ಬೆಳಗಾವಿ: ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿಯವರು ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಸಂಬಂಧ ಅಥಣಿ ಅನರ್ಹ ಶಾಸಕ ಮಹೇಶ್ ಕುಮುಟಳ್ಳಿ ಕಣ್ಣೀರು ಹಾಕಿದ್ದಾರೆ.
ಡಿಸಿಎಂ ಹೇಳಿಕೆ ಸಂಬಂಧ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ಕುಮುಟಳ್ಳಿ, ನನಗೆ ಯಾರೇ ವಿಷ ನೀಡಿದರೂ ಅಮೃತ ಆಗಲಿ. ಅವರು ಹಾಗೆ ಮಾತನಾಡಬಾರದಿತ್ತು, ಆದರೆ ಮಾತನಾಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
Advertisement
ಈ ವಿಚಾರ ತಡವಾಗಿ ನನ್ನ ಗಮನಕ್ಕೆ ಬಂದಿದೆ. ಅವರು ಆ ರೀತಿ ಮಾತಾಡಬಾರದಾಗಿತ್ತು. ನನಗೆ ಯಾರೇ ವಿಷ ನೀಡಿದರೂ ಅದು ಅಮೃತವಾಗಲಿ ಎಂದು ಪ್ರಾರ್ಥನೆ ಮಾಡುತ್ತೇನೆ. ಅವರು ಯಾವ ಅರ್ಥದಲ್ಲಿ ಮಾತನಾಡಿದ್ದಾರೆ ಎಂದು ನನಗೆ ಅರ್ಥವಾಗಿಲ್ಲ. ಈಗಾಗಲೇ ವಿಡಿಯೋ ವೈರಲ್ ಆಗಿದೆ. ಹೀಗಾಗಿ ಈ ವಿಷಯವನ್ನ ಯಾರ ಗಮನಕ್ಕೂ ತರುವುದಿಲ್ಲ ಎಂದು ಹೇಳಿದ್ದಾರೆ.
Advertisement
Advertisement
ಸವದಿ ಹೇಳಿದ್ದೇನು?:
ಕೃಷ್ಣಾ ನದಿ ಪ್ರವಾಹ ಪೀಡಿತ ಗ್ರಾಮಕ್ಕೆ ಲಕ್ಷ್ಮಣ ಸವದಿ ಭೇಟಿ ನೀಡಿದ್ದರು. ಈ ವೇಳೆ ಅನರ್ಹ ಶಾಸಕ ಮಹೇಶ್ ಕುಮಟಳ್ಳಿ ಕುರಿತು ಅಪನಿಂದನೆ ಮಾಡಿದ್ದರು. ಪ್ರವಾಹ ಪೀಡಿತ ಗ್ರಾಮಗಳಿಗೆ ಸಂತ್ರಸ್ತರ ಅಳಲು ಕೇಳಲು ಹೋಗುತ್ತಿದ್ದಾಗ ತಮ್ಮ ಬೆಂಬಲಿಗನ ಜೊತೆ ಮೊಬೈಲ್‍ನಲ್ಲಿ ಮಾತನಾಡುತ್ತಾ, ಮುಂಜಾನೆ ಕುಮಟಳ್ಳಿ ಅಂತಹ ದರಿದ್ರ ಮಕ್ಕಳ ಹೆಸರು ನೆನಪಿಸಬೆಡಿ. ಅವನ ಸುದ್ದಿ ತಗೊಂಡ್ ನಾನೇನು ಮಾಡಲಿ. ನನ್ನ ಮೂಡ್ ಹಾಳು ಮಾಡಬೇಡಿ ಎಂದು ಹೇಳುವ ಮೂಲಕ ನಿಂದಿಸಿದ್ದರು.
Advertisement
ಸದ್ಯ ಸವದಿ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದ್ದು, ಬಿಎಸ್‍ವೈ ಅವರನ್ನು ಸಿಎಂ ಮಾಡಿದ್ದ ಅನರ್ಹ ಶಾಸಕನಿಗೆ ದರಿದ್ರ ಪಟ್ಟ ನೀಡಿರುವುದು ಚರ್ಚೆಗೆ ಗ್ರಾಸವಾಗಿದೆ.