ಬೆಂಗಳೂರು: ಗ್ರಾಮೀಣ ಭಾಗದ ರೈತಾಪಿ ಹಾಗೂ ಬಡ ಜನರ ಅನುಕೂಲಕ್ಕಾಗಿ ಹಿರಿಯ ಚಿತ್ರನಟಿ ಡಾ. ಲೀಲಾವತಿ ನಿರ್ಮಾಣ ಮಾಡಿದ ಆಸ್ಪತ್ರೆ ವೈದ್ಯರ ಕೊರತೆಯಿಂದ ಬೀಗ ಹಾಕಲಾಗಿತ್ತು. ಈ ಬಗ್ಗೆ ಪಬ್ಲಿಕ್ ಟಿವಿ ವರದಿ ಮಾಡಿದ ಬಳಿಕ ಜಿಲ್ಲಾ ವೈದ್ಯಾಧಿಕಾರಿ ಎಚ್ಚೆತ್ತುಕೊಂಡಿದ್ದಾರೆ.
ಡಾ. ಲೀಲಾವತಿ ಆಸ್ಪತ್ರೆಗೆ ವೈದ್ಯರ ಕೊರತೆಯಿಂದ ಬೀಗ ಹಾಕಲಾಗಿತ್ತು. ಈ ಬಗ್ಗೆ ನಟ ವಿನೋದ್ ರಾಜ್ ಜಿಲ್ಲಾ ವೈದ್ಯಾಧಿಕಾರಿ ಯೋಗೀಶ್ ಗೌಡಗೆ ದೂರು ನೀಡಿ, ವೈದ್ಯರ ನೇಮಕ ಮಾಡುವಂತೆ ಮನವಿ ಮಾಡಿಕೊಂಡರು. ಬಳಿಕ ಪಬ್ಲಿಕ್ ಟಿವಿ ವರದಿಗೆ ಜಿಲ್ಲಾ ವೈದ್ಯಾಧಿಕಾರಿ ಯೋಗೀಶ್ ಗೌಡ ಸ್ಪಂದಿಸಿ “ಆಸ್ಪತ್ರೆಗೆ ಕೂಡಲೇ ವೈದ್ಯರನ್ನು ನೇಮಕ ಮಾಡುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೇ ಮತ್ತೆ ಈ ರೀತಿಯ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳುತ್ತೇವೆ” ಎಂದು ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ:ಹಿರಿಯ ನಟಿ ಡಾ. ಲೀಲಾವತಿ ನಿರ್ಮಾಣ ಮಾಡಿರೋ ಆಸ್ಪತ್ರೆಗೆ ಮತ್ತೆ ಸಂಕಷ್ಟ
Advertisement
Advertisement
ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ 2009ರಲ್ಲಿ ಲೀಲಾವತಿಯವರು ತಮ್ಮ ಸ್ವಂತ ಜಮೀನಿನಲ್ಲಿ ಆಸ್ಪತ್ರೆ ನಿರ್ಮಾಣ ಮಾಡಿದ್ದರು. ನಂತರ ಆಸ್ಪತ್ರೆಯನ್ನು ಸರ್ಕಾರದ ಸ್ವಾಧೀನಕ್ಕೆ ನೀಡಿ, ನೆಲಮಂಗಲ ಆಡಳಿತ ವೈಧ್ಯಾಧಿಕಾರಿ ಹೆಸರಿಗೆ ದಾಖಲಾತಿಗಳನ್ನು ವರ್ಗಾವಣೆ ಮಾಡಿದ್ದರು. ಆದರೆ ಆಸ್ಪತ್ರೆ ನಿರ್ಮಾಣ ಮಾಡಿ ಸರ್ಕಾರದ ಸ್ವಾಧೀನಕ್ಕೆ ನೀಡಿದ್ದರೂ ಇದುವರೆಗೂ ಸೂಕ್ತ ವೈದ್ಯರಿಲ್ಲದೆ ಆಸ್ಪತ್ರೆ ಸದಾ ಕಾಲ ಬಾಗಿಲು ಮುಚ್ಚಿರುವ ಸ್ಥಿತಿಯಲ್ಲೇ ಇರುತ್ತಿತ್ತು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv