ನವದೆಹಲಿ : ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ವಿರುದ್ಧದ ಆದಾಯ ಮೀರಿ ಆಸ್ತಿಗಳಿಗೆ (Disproportionate Assets Case) ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ ಆದೇಶ ಪ್ರಶ್ನಿಸಿ ಸಿಬಿಐ (CBI) ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ (Supreme Court) ಶುಕ್ರವಾರಕ್ಕೆ ಮುಂದೂಡಿದೆ.
ಪ್ರಕರಣದ ವಿಚಾರಣೆಯನ್ನು ನ್ಯಾ. ಬೇಲಾ ಎಂ ತ್ರಿವೇದಿ ನೇತೃತ್ವದ ದ್ವಿಸದಸ್ಯ ಪೀಠ ನಡೆಸಿತು. ವಿಚಾರಣೆ ವೇಳೆ ಪ್ರತಿಕ್ರಿಯೆ ಸಲ್ಲಿಸಲು ಡಿ.ಕೆ ಶಿವಕುಮಾರ್ ಪರ ವಕೀಲರು ಸಮಯಾವಕಾಶ ಕೇಳಿದ ಹಿನ್ನಲೆ ವಿಚಾರಣೆ ಮುಂದೂಡಲಾಯಿತು.
Advertisement
ಈಗಲ್‌ಟನ್ ರೆಸಾರ್ಟ್‌ನಲ್ಲಿ ನಡೆದ ದಾಳಿಯನ್ನು ಅಂದಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಸಿಬಿಐ ತನಿಖೆಗೆ ನೀಡಿತ್ತು. ಸರ್ಕಾರದ ನಡೆಯನ್ನು ಪ್ರಶ್ನಿಸಿ ಡಿ.ಕೆ ಕುಮಾರ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು, ಅರ್ಜಿ ವಿಚಾರಣೆ ನಡೆಸಿದ್ದ ಏಕ ಸದಸ್ಯ ಪೀಠ ಅರ್ಜಿ ವಜಾ ಮಾಡಿತ್ತು. ಇದನ್ನು ಪ್ರಶ್ನೆ ಮಾಡಿ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ವಿಭಾಗೀಯ ಪೀಠ ತನಿಖೆಗೆ ತಡೆ ನೀಡಿತ್ತು. ಇದನ್ನೂ ಓದಿ: ಕೆಇಎ ಪರೀಕ್ಷಾ ಅಕ್ರಮದ ಕಿಂಗ್‌ಪಿನ್ ಬೆನ್ನಿಗೆ ಎಟಿಎಂ ಸರ್ಕಾರ ನಿಂತಿದೆ: ಆರೋಪಿ ಟ್ರೋಲ್ ಮಿನಿಸ್ಟರ್ ಖರ್ಗೆ ಆಪ್ತ ಎಂದ ಬಿಜೆಪಿ
Advertisement
Advertisement
ವಿಭಾಗೀಯ ಪೀಠದ ಆದೇಶವನ್ನು ಪ್ರಶ್ನೆ ಮಾಡಿ ಸಿಬಿಐ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಇಂದಿನ ವಿಚಾರಣೆ ವೇಳೆ ವಾದ ಮಂಡಿಸಿದ ಸಿಬಿಐ ಪರ ವಕೀಲರು ಸುಳ್ಳು ಆಧಾರದಲ್ಲಿ ಸಂಪೂರ್ಣ ತನಿಖೆಗೆ ತಡೆ ನೀಡಲಾಗಿದೆ ಎಂದು ಆರೋಪಿಸಿದರು. ಇದಕ್ಕೆ ಪ್ರತಿಯಾಗಿ ಡಿ.ಕೆ ಶಿವಕುಮಾರ್ ಪರ ವಾದ ಮಂಡಿಸಿದ ಮುಕುಲ್ ರೋಹಟಗಿ, ತಡೆ ರದ್ದು ಕೋರಿ ಸಿಬಿಐ ಈಗಾಗಲೇ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಲು ಸಮಯ ಬೇಕು ಎಂದು ಮನವಿ ಮಾಡಿದರು.
Advertisement
ವಾದ ಪ್ರತಿವಾದವನ್ನು ಆಲಿಸಿದ ಸುಪ್ರೀಂಕೋರ್ಟ್ ಶುಕ್ರವಾರ ವಿಚಾರಣೆ ನಡೆಸುವುದಾಗಿ ಹೇಳಿತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಸಿಬಿಐ ತನಿಖೆ ತಡೆ ಕೋರಿ ಡಿ.ಕೆ ಶಿವಕುಮಾರ್ ಮತ್ತೊಂದು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದರು. ಈ ಮೊದಲು ತಡೆ ನೀಡಿದ್ದ ಕೋರ್ಟ್ ಇತ್ತಿಚೀಗೆ ತಡೆ ರದ್ದು ಮಾಡಿ ಸಿಬಿಐ ತನಿಖೆಗೆ ಗ್ರೀನ್ ಸಿಗ್ನಲ್ ನೀಡಿತ್ತು. ಶುಕ್ರವಾರದ ವಿಚಾರಣೆಯಲ್ಲೂ ಸಿಬಿಐ ಪರ ಆದೇಶ ಬಂದಲ್ಲಿ ಡಿ.ಕೆ ಶಿವಕುಮಾರ್ ಅವರಿಗೆ ಸಂಕಷ್ಟ ಎದುರಾಗುವ ಸಾಧ್ಯತೆಗಳಿದೆ. ಮೊಬೈಲಿನಲ್ಲೇ ಲೇಟೆಸ್ಟ್ ಸುದ್ದಿ ಓದಲು ಪಬ್ಲಿಕ್ ಟಿವಿ ವಾಟ್ಸಪ್ ಚಾನೆಲಿಗೆ ಸೇರ್ಪಡೆಯಾಗಿ: ಪಬ್ಲಿಕ್ ಟಿವಿ ವಾಟ್ಸಪ್ ಚಾನೆಲ್
ಏನಿದು ಪ್ರಕರಣ?
2017 ರಲ್ಲಿ ಡಿ.ಕೆ ಶಿವಕುಮಾರ್ ವಾಸ್ತವ್ಯವಿದ್ದ ಈಗಲ್‌ಟನ್ ರೆಸಾರ್ಟ್ ಮತ್ತು ಅವರ ಸಹಚರರ ಮೇಲೆ ದಾಳಿ ಮೇಲೆ ದಾಳಿ ಮಾಡಿದ್ದ ಆದಾಯ ತೆರಿಗೆ ಇಲಾಖೆ ಸುಮಾರು 8.59 ಕೋಟಿ ಹಣ ವಶಪಡಿಸಿಕೊಂಡಿತ್ತು. ಲೆಕ್ಕಕ್ಕೆ ಸಿಗದ ಈ ಹಣವನ್ನು ಡಿ.ಕೆ ಶಿವಕುಮಾರ್ ತಮ್ಮ ಸಹಚರರ ಬಳಿ ಇರಿಸಿದ್ದರು ಎಂದು ಆರೋಪಿಸಿತ್ತು. ಇದೇ ಪ್ರಕರಣದಲ್ಲಿ ಇಡಿ ಡಿ.ಕೆ ಶಿವಕುಮಾರ್ ಅವರನ್ನು ಬಂಧಿಸಿತ್ತು. ಐಟಿ ಇಲಾಖೆ (Income Tax) ನೀಡಿದ ಮಾಹಿತಿ ಆಧರಿಸಿ ಜಾರಿ ನಿರ್ದೇಶನಾಲಯ ವಿರುದ್ಧ ತನಿಖೆ ಆರಂಭಿಸಿತ್ತು. ಇಡಿ ತನಿಖೆಯನ್ನು ಆಧರಿಸಿ ಡಿಕೆಶಿ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ಸಿಬಿಐ ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು. ಸರ್ಕಾರ 2019ರ ಸೆ.25ರಂದು ಅನುಮತಿ ನೀಡಿದ ಬೆನ್ನಲ್ಲೇ 2020ರ ಅಕ್ಟೋಬರ್ 3 ರಂದು ಡಿಕೆ ಶಿವಕುಮಾರ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. 2013ರಿಂದ 2018ರ ವರೆಗಿನ ಆದಾಯಗಳಿಕೆ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ.