‘ಕಲ್ಕಿ 2898 ಎಡಿ’ ಸಿನಿಮಾದ ಸಕ್ಸಸ್ ಬಳಿಕ ಪ್ರಭಾಸ್ (Prabhas) ಬಳಿ ಕೈತುಂಬಾ ಸಿನಿಮಾಗಳಿವೆ. ಸದ್ಯ ಹನು ರಾಘವಪುಡಿ ನಿರ್ದೇಶನದ ಸಿನಿಮಾದಲ್ಲಿ ಪ್ರಭಾಸ್ ನಟಿಸುತ್ತಿದ್ದಾರೆ. ಈ ಚಿತ್ರತಂಡಕ್ಕೆ ದಿಶಾ ಪಟಾನಿ (Disha Patani) ಸೇರಿಕೊಂಡಿದ್ದಾರೆ ಎನ್ನಲಾದ ಸುದ್ದಿಯೊಂದು ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ:ಮಾಜಿ ಪತ್ನಿಯರೊಡನೆ ಈದ್ ಹಬ್ಬ ಆಚರಿಸಿದ ಆಮೀರ್ ಖಾನ್
ಪ್ರಭಾಸ್ ನಟನೆಯ ‘ಫೌಜಿ’ ಸಿನಿಮಾದಲ್ಲಿ ದಿಶಾ ಪಟಾನಿಗೂ ಒಂದೊಳ್ಳೆಯ ಪಾತ್ರದ ಸಿಕ್ಕಿದೆಯಂತೆ. ಪ್ರಭಾಸ್ ಜೊತೆ ಪ್ರಮುಖದಲ್ಲಿ ದಿಶಾ ಕೂಡ ನಟಿಸಲಿದ್ದಾರೆ ಎನ್ನಲಾದ ಸುದ್ದಿ ಇದೀಗ ಹರಿದಾಡುತ್ತಿದೆ. ಈ ಬಗ್ಗೆ ಚಿತ್ರತಂಡವೇ ಸ್ಪಷ್ಟನೆ ನೀಡಬೇಕಿದೆ. ಇದನ್ನೂ ಓದಿ: ಟಾಲಿವುಡ್ ನೆಪೋಟಿಸಂ ಬಗ್ಗೆ ಮಾತನಾಡಿದ ‘ಲಕ್ಕಿ ಭಾಸ್ಕರ್’ ನಿರ್ಮಾಪಕ ನಾಗ ವಂಶಿ
ಈ ಹಿಂದೆ ‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ಪ್ರಭಾಸ್ ಜೊತೆ ದಿಶಾ ಪಟಾನಿ ನಟಿಸಿದ್ದರು. ಇದೀಗ ಮತ್ತೆ ನಟನ ಜೊತೆ ದಿಶಾ ನಟಿಸಲಿದ್ದಾರೆ ಎಂಬ ಸುದ್ದಿ ವೈರಲ್ ಆಗ್ತಿದೆ.
‘ಕಲ್ಕಿ 2898 ಎಡಿ’ ಚಿತ್ರದ ಸೀಕ್ವೆಲ್ ಈ ವರ್ಷದ ಅಂತ್ಯದಲ್ಲಿ ಶುರುವಾಗಲಿದೆ ಎಂದು ಡೈರೆಕ್ಟರ್ ನಾಗ ಅಶ್ವೀನ್ ಕಡೆಯಿಂದ ಅಧಿಕೃತ ಮಾಹಿತಿ ಸಿಕ್ಕಿದೆ. ಡಿಸೆಂಬರ್‌ನಲ್ಲಿ ಪ್ರಭಾಸ್ ಈ ಸಿನಿಮಾ ಶೂಟಿಂಗ್‌ನಲ್ಲಿ ಭಾಗಿಯಾಗಲಿದ್ದಾರೆ.