ವಿಜಯಪುರ: ಇಬ್ಬರು ಅತೃಪ್ತ ಶಾಸಕರು ಶುಕ್ರವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಂಪರ್ಕಿಸಿದ್ದರು ಎಂದು ಮಾಜಿ ಗೃಹ ಸಚಿವ ಎಂ.ಬಿ.ಪಾಟೀಲ್ ಹೊಸ ಬಾಂಬ್ ಸಿಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಬ್ಬರು ಅತೃಪ್ತ ಶಾಸಕರು ಶುಕ್ರವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಂಪರ್ಕಿಸಿದ್ದರು. ಆದರೆ, ಸಿದ್ದರಾಮಯ್ಯ ಅವರು ಇಬ್ಬರ ಕರೆಯನ್ನೂ ಸ್ವೀಕರಿಸಿಲ್ಲ ಎಂದು ತಿಳಿಸಿದ್ದಾರೆ.
Advertisement
Advertisement
ಪಕ್ಷಾಂತರ ನಿಷೇಧ ಕಾಯ್ದೆಗೆ ತಿದ್ದುಪಡಿ ಆಗಬೇಕಿದೆ. ಈ ಕಾಯ್ದೆಯ 10ನೇ ಶೆಡ್ಯೂಲ್‍ಗೆ ತಿದ್ದುಪಡಿ ತರಬೇಕು. ಅತೃಪ್ತ ಶಾಸಕರನ್ನು ಅನರ್ಹಗೊಳಿಸಿ ಸ್ಪೀಕರ್ ನೀಡಿರುವ ತೀರ್ಪನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿಯಬೇಕು. ಈ ಮೂಲಕ ಪಕ್ಷಾಂತರ ನಿಷೇಧ ಕಾಯ್ದೆಯನ್ನು ವ್ಯವಸ್ಥಿತವಾಗಿ ಜಾರಿಗೆ ತರಲು ಸಹಕರಿಸಬೇಕಿದೆ ಎಂದರು.
Advertisement
ಗೃಹ ಸಚಿವನಾಗಿ ನಾನೇ ಝೀರೋ ಟ್ರಾಫಿಕ್ ಬಳಸಿಲ್ಲ. ಅಂಥದ್ದರಲ್ಲಿ ಅತೃಪ್ತರಿಗೆ ಹೇಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಲು ಸಾಧ್ಯ. ಆಡಳಿತ ಪಕ್ಷದ ಶಾಸಕರನ್ನು ಸೆಳೆದು, ಪಕ್ಷಾಂತರ ಮಾಡಿಸಿ ಅವರಿಗೆ ಸಚಿವ ಸ್ಥಾನದ ಆಫರ್ ನೀಡುವುದು ಸರಿಯಾದ ವ್ಯವಸ್ಥೆಯಲ್ಲ. ಈ ರೀತಿಯ ವ್ಯವಸ್ಥೆ ಪ್ರಾರಂಭವಾದರೆ ಬೇರೆ ರಾಜ್ಯಗಳಿಗೂ ಹರಡುತ್ತದೆ. ನಂತರ ಇದು ಕರ್ನಾಟಕದ ಫಾರ್ಮುಲಾ ಎಂದು ದೇಶಾದ್ಯಂತ ಪ್ರಚಾರ ಪಡೆಯುತ್ತದೆ. ಆಗ ರಾಜ್ಯದ ಗೌರವಕ್ಕೆ ಧಕ್ಕೆ ಬರುತ್ತದೆ ಇದನ್ನು ರಾಜಕೀಯ ನಾಯಕರು ಅರಿಯಬೇಕಿದೆ ಎಂದು ಹರಿಹಾಯ್ದರು.
Advertisement
ಯಡಿಯೂರಪ್ಪನವರಿಗೆ ಶತಾಯಗತಾಯ ಅಧಿಕಾರಕ್ಕೇರುವುದು ಅನಿವಾರ್ಯವಾಗಿದೆ. ಅವರು ರಾಜಕೀಯ ಜೀವನದ ಕಟ್ಟ ಕಡೆಯ ಹಂತದಲ್ಲಿದ್ದಾರೆ. ಹೀಗಾಗಿ ನಾಲ್ಕು ವರ್ಷ ಕಾಯುವ ತಾಳ್ಮೆ ಅವರಿಗಿಲ್ಲ. ನಾಲ್ಕು ವರ್ಷದ ನಂತರ ಮುಖ್ಯಮಂತ್ರಿಯಾಗುತ್ತೇನೋ ಇಲ್ಲವೋ ಎಂದು ಈ ರೀತಿ ಮಾಡಿದ್ದಾರೆ. ಅವರ ಪಕ್ಷದ ನಿಯಮದಂತೆ ವಯಸ್ಸಿನ ಪರಿಮಿತಿಯಲ್ಲಿ ಆಡಳಿತ ನಡೆಸಬೇಕಾಗಿದೆ. ಹೀಗಾಗಿ ಯಡಿಯೂರಪ್ಪನವರು ತರಾತುರಿಯಲ್ಲಿ ಸರ್ಕಾರ ರಚನೆ ಮಾಡಿದ್ದು, ಇದು ಅನೈತಿಕ ಸರ್ಕಾರವಾಗಿದೆ. ಈ ಸರ್ಕಾರ ತುಂಬಾ ದಿನ ಉಳಿಯುವುದಿಲ್ಲ. ಇದರ ಅವಧಿ ಕೇವಲ ಆರು ತಿಂಗಳಿಂದ ಒಂದು ವರ್ಷ ಮಾತ್ರ ಎಂದು ಅವರು ವಾಗ್ದಾಳಿ ನಡೆಸಿದರು.
ಸಿದ್ದರಾಮಯ್ಯ ಅವರಿಗೆ ಕರೆ ಮಾಡಿರುವ ಅತೃಪ್ತರು ಯಾರೆಂದು ತನಗೆ ಗೊತ್ತು, ಆದರೆ ಮಾಧ್ಯಮದ ಮುಂದೆ ನಾನು ಹೇಳೋದು ಸರಿಯಿರಲ್ಲ. ಅದನ್ನು ಸಿದ್ದರಾಮಯ್ಯ ಅವರೇ ಹೇಳುತ್ತಾರೆ ಎಂದು ಹೇಳುವ ಮೂಲಕ ಕರೆ ಮಾಡಿದವರು ಯಾರು ಎಂಬುದನ್ನು ಎಂ.ಬಿ ಪಾಟೀಲ್ ಬಾಯಿ ಬಿಟ್ಟಿಲ್ಲ.