ಬೆಂಗಳೂರು: ಅಕ್ರಮ ಆಸ್ತಿ ಪ್ರಕರಣಕ್ಕೆ (Disproportionate Assets Case) ಸಂಬಂಧಿಸಿದಂತೆ ಸಿಬಿಐಗೆ (CBI) ನೀಡಿರುವ ದಾಖಲೆಗಳನ್ನ ನಮಗೂ ನೀಡಿ ಎಂದು ಲೋಕಾಯುಕ್ತ ಪೊಲೀಸರು (Lokayukta Police) ಡಿಸಿಎಂ ಡಿಕೆ ಶಿವಕುಮಾರ್‌ಗೆ (DK Shivakumar) ನೋಟಿಸ್ ನೀಡಿದ್ದಾರೆ.
ಅಕ್ರಮ ಆಸ್ತಿ ಪ್ರಕರಣ ಸಂಬಂಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿದೆ. ಈಗ ತನಿಖೆಯ ಭಾಗವಾಗಿ ಪೊಲೀಸರು ಸಿಬಿಐಗೆ ಸಲ್ಲಿಸಿದ ಮಾಹಿತಿ ಮತ್ತು ದಾಖಲೆಗಳನ್ನು ನಮ್ಮ ಕಚೇರಿಗೆ ಸಲ್ಲಿಸಿ ಎಂದು ನೋಟಿಸ್ ನೀಡಿದೆ. ಇದನ್ನೂ ಓದಿ: ಮಂಗಳೂರಿನಲ್ಲಿ ರೋಡ್ ಶೋ, ಮೈಸೂರಿನಲ್ಲಿ ಸಮಾವೇಶ – ಮೋದಿ ಕಾರ್ಯಕ್ರಮದಲ್ಲಿ ಬದಲಾವಣೆ
Advertisement
Advertisement
ಅಕ್ರಮ ಆಸ್ತಿಗಳಿಕೆ ಪ್ರಕರಣದ ತನಿಖೆಯ ಪೂರ್ವಾನುಮತಿಯನ್ನು ಹಿಂಪಡೆದ ಬಳಿಕ ಸರ್ಕಾರ ತನಿಖೆಯ ಜವಾಬ್ದಾರಿಯನ್ನು ಲೋಕಾಯುಕ್ತಕ್ಕೆ ನೀಡಿತ್ತು. ಲೋಕಾಯುಕ್ತ ಪೊಲೀಸರು ಫೆ.8 ರಂದು ಡಿಕೆಶಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ಇದನ್ನೂ ಓದಿ: ಕ್ಷೇತ್ರದಲ್ಲಿ ಭಯದ ವಾತಾವರಣವಿದ್ದರೂ ಜನರಿಗೆ ಎದುರಿಸುವ ಶಕ್ತಿಯಿದೆ: ಸಿಎನ್ ಮಂಜುನಾಥ್
Advertisement
ಏನಿದು ಸಿಬಿಐ ಪ್ರಕರಣ?
2017 ರಲ್ಲಿ ಡಿ.ಕೆ.ಶಿವಕುಮಾರ್ ವಾಸ್ತವ್ಯವಿದ್ದ ಈಗಲ್‌ಟನ್ ರೆಸಾರ್ಟ್ ಮತ್ತು ಅವರ ಸಹಚರರ ಮೇಲೆ ದಾಳಿ ಮೇಲೆ ದಾಳಿ ಮಾಡಿದ್ದ ಆದಾಯ ತೆರಿಗೆ ಇಲಾಖೆ (Income Tax Department) ಸುಮಾರು 8.59 ಕೋಟಿ ಹಣ ವಶಪಡಿಸಿಕೊಂಡಿತ್ತು. ಲೆಕ್ಕಕ್ಕೆ ಸಿಗದ ಈ ಹಣವನ್ನು ಡಿ.ಕೆ.ಶಿವಕುಮಾರ್ ತಮ್ಮ ಸಹಚರರ ಬಳಿ ಇರಿಸಿದ್ದರು ಎಂದು ಆರೋಪಿಸಿತ್ತು. ಇದೇ ಪ್ರಕರಣದಲ್ಲಿ ಇಡಿ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿತ್ತು. ಈ ಬಗ್ಗೆ ಸರ್ಕಾರಕ್ಕೆ ಪತ್ರ ಬರೆದಿದ್ದ ಇಡಿ ಪಿಸಿ ಆ್ಯಕ್ಟ್ ನಡಿ ತನಿಖೆ ನಡೆಸಲು ಸಿಬಿಐಗೆ ನೀಡಲು ಶಿಫಾರಸು ಮಾಡಿತ್ತು. ಶಿಫಾರಸು ಆಧರಿಸಿ ಅಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ನೇತೃತ್ವದ ಸರ್ಕಾರ ಸಿಬಿಐ ತನಿಖೆಗೆ ನೀಡಿತ್ತು.