ನವದೆಹಲಿ: ಟಿಕೆಟ್ ಹಂಚಿಕೆ ಮುನ್ನವೇ ಕಾಂಗ್ರೆಸ್ ಹಿರಿಯ ನಾಯಕರಲ್ಲಿ ಭಿನ್ನಮತ ಭುಗಿಲೆದ್ದಿದೆ. ಬೆಂಬಲಿಗರಿಗೆ ಟಿಕೆಟ್ ನೀಡುವ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಮತ್ತು ವೀರಪ್ಪ ಮೊಯ್ಲಿ ನಡುವೆ ಮುನಿಸು ಶುರುವಾಗಿದೆ.
ಇಂದು ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಹಿನ್ನೆಲೆಯಲ್ಲಿ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ ನೇತೃತ್ವದಲ್ಲಿ ಗುರುವಾರ ರಾತ್ರಿ ಪೂರ್ವಭಾವಿ ಸಭೆ ನಡೆದಿತ್ತು. ದೆಹಲಿಯ ಕಾಂಗ್ರೆಸ್ ವಾರ್ ರೂಂನಲ್ಲಿ ನಡೆದ ಸಭೆಯಲ್ಲಿ ಅಸಮಧಾನ ಸ್ಫೋಟವಾಗಿದೆ ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.
Advertisement
ಬೀದರ್ ನಿಂದ ಅಶೋಕ್ ಖೇಣಿ ಟಿಕೆಟ್ ನೀಡಲು ಸಿಎಂ ಒತ್ತಡ ಹೇರಿದ್ರು. ಇದ್ರಿಂದ ಸಿಟ್ಟಾದ ಮಲ್ಲಿಕಾರ್ಜುನ ಖರ್ಗೆ ಟಿಕೆಟ್ ಹಂಚಿಕೆ ವಿಚಾರದಲ್ಲಿ ತಮ್ಮನ್ನು ನಿರ್ಲಕ್ಷ್ಯ ಮಾಡಲಾಗ್ತಿದೆ. ಕನಿಷ್ಠ ಹೈದರಾಬಾದ್ ಕರ್ನಾಟಕ ವ್ಯಾಪ್ತಿಯಲ್ಲಾದ್ರೂ ನಮ್ಮನ್ನು ಗಂಭೀರವಾಗಿ ಪರಿಗಣಿಸಿ ಎಂದು ಆಕ್ರೋಶಗೊಂಡು ಸಭೆಯಿಂದ ಹೊರ ಬಂದಿದ್ದಾರೆ. ಖರ್ಗೆ ಬೆನ್ನಲ್ಲೆ ವೀರಪ್ಪ ಮೊಯ್ಲಿ ಕೂಡಾ ತಮ್ಮ ಅಮಸಧಾನ ಹೊರ ಹಾಕಿದ್ದಾರೆ. ಗಣಿ ಆರೋಪ ಇರುವ ಆನಂದ ಸಿಂಗ್, ನಾಗೇಂದ್ರಗೆ ಟಿಕೆಟ್ ನೀಡಿವ ವಿಚಾರದಲ್ಲಿ ಮೊಯ್ಲಿ ಮುನಿಸಿಕೊಂಡಿದ್ದಾರಂತೆ. ಅಲ್ಲದೆ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆಯದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಂಜೇಗೌಡರಿಗೆ ಟಿಕೆಟ್ ನೀಡ್ತಿರುವುದಕ್ಕೂ ಸಿಡಿಮಿಡಿಗೊಂಡಿದ್ದಾರೆ ಎನ್ನಲಾಗಿದೆ.
Advertisement
Advertisement
ಫಸ್ಟ್ ಲಿಸ್ಟ್ ರಿಲೀಸ್ ಸಾಧ್ಯತೆ: ಇಂದು ಕಾಂಗ್ರೆಸ್ ಕೇಂದ್ರ ಚುನಾವಣಾ ಪರಿಶೀಲನಾ ಸಮಿತಿ ಸಭೆ ನಡೆಯಲಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಸೋನಿಯಾಗಾಂಧಿ, ಮಾಜಿ ಪ್ರಧಾನಿ ಮನಮೋಹನ ಸಿಂಗ್, ಮಧುಸೂದನ್ ಮಿಸ್ತ್ರಿ, ಮಲ್ಲಿಕಾರ್ಜುನ ಖರ್ಗೆ, ವೀರಪ್ಪ ಮೊಯ್ಲಿ, ರಾಜ್ಯ ಉಸ್ತುವಾರಿ ಕೆ. ವೇಣುಗೋಪಾಲ, ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ.
Advertisement
ನಿನ್ನೆ ರಾತ್ರಿ ನಡೆದ ಸಭೆಯ ಅಂತಿಮ ವರದಿಯನ್ನು ಚುನಾವಣಾ ಸಮಿತಿಯ ಮುಂದೆ ಪ್ರಸ್ತಾಪಿಸಲಿದ್ದಾರೆ. ಹಾಲಿ ಶಾಸಕರು, ಬಂಡಾಯ ಶಾಸಕರು, ಹೊಸದಾಗಿ ಸೇರ್ಪಡೆಗೊಂಡವರಿಗೆ ಟಿಕೆಟ್ ನೀಡುವ ಬಗ್ಗೆ, ಪ್ರಮುಖವಾಗಿ, ಎರಡು ಕ್ಷೇತ್ರಗಳಲ್ಲಿ ಸ್ವರ್ಧೆ ಹಾಗೂ ಪ್ರಮುಖ ನಾಯಕರ ಮಕ್ಕಳಿಗೆ ಟಿಕೆಟ್ ನೀಡುವ ಬಗ್ಗೆಯೂ ಅಂತಿಮ ತೀರ್ಮಾನ ಮಾಡಲಿದ್ದಾರೆ. ಇಂದು ಸಂಜೆ ಹೊತ್ತಿಗೆ ಮೊದಲ ಹಂತದಲ್ಲಿ 130-140 ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.