ಬೆಂಗಳೂರು: ಸಮ್ಮಿಶ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕರು ಅಸಮಾಧಾನ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್ ನನ್ನ ಮನಸ್ಸಿನಲ್ಲಿ ಏನಿದೆ ಎಂದು ನಾಳೆ ಹೇಳುತ್ತೇನೆ ಎಂದು ಹೇಳುವ ಮೂಲಕ ಟ್ವಿಸ್ಟ್ ಕೊಟ್ಟಿದ್ದಾರೆ
ನಗರದಲ್ಲಿ ಸಚಿವ ರಮೇಶ್ ಜಾರಕಿಹೊಳಿ ಭೇಟಿ ಬಳಿಕ ಮಾತನಾಡಿದ ಶಾಸಕ ಎಂಟಿಬಿ ನಾಗರಾಜ್, ಇಂದು ಪತ್ರಿಕಾಗೋಷ್ಠಿ ನಡೆಸಿ ಮಾಧ್ಯಮಗಳೊಂದಿಗೆ ಮಾತನಾಡುವುದಾಗಿ ತಿಳಿಸಿದ್ದೆ. ಆದರೆ ಅದನ್ನು ನಾಳೆ ತಿಳಿಸುತ್ತೇನೆ. ಸರ್ಕಾರದಲ್ಲಿ ನಾನು ಪ್ರಮುಖ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದು, ಈ ಕುರಿತು ಅಸಮಾಧಾನವಿದೆ. ನನ್ನ ಜೊತೆ ಮತ್ತಿಬ್ಬರು ಶಾಸಕರು ಕೂಡ ಆಗಮಿಸುವ ನಿರೀಕ್ಷೆ ಇದೆ ಎಂದರು.
Advertisement
Advertisement
ಅಪರೇಷನ್ ಕಮಲ ಕುರಿತು ಪ್ರತಿಕ್ರಿಯೆ ನೀಡಿದ ಅವರು, ನನ್ನನ್ನು ಯಾವುದೇ ಬಿಜೆಪಿ ಶಾಸಕರು ಭೇಟಿ ಮಾಡಿ ಮಾತನಾಡಿಲ್ಲ. ಆದರೆ ಕೆಲ ಸ್ನೇಹಿತರು ಫೋನ್ ಮೂಲಕ ಸಂಪರ್ಕ ಮಾಡಿದ್ದಾರೆ. ಈ ಕುರಿತು ಯಾವುದೇ ತೀರ್ಮಾನ ಕೈಗೊಂಡಿಲ್ಲ. ರಮೇಶ್ ಜಾರಕಿಹೊಳಿ ಅವರ ಬಳಿ ಅಪರೇಷನ್ ಕಮಲದ ಬಗ್ಗೆಯೂ ಚರ್ಚೆ ಮಾಡಿಲ್ಲ. ಈ ತಿಂಗಳ ಕೊನೆಯ ವೇಳೆಗೆ ನಿಗಮ ಮಂಡಳಿ ಹಾಗೂ ಮಂತ್ರಿ ಮಂಡಲ ರಚನೆ ಆಗಲಿದೆ ಎಂದು ರಮೇಶ್ ಜಾರಕಿಹೊಳಿ ಅವರು ತಿಳಿಸಿದರು. ಈ ಕುರಿತು ಕಾದು ನೋಡುವ ಎಂದು ಹೇಳಿದ್ದಾರೆ. ಅದ್ದರಿಂದ ನಾಳೆ ನಿಮ್ಮನ್ನು ಭೇಟಿ ಮಾಡಿ ಮಾಹಿತಿ ನೀಡುತ್ತೇನೆ ಎಂದರು. ಇದನ್ನೂ ಓದಿ: ಸಮ್ಮಿಶ್ರ ಸರ್ಕಾರಕ್ಕೆ ಮಂಗಳವಾರ ಕೊನೆಯ ದಿನ?
Advertisement
ಎಂಟಿಬಿ ಅಸಮಾಧಾನಕ್ಕೆ ಕಾರಣ ಏನು?
ನಾವು ಹೇಳಿದ ಯಾವುದೇ ಕೆಲಸಗಳು ಈ ಸಮ್ಮಿಶ್ರ ಸರ್ಕಾರದಲ್ಲಿ ಆಗುತ್ತಿಲ್ಲ. ಸಿದ್ದರಾಮಯ್ಯನವರನ್ನು ಕುಮಾರಸ್ವಾಮಿ ಕಡೆಗಣಿಸುತ್ತಿದ್ದು ಹೀಗಾಗಿ ಅವರ ಬೆಂಬಲಿಗರಿಗೂ ಸರ್ಕಾರದಲ್ಲಿ ಪ್ರಾಶಸ್ತ್ಯ ಸಿಗುತ್ತಿಲ್ಲ. ಜೆಡಿಎಸ್ ಶಾಸಕರು ಸರ್ಕಾರದ ಎಲ್ಲಾ ಇಲಾಖೆಯಲ್ಲಿ ಕೈ ಆಡಿಸುತ್ತಿದ್ದಾರೆ ಎನ್ನುವುದು ಎಂಟಿಬಿ ನಾಗಾರಾಜ್ ಅವರ ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv