ನವದೆಹಲಿ: ಕಾಂಗ್ರೆಸ್ (Congress) ಮುಖಂಡ ರಾಹುಲ್ ಗಾಂಧಿ (Rahul Gandhi) ಅವರು ಸಂಸತ್ (Parliament) ಸದಸ್ಯತ್ವದಿಂದ ಅನರ್ಹಗೊಂಡ ಬೆನ್ನಲ್ಲೇ ತಮ್ಮ ಟ್ವಿಟ್ಟರ್ (Twitter) ಖಾತೆಯಲ್ಲಿ ಅನರ್ಹಗೊಂಡ ಸಂಸದ ಎಂದು ಬಯೋವನ್ನು ಬದಲಿಸಿದ್ದಾರೆ.
ರಾಹುಲ್ ಗಾಂಧಿಯವರ ಟ್ವಿಟ್ಟರ್‌ನ ಅಧಿಕೃತ ಖಾತೆಯ ಬಯೋದಲ್ಲಿ ಈ ರೀತಿ ಬದಲಾಗಿದೆ. ಬಯೋದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸದಸ್ಯ ಹಾಗೂ ಅನರ್ಹಗೊಂಡ ಸಂಸದ ಎಂದು ಬರೆಯಲಾಗಿದೆ.
Advertisement
Advertisement
ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹತೆಗೊಳಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷ ಇಂದು ದೇಶಾದ್ಯಂತ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದೆ.
Advertisement
ಸಂಸದ ಸ್ಥಾನದಿಂದ ಅನರ್ಹ: ಮಾನನಷ್ಟ ಪ್ರಕರಣ ಸಂಬಂಧ ಸೂರತ್ ಕೋರ್ಟ್ 2 ವರ್ಷ ಜೈಲು ಶಿಕ್ಷೆ ವಿಧಿಸಿದ ಬೆನ್ನಲ್ಲೇ ಲೋಕಸಭೆ ಸಚಿವಾಲಯದ ಕಾರ್ಯದರ್ಶಿ ರಾಹುಲ್ ಗಾಂಧಿ ಅವರನ್ನು ಕೇರಳದ ವಯನಾಡ್ ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಆದೇಶ ಹೊರಡಿಸಿದ್ದಾರೆ.
Advertisement
ಕಳೆದ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕರ್ನಾಟಕದ ಕೋಲಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಓರ್ವ ಕಳ್ಳ ಎಂದು ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ನಿರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಇವರೆಲ್ಲರ ಸರ್ ನೇಮ್ ಒಂದೇ ಆಗಿದ್ದು, ಈ ಎಲ್ಲಾ ಕಳ್ಳರು ದೇಶವನ್ನು ಲೂಟಿ ಮಾಡಿದ್ದಾರೆ ಎಂದು ರಾಹುಲ್ ತಮ್ಮ ಭಾಷಣದಲ್ಲಿ ಹರಿಹಾಯ್ದಿದ್ದರು. ಇದನ್ನೂ ಓದಿ: ರಾಹುಲ್ ಗಾಂಧಿ ಸಂಸದ ಸ್ಥಾನ ಅನರ್ಹ – ವಯನಾಡಿನಲ್ಲಿ ಬ್ಲ್ಯಾಕ್ ಡೇ ಆಚರಣೆ
ಈ ಹೇಳಿಕೆಯನ್ನು ಆಧರಿಸಿ ಬಿಜೆಪಿ ಶಾಸಕ ಮತ್ತು ಗುಜರಾತ್ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ಕ್ರಿಮಿನಲ್ ಮಾನಹಾನಿ ದೂರು ದಾಖಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ್ದ ಸೂರತ್ ಕೋರ್ಟ್ ರಾಹುಲ್ ದೋಷಿ ಎಂದು ತೀರ್ಪು ನೀಡಿ 2 ವರ್ಷ ಜೈಲು ಶಿಕ್ಷೆಯನ್ನು ಪ್ರಕಟಿಸಿತ್ತು. ಇದನ್ನೂ ಓದಿ: ನಾನು ಸಾವರ್ಕರ್ ಅಲ್ಲ, ಕ್ಷಮೆ ಕೇಳುವುದಿಲ್ಲ: ಅನರ್ಹತೆ ಕುರಿತು ರಾಹುಲ್ ಗಾಂಧಿ