ಬೆಂಗಳೂರು: ಕರ್ನಾಟಕ ಗಡಿಗೆ ಹೊಂದಿಕೊಂಡಿರುವ ಮಡಕಶಿರಾ (Madakasira) ಭಾಗದಲ್ಲಿ ಬೃಹತ್ ಕೈಗಾರಿಕೆಗಳನ್ನು ( Heavy Industries) ಸ್ಥಾಪಿಸುವ ಉದ್ದಿಮೆದಾರರ ಜೊತೆ ಚರ್ಚೆ ನಡೆಸಲಾಗುವುದು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumarswamy) ಅವರು ಹೇಳಿದರು.
ಜೆಡಿಎಸ್ ಕಚೇರಿಯಲ್ಲಿ ಶನಿವಾರ ಬೆಳಗ್ಗೆ ತಮ್ಮನ್ನು ಭೇಟಿಯಾದ ಮಡಕಶಿರಾ ಶಾಸಕ ಎಂಎಸ್ ರಾಜು ಅವರ ಜೊತೆ ಮಾತನಾಡಿದ ಕೇಂದ್ರ ಸಚಿವರು ಈ ಭರವಸೆ ನೀಡಿದರು. ಮಡಕಶಿರಾದಲ್ಲಿ ಕೈಗಾರಿಕೆಗಳು ಸ್ಥಾಪನೆಯಾದರೆ ಪಾವಗಡ, ಶಿರಾ, ಮಧುಗಿರಿ, ಹಿರಿಯೂರು ಭಾಗದ ಜನರಿಗೆ ಕೂಡ ಅನುಕೂಲ ಆಗುತ್ತದೆ. ಎಲ್ಲರಿಗೂ ಉದ್ಯೋಗ ಸಿಗುತ್ತದೆ. ಕೆಲಸಕ್ಕೆ ವಲಸೆ ಹೋಗುವುದು ತಪ್ಪುತ್ತದೆ. ಅಲ್ಲಿಗೆ ಸೂಕ್ತವಾಗುವ ಕೈಗಾರಿಕೆ ತರುವುದಕ್ಕೆ ನಾನು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕರಿಗೆ ಭರವಸೆ ನೀಡಿದರು. ಇದನ್ನೂ ಓದಿ: ಎಸ್ಟಿ ಪ್ರವರ್ಗಕ್ಕೆ ವಾಲ್ಮೀಕಿ ಸಮುದಾಯ, ಹಿಂದುಳಿದ ವರ್ಗಕ್ಕೆ ಕುಂಚಿಟಿಗ, ಸಾದರ, ವೀರಶೈವರನ್ನು ಸೇರಿಸಲು ಗೃಹ ಸಚಿವರ ಜೊತೆ ಚರ್ಚೆ: ಹೆಚ್‌ಡಿಕೆ
Advertisement
Advertisement
ಉದ್ಯಮಿಗಳ ಜೊತೆ ಸಮಾಲೋಚನೆ ನಡೆಸುತ್ತೇನೆ. ಹಾಗೆಯೇ ನಮ್ಮ ಇಲಾಖೆ ಹಂತದಲ್ಲಿಯೂ ಚರ್ಚೆ ಮಾಡುತ್ತೇನೆ ಎಂದ ಅವರು, ಗಡಿ ಭಾಗದಲ್ಲಿ ಕೈಗಾರಿಕೆಗಳು ಬಂದರೆ ಎಲ್ಲರಿಗೂ ಅನುಕೂಲ ಆಗುತ್ತದೆ. ಮೊದಲಿನಿಂದಲೂ ಆಂಧ್ರ ಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಅವರು ಅಭಿವೃದ್ಧಿ ಪರವಾದ ದೊಡ್ಡ ಕೊಡುಗೆ ನೀಡಿದ್ದಾರೆ. ವೈಜಾಗ್ ಉಕ್ಕು ಘಟಕದ ಪುನರುದ್ಧಾರಕ್ಕೆ ನಾನು ಪ್ರಯತ್ನ ಮಾಡುತ್ತಿರುವುದು ನಿಮಗೆ ಗೊತ್ತೇ ಇದೆ. ಹನ್ನೆರಡು ವರ್ಷ ನಿರಂತರವಾಗಿ ಲಾಭದಲ್ಲಿದ್ದ ಈ ಕಾರ್ಖಾನೆ ಈಗ ನಷ್ಟದಲ್ಲಿದೆ. ಅದಕ್ಕೆ ಮರುಜೀವ ಕೊಡುವುದಕ್ಕೆ ನಾನು ಪ್ರಯತ್ನ ಮಾಡುತ್ತಿದ್ದೇನೆ. ಅದೇ ರೀತಿ ಮಡಕಶಿರಾ ಭಾಗದಲ್ಲಿ ಕೈಗಾರಿಕೆ ಸ್ಥಾಪನೆಗೆ ಪ್ರಯತ್ನ ನಡೆಸುವೆ ಎಂದು ಹೇಳಿದರು. ಇದನ್ನೂ ಓದಿ: PUBLiC TV Impact | ಅರೆಹೊಟ್ಟೆಯಲ್ಲಿ ಪರದಾಡಿದ್ದ ವಿದ್ಯಾರ್ಥಿನಿಯರ ಶಾಲೆಗೆ ತಲುಪಿದ ಆಹಾರ ಸಾಮಗ್ರಿ
Advertisement
ನಾನು ಕೇಂದ್ರದ ಉಕ್ಕು ಖಾತೆ ಸಚಿವನಾದ ಮೇಲೆ ಆ ಕಾರ್ಖಾನೆಯ ವೈಜಾಗ್ ಸ್ಟೀಲ್ ಪುನರುಜ್ಜೀವನಕ್ಕೆ ದೊಡ್ಡ ಪ್ರಮಾಣದಲ್ಲಿ ಪ್ರಯತ್ನ ಮಾಡುತ್ತಿದ್ದೇನೆ. ಅದು ಸವಾಲಿನ ಕೆಲಸ ಎನ್ನುವುದು ಗೊತ್ತಿದೆ. ಆದರೂ ನರೇಂದ್ರ ಮೋದಿ ಅವರ ಬೆಂಬಲದ ಜೊತೆಯಲ್ಲಿ ನಾನು ಮುಂದುವರಿದಿದ್ದೇನೆ ಎಂದರು. ಇದನ್ನೂ ಓದಿ: ಜ್ಞಾನವಾಪಿಯೇ ಸಾಕ್ಷಾತ್ ವಿಶ್ವನಾಥ, ಅದನ್ನು ಮಸೀದಿ ಎನ್ನುವುದು ವಿಷಾದನೀಯ: ಯೋಗಿ ಆದಿತ್ಯನಾಥ್
Advertisement
ಮಡಕಶಿರಾ ಶಾಸಕ ಎಂಎಸ್ ರಾಜು ಮಾತನಾಡಿ, ಮಡಕಶಿರಾ ಮತ್ತು ಸುತ್ತಮುತ್ತಲ ಪ್ರದೇಶದ ಸುಮಾರು 40,000ಕ್ಕೂ ಹೆಚ್ಚು ನಮ್ಮ ಭಾಗದ ಬಡ ಯುವಕರು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾರೆ. 3,000 ಎಕರೆ ಜಾಗ ಇದೆ. ಪೆನುಗೊಂಡ ಹೆದ್ದಾರಿ ಬಳಿಯೂ ಜಾಗ ಇದೆ. ಬೃಹತ್ ಕೈಗಾರಿಕೆಗಳನ್ನು ಸ್ಥಾಪನೆ ಮಾಡಲು ಅನುಕೂಲವಾದ ಜಾಗ ಇದೆ. ಕೈಗಾರಿಕೆ ಕ್ಲಸ್ಟರ್ ಮಾಡಿದರೆ ಮಡಕಶಿರಾ ಸೇರಿ ಅಲ್ಲಿ ನಮ್ಮ ಗಡಿಗೆ ಹೊಂದಿಕೊಂಡಿರುವ ಎಲ್ಲಾ ವಿಧಾನಸಭೆ ಕ್ಷೇತ್ರಗಳ ಬಡ ಯುವಕರಿಗೆ ಅನುಕೂಲ ಆಗುತ್ತದೆ. ಮಡಕಶಿರಾ ಜೊತೆಗೆ ಪಾವಗಡ, ಶಿರಾ, ಮಧುಗಿರಿ, ಹಿರಿಯೂರು ಭಾಗದ ಯುವಕರಿಗೆ ಉದ್ಯೋಗ ದೊರೆಯುತ್ತದೆ ಎಂದು ಕೇಂದ್ರ ಸಚಿವರಿಗೆ ಮನವಿ ಮಾಡಿದರು. ಇದನ್ನೂ ಓದಿ: ಗ್ರಾಹಕರಿಗೆ ಬೆಲೆ ಏರಿಕೆ ಮಾಡಿ ರೈತರಿಗೂ ಸಿದ್ದರಾಮಯ್ಯ ಸರ್ಕಾರ ಮೋಸ ಮಾಡ್ತಿದೆ: ಹೆಚ್‌ಡಿಕೆ ಕಿಡಿ
ಮಾಜಿ ಶಾಸಕ ತಿಮ್ಮರಾಯಪ್ಪ ಮಾತನಾಡಿ, ಪಾವಗಡ ಹತ್ತಿರವೇ 1,600 ಎಕರೆ ಭೂಮಿ ಇದೆ. ಕೈಗಾರಿಕೆ ಸ್ಥಾಪನೆ ಮಾಡಿದರೆ ಅಲ್ಲಿ ನಿರುದ್ಯೋಗ ಸಮಸ್ಯೆ ನಿವಾರಣೆ ಆಗುತ್ತದೆ ಎಂದು ನುಡಿದರು. ಇದನ್ನೂ ಓದಿ: ಡಿಕೆ ಸುರೇಶ್ ಹಿನ್ನೆಲೆ ಎಲ್ಲರಿಗೆ ಗೊತ್ತಿದೆ, ಅವರಿಂದ ನನಗೆ ಸರ್ಟಿಫಿಕೇಟ್ ಬೇಡ: ಕುಮಾರಸ್ವಾಮಿ
ಈ ವೇಳೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ವಿಧಾನ ಪರಿಷತ್ ಸದಸ್ಯ ಕೆಎನ್ ತಿಪ್ಪೇಸ್ವಾಮಿ, ಮಾಜಿ ಶಾಸಕ ತಿಮ್ಮರಾಯಪ್ಪ, ತುಮಕೂರು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಅಂಜಿನಪ್ಪ ಸೇರಿದಂತೆ ಹಲವಾರು ನಾಯಕರು ಹಾಜರಿದ್ದರು. ಇದನ್ನೂ ಓದಿ: ಬೇಡಿಕೆ ಈಡೇರಿಸಲು ಸ್ವಲ್ಪ ಸಮಯ ಕೊಡಿ: ಪ್ರತಿಭಟನಾ ನಿರತ ಕಿರಿಯ ವೈದ್ಯರಿಗೆ ಸಿಎಂ ಮಮತಾ ಬ್ಯಾನರ್ಜಿ ಮನವಿ