ಶಿವಮೊಗ್ಗ: ಸಿಎಂ ಸಿದ್ದರಾಮಯ್ಯ ರಾಷ್ಟ್ರಪತಿ (president) ಬಗ್ಗೆ ಏಕವಚನದಲ್ಲಿ ಮಾತನಾಡುವುದು ಸರಿಯಲ್ಲ ಎಂದು ಎಂಎಲ್‌ಸಿ ಭೋಜೇಗೌಡ (BojeGowda) ಹೇಳಿದ್ದಾರೆ.
ಚಿತ್ರದುರ್ಗದಲ್ಲಿ (Chitradurga) ನಡೆದ ಶೋಷಿತ ಸಮುದಾಯಗಳ ಜಾಗೃತಿ ಸಮಾವೇಶದಲ್ಲಿ ರಾಷ್ಟ್ರಪತಿಗಳ ಕುರಿತು ಸಿದ್ದರಾಮಯ್ಯನವರು (Siddaramaiah) ಏಕವಚನದಲ್ಲಿ ಮಾತನಾಡಿದ ವಿಚಾರ ಕುರಿತು ಅವರು ಪ್ರತಿಕ್ರಿಯಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಷ್ಟ್ರಪತಿಗಳ ಬಗ್ಗೆ ಏಕವಚನದಲ್ಲಿ ಮಾತಾಡುವುದು ಸರಿಯಲ್ಲ. ರಾಷ್ಟ್ರಪತಿ ಅವರು ದೇಶದ ಪ್ರಥಮ ಪ್ರಜೆ. ಮುಖ್ಯಮಂತ್ರಿಯಾಗಿ ಈ ರೀತಿ ಅಗೌರವ ತೋರುವುದು ಸರಿಯಲ್ಲ. ಅವರಿಗೆ ಇದು ಶೋಭೆ ತರುವುದಿಲ್ಲ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಗೌರವ ಕೊಡಬೇಕು ಎಂದು ತಿಳಿ ಹೇಳಿದ್ದಾರೆ. ಇದನ್ನೂ ಓದಿ: ಶೋಷಿತರ ಸಮಾವೇಶದಲ್ಲಿ ಕ್ಷಿಂಟಾಲ್‌ಗಟ್ಟಲೇ ಚಿಕನ್ ಬಿರಿಯಾನಿ ನೆಲದ ಪಾಲು
Advertisement
Advertisement
ಕೆರಗೋಡು ಹನುಮ ಧ್ವಜ ವಿಚಾರ ಬಗ್ಗೆ ಪ್ರತಿಕ್ರಿಯಿಸಿ, ಈ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ. ರಾಮ ಮಂದಿರ ವಿಚಾರದಲ್ಲೂ ಕಾಂಗ್ರೆಸ್ ರಾಜಕೀಯ ಮಾಡಿದೆ. ವಿನಾಕಾರಣ ಬಿಜೆಪಿಯ ಮೇಲೆ ಆರೋಪ ಮಾಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ವಿಜಯಪುರದಲ್ಲಿ ಎರಡು ಬಾರಿ ಭೂಕಂಪನ – ಆತಂಕದಲ್ಲಿ ಜನರು
Advertisement
Advertisement