DistrictsKarnatakaKoppalLatestMain Post

ಕೊಪ್ಪಳದಲ್ಲಿ ಪಿಎಫ್‍ಐ ಸಂಘಟನೆಯ ಜಿಲ್ಲಾಧ್ಯಕ್ಷ ಬಂಧನ

ಕೊಪ್ಪಳ: ದೇಶಾದ್ಯಂತ ರಾಷ್ಟ್ರೀಯ ತನಿಖಾ ದಳ (NIA) ಮತ್ತು ಜಾರಿ ನಿರ್ದೇಶನಾಲಯ 10ಕ್ಕೂ ಹೆಚ್ಚು ರಾಜ್ಯಗಳಲ್ಲಿ ಸೋಷಿಯಲ್ ಡೆಮಾಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(PFI) ಕಚೇರಿ ಮತ್ತು ನಾಯಕರ ನಿವಾಸದ ಮೇಲೆ ದಾಳಿ ನಡೆಸಿದೆ. ಈ ನಡುವೆ ಕರ್ನಾಟಕದ ಕೊಪ್ಪಳ (Koppala) ಜಿಲ್ಲೆಯ ಪಿಎಫ್‍ಐ ಸಂಘಟನೆಯ ಜಿಲ್ಲಾಧ್ಯಕ್ಷನನ್ನು ಅಧಿಕಾರಿಗಳು ಬಂಧಿಸಿದ್ದಾರೆ.

ಬೆಳಗಿನ ಜಾವ ಮೂರು ಗಂಟೆ ಸುಮಾರಿಗೆ ಪೊಲೀಸರು ಗಂಗಾವತಿ ನಗರದಲ್ಲಿರುವ ಪಿಎಫ್‍ಐ ಸಂಘಟನೆಯ ಜಿಲ್ಲಾಧ್ಯಕ್ಷ ಅಬ್ದುಲ್ ಫೈಯಾಜ್‍ನನ್ನು ಬಂಧಿಸಿದ್ದಾರೆ. ಎಸ್‍ಪಿ ನೇತೃತ್ವದಲ್ಲಿ ಪೊಲೀಸ್ ಇಲಾಖೆ ಸಿಬ್ಬಂದಿ ಅಬ್ದುಲ್ ಫೈಯಾಜ್‍ನನ್ನು (Abdul Fayyaz) ಬಂಧಿಸಿ ನಂತರ ಗಂಗಾವತಿಯಿಂದ ಬೆಂಗಳೂರಿನ ಕೆ.ಜಿ.ಹಳ್ಳಿ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗುತ್ತಿದ್ದಾರೆ. ಇದನ್ನೂ ಓದಿ: ಮಂಗಳೂರಿನ PFI, SDPI ಕಚೇರಿ ಮೇಲೆ NIA ದಾಳಿ

ಗುರುವಾರ ಬೆಳ್ಳಂಬೆಳಗ್ಗೆ 10ಕ್ಕೂ ಹೆಚ್ಚು ರಾಜ್ಯಗಳಲ್ಲಿ ಎನ್‍ಐಎ, ಇಡಿ ದಾಳಿ ಮುಂದುವರಿಸಿದ್ದು ರಾಜ್ಯದ ಪೊಲೀಸರ ನೆರವಿನೊಂದಿಗೆ ಪಿಎಫ್‍ಐ ಸಂಘಟನೆಯ 100ಕ್ಕೂ ಹೆಚ್ಚು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಉಗ್ರ ಸಂಘಟನೆ ಜೊತೆ ಸಂಪರ್ಕ-10 ರಾಜ್ಯಗಳ SDPI, PFI ಕಚೇರಿ, ನಾಯಕರ ಮನೆ ಮೇಲೆ NIA ದಾಳಿ

ಭಯೋತ್ಪಾದನೆಗೆ ಧನಸಹಾಯ, ತರಬೇತಿ ಶಿಬಿರಗಳನ್ನು ಆಯೋಜಿಸುವುದು ಮತ್ತು ನಿಷೇಧಿತ ಸಂಸ್ಥೆಗಳಿಗೆ ಸೇರಲು ಜನರನ್ನು ಮೂಲಭೂತವಾಗಿ ರೂಪಿಸುವ ವ್ಯಕ್ತಿಗಳ ವಸತಿ ಮತ್ತು ಅಧಿಕೃತ ಆವರಣದಲ್ಲಿ ಈ ಹುಡುಕಾಟಗಳನ್ನು ನಡೆಸಲಾಗುತ್ತಿದೆ.

Live Tv

Leave a Reply

Your email address will not be published.

Back to top button