ನವದೆಹಲಿ: ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (D.K.Shivakumar) ವಿರುದ್ಧದ ತನಿಖೆಗೆ ನೀಡಿರುವ ತಡೆ ರದ್ದು ಕೋರಿ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ (Supreme Court) ಇತ್ಯರ್ಥಪಡಿಸಿದೆ. ಇಂದು (ಶುಕ್ರವಾರ) ವಿಚಾರಣೆ ನಡೆಸಿದ ನ್ಯಾ. ಬೇಲಾ ತ್ರಿವೇದಿ ನೇತೃತ್ವದ ದ್ವಿ ಸದಸ್ಯ ಪೀಠ ಹೈಕೋರ್ಟ್‌ನಲ್ಲಿ ಪ್ರಕರಣ ಇತ್ಯರ್ಥಪಡಿಸಲು ನಿರ್ದೇಶನ ನೀಡಿದೆ.
ವಿಚಾರಣೆ ವೇಳೆ ಸಿಬಿಐ ಪರ ವಾದ ಮಂಡಿಸಿದ ವಕೀಲರು, ಹೈಕೋರ್ಟ್ ಏಕ ಸದಸ್ಯ ಪೀಠ ತನಿಖೆಗೆ ನೀಡಿರಲಿಲ್ಲ. ಆದರೆ ವಿಭಾಗೀಯ ಪೀಠ ತಡೆ ನೀಡಿತ್ತು. ತಡೆ ರದ್ದು ಕೋರಿ ಈಗಾಗಲೇ ಹೈಕೋರ್ಟ್‌ನಲ್ಲೂ ಅರ್ಜಿ ಸಲ್ಲಿಸಿದೆ. ಪ್ರಕರಣದ ತನಿಖೆಗೆ ಅನುಮತಿ ನೀಡಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಡಿಕೆಶಿಗೆ ಸಿಬಿಐ ಸಂಕಷ್ಟ – ಶುಕ್ರವಾರ ಸುಪ್ರೀಂನಲ್ಲಿ ನಿರ್ಣಾಯಕ ವಿಚಾರಣೆ
Advertisement
Advertisement
ವಾದ ಆಲಿಸಿದ ಪೀಠ ಈಗಾಗಲೇ ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವ ಹಿನ್ನೆಲೆ ವಿಚಾರಣೆ ಅಲ್ಲೇ ಮುಂದುವರಿಸಿ, ಪ್ರಕರಣವನ್ನು ಪ್ರಸ್ತಾಪಿಸಿ ನಾವು ಅರ್ಜಿ ಇತ್ಯರ್ಥಪಡಿಸಲು ಹೈಕೋರ್ಟ್‌ಗೆ ನಿರ್ದೇಶನ ನೀಡುತ್ತಿದ್ದೇವೆ ಎಂದು ಆದೇಶಿಸಿದರು. ಸುಪ್ರೀಂ ಕೋರ್ಟ್ ಈ ಆದೇಶದಿಂದ ಪ್ರಕರಣ ಈಗ ಮತ್ತೆ ಹೈಕೋರ್ಟ್ ಅಂಗಳ ತಲುಪಿದೆ.
Advertisement
2017 ರಲ್ಲಿ ಡಿ.ಕೆ.ಶಿವಕುಮಾರ್ ವಾಸ್ತವ್ಯವಿದ್ದ ಈಗಲ್‌ಟನ್ ರೆಸಾರ್ಟ್ ಮತ್ತು ಅವರ ಸಹಚರರ ಮೇಲೆ ದಾಳಿ ಮೇಲೆ ದಾಳಿ ಮಾಡಿದ್ದ ಐಟಿ ಸುಮಾರು 8.59 ಕೋಟಿ ಹಣ ವಶಪಡಿಸಿಕೊಂಡಿತ್ತು. ಲೆಕ್ಕಕ್ಕೆ ಸಿಗದ ಈ ಹಣವನ್ನು ಡಿ.ಕೆ.ಶಿವಕುಮಾರ್ ತಮ್ಮ ಸಹಚರರ ಬಳಿ ಇರಿಸಿದ್ದರು ಎಂದು ಆರೋಪಿಸಿತ್ತು. ಇದೇ ಪ್ರಕರಣದಲ್ಲಿ ಇಡಿ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿತ್ತು. ಈ ಬಗ್ಗೆ ಸರ್ಕಾರಕ್ಕೆ ಪತ್ರ ಬರೆದಿದ್ದ ಇಡಿ ಪಿಸಿ ಆ್ಯಕ್ಟ್ ನಡಿ ತನಿಖೆ ನಡೆಸಲು ಸಿಬಿಐಗೆ ನೀಡಲು ಶಿಫಾರಸು ಮಾಡಿತ್ತು. ಇದನ್ನೂ ಓದಿ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ – ಇಡಿ ಬೆನ್ನಲ್ಲೇ ಡಿಕೆಶಿಗೆ ಐಟಿ ಶಾಕ್
Advertisement
ಶಿಫಾರಸು ಆಧರಿಸಿ ಅಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರ ಸಿಬಿಐ ತನಿಖೆಗೆ ನೀಡಿತ್ತು. ಸರ್ಕಾರದ ನಡೆಯನ್ನು ಪ್ರಶ್ನಿಸಿ ಡಿಕೆಶಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಏಕ ಸದಸ್ಯ ಪೀಠ ಅರ್ಜಿ ವಜಾ ಮಾಡಿತ್ತು. ಇದನ್ನು ಪ್ರಶ್ನೆ ಮಾಡಿ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ವಿಚಾರಣೆ ನಡೆಸಿದ ವಿಭಾಗೀಯ ಪೀಠ ತನಿಖೆಗೆ ತಡೆ ನೀಡಿತ್ತು. ಪ್ರತ್ಯೇಕ ಪ್ರಕರಣ ಒಂದರಲ್ಲಿ ಸಿಬಿಐ ತನಿಖೆಗೆ ನೀಡಿದ್ದ ತಡೆಯನ್ನು ಹೈಕೋರ್ಟ್ ರದ್ದುಪಡಿಸಿದೆ.