ಮಡಿಕೇರಿ: ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ, ಆಯ್ಕೆಯಾದ ವಿಕಲಚೇತನ ಫಲಾನುಭವಿಗಳಿಗೆ ಇಂದು ದ್ವಿಚಕ್ರ ವಾಹನಗಳನ್ನು ವಿತರಿಸಲಾಗಿದೆ.
ಮಡಿಕೇರಿಯಲ್ಲಿ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆಯಡಿ 2020-21ನೇ ಸಾಲಿಗೆ ಕೊಡಗು ಜಿಲ್ಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಮುದ್ದಣ್ಣ ಅವರ ಸಮ್ಮುಖದಲ್ಲಿ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಲಾಯಿತು. ಇದನ್ನೂ ಓದಿ: ಜ್ಯೋತಿರಾದಿತ್ಯ ಸಿಂಧಿಯಾರನ್ನು ಭೇಟಿಯಾದ ಸಿಎಂ ಬೊಮ್ಮಾಯಿ
Advertisement
Advertisement
ಜಿಲ್ಲೆಯಲ್ಲಿ ಇರುವ ವಿಕಲಚೇತನರು ಹಾಗೂ ಹಿರಿಯ ನಾಗರೀಕರು ಸ್ವಾವಲಂಬಿ ಜೀವನ ನಡೆಸಲು ಹಾಗೂ ಬೇರೆಯವರಿಗೂ ತೊಂದರೆ ಕೊಡದೆ, ಬದುಕು ನಡೆಸಲು ಯಂತ್ರಚಾಲಿತ ದ್ವಿಚಕ್ರ ವಾಹನಗಳಿಗೆ ಅರ್ಜಿ ಹಾಕಿದ್ದರು. ಈ ಹಿನ್ನೆಲೆ ಇಲಾಖೆಯ ಅಧಿಕಾರಿಗಳು ಜಿಲ್ಲೆಯಲ್ಲಿ ಇರುವ ವಿಶೇಷ ಚೇತನರ ಸರ್ವೆ ಕಾರ್ಯ ಮಾಡಲಾಗಿದ್ದು, ಆಯ್ಕೆಯಾದ ವಿಕಲಚೇತನ ಫಲಾನುಭವಿಗಳಿಗೆ ಇಂದು ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ಹಸ್ತಾಂತರ ಮಾಡಲಾಯಿತು.
Advertisement
ಈ ಸಂದರ್ಭದಲ್ಲಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ವಿಮಲಾ, ನಿರೂಪಣಾಧಿಕಾರಿ ಪೂಣಚ್ಚ, ಜಿಲ್ಲಾ ದಿವ್ಯಾಂಗ ಒಕ್ಕೂಟ ಅಧ್ಯಕ್ಷರಾದ ಮಹೇಶ್ವರ್, ಉಪಾಧ್ಯಕ್ಷೆ ಆಯಿಷಾ, ಕಾರ್ಯದರ್ಶಿ ಲೋಹಿತ್ ಮತ್ತು ವಿಕಲಚೇತನ ಇಲಾಖೆಯ ಸಿಬ್ಬಂದಿ ಹಾಜರಿದ್ದರು. ಇದನ್ನೂ ಓದಿ: ಡ್ರೋನ್ ದಾಳಿ- 10 ಜನರಿಗೆ ತೀವ್ರ ಗಾಯ