ಬೆಂಗಳೂರು: ರಾಜಕೀಯ ಭವಿಷ್ಯದ ಬಗ್ಗೆ ಆತಂಕಗೊಂಡ ಅನರ್ಹ ಶಾಸಕರು ಸೇಫ್ ಗೇಮ್ ಪ್ಲಾನ್ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ತೀರ್ಪಿಗು ಮುನ್ನ ಅನರ್ಹರು ಚುನಾವಣೆ ಆಯೋಗದ ಮೊರೆ ಹೋಗಿದ್ದಾರೆ.
ಅನರ್ಹಗೊಂಡ 17 ಶಾಸಕರು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಸುಪ್ರೀಂ ಕೋರ್ಟ್ ತೀರ್ಪು ಬರೋತನಕ ಉಪ ಚುನಾವಣೆ ನಡೆಸದಂತೆ ಚುನಾವಣೆ ಆಯೋಗಕ್ಕೆ ಅನರ್ಹರು ಮನವಿ ಮಾಡಿದ್ದಾರೆ. ಈ ಮೂಲಕ ಅತೃಪ್ತ ನಾಯಕರು ಸೇಫ್ ಗೇಮ್‍ಗಿಳಿದಿದ್ದಾರೆ.
Advertisement
ಸ್ಪೀಕರ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟಿಗೆ ಸಲ್ಲಿಸಿರುವ ಅರ್ಜಿ ವಿಚಾರಣೆಗೆ ದಿನಾಂಕ ನಿಗದಿ ಪಡಿಸುವಂತೆ ಅನರ್ಹ ಶಾಸಕರು ನ್ಯಾ. ಎನ್.ವಿ.ರಮಣ ನೇತೃತ್ವದ ದ್ವಿಸದಸ್ಯ ಪೀಠದ ಮುಂದೆ ಮನವಿ ಮಾಡಿಕೊಂಡಿದ್ದರು. ತುರ್ತು ಅರ್ಜಿ ವಿಚಾರಣೆ ಸಾಧ್ಯವಿಲ್ಲ ಎಂದು ಅನರ್ಹ ಶಾಸಕರಿಗೆ ಸುಪ್ರೀಂಕೋರ್ಟ್ ಶಾಕ್ ನೀಡಿತ್ತು.
Advertisement
Advertisement
ಈ ಹಿಂದೆ ಅನರ್ಹ ಶಾಸಕರು ನ್ಯಾ.ಅರುಣ್ ಮಿಶ್ರಾ ದ್ವಿಸದಸ್ಯ ಪೀಠದ ಮುಂದೆ ತುರ್ತು ವಿಚಾರಣೆ ನಡೆಸುವಂತೆ ಮನವಿ ಮಾಡಿಕೊಂಡಿದ್ದರು. ಆದರೆ ನ್ಯಾ.ಅರುಣ್ ಮಿಶ್ರಾ ದ್ವಿಸದಸ್ಯ ಪೀಠ ತುರ್ತು ವಿಚಾರಣೆಗೆ ಒಪ್ಪಿರಲಿಲ್ಲ. ಮತ್ತೊಮ್ಮೆ ಅರ್ಜಿಯ ತುರ್ತು ವಿಚಾರಣೆ ನಡೆಸಬೇಕೆಂದು ಮನವಿ ಮಾಡಿಕೊಂಡಿದ್ದರು. ತುರ್ತು ವಿಚಾರಣೆ ಸಾಧ್ಯವಿಲ್ಲ ಎಂದು ಅನರ್ಹ ಶಾಸಕರ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿತ್ತು. ಮಂಗಳವಾರ ತ್ರಿಸದಸ್ಯ ಪೀಠ ಅನರ್ಹರ ತುರ್ತು ವಿಚಾರಣೆಗೆ ಒಪ್ಪಿಗೆ ಸೂಚಿಸಿದೆ.
Advertisement
ಆದ್ದರಿಂದ ಅನರ್ಹ ಶಾಸಕರಾದ ಕಾಂಗ್ರೆಸ್ಸಿನ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ಮಸ್ಕಿಯ ಪ್ರತಾಪ್ ಗೌಡ ಪಾಟೀಲ್, ರಾಣೆಬೆನ್ನೂರು ಶಾಸಕ ಆರ್ ಶಂಕರ್, ಮಸ್ಕಿ ಶಾಸಕ ಪ್ರತಾಪ್‍ಗೌಡ ಪಾಟೀಲ್, ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್, ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್, ವಿಜಯನಗರದ ಆನಂದ್ ಸಿಂಗ್, ರಾಜರಾಜೇಶ್ವರಿ ನಗರದ ಮುನಿರತ್ನ, ಚಿಕ್ಕಬಳ್ಳಾಪುರದ ಕೆ.ಸುಧಾಕರ್, ಹೊಸಕೋಟೆಯ ಎಂಟಿಬಿ ನಾಗರಾಜ್, ಕಾಗವಾಡದ ಶ್ರೀಮಂತ್ ಪಾಟೀಲ್, ಯಲ್ಲಾಪುರದ ಶಿವರಾಂ ಹೆಬ್ಬಾರ್, ಶಿವಾಜಿನಗರದ ರೋಷನ್ ಬೇಗ್, ಕೆ.ಆರ್.ಪುರಂನ ಬೈರತಿ ಬಸವರಾಜ್. ಜೆಡಿಎಸ್ ಶಾಸಕರಾದ ಮಹಾಲಕ್ಷ್ಮಿ ಲೇಔಟ್ ಶಾಸಕ ಗೋಪಾಲಯ್ಯ, ಹುಣಸೂರಿನ ಹೆಚ್.ವಿಶ್ವನಾಥ್ ಮತ್ತು ಕೆ.ಆರ್.ಪೇಟೆಯ ನಾರಾಯಣಗೌಡ ಅವರು ಸೇಫ್ ಗೇಮ್‍ನತ್ತ ತಮ್ಮ ಚಿತ್ತ ಹರಿಸಿದ್ದಾರೆ.