿಂದುಳಿದ ನಾಯಕನನ್ನು ಸಿಎಂ ಮಾಡಲಿ: ವಿಜಯೇಂದ್ರ ಒತ್ತಾಯ