ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ವಿದ್ಯಾರ್ಥಿನಿ ಬಸ್ಸಿನಲ್ಲೇ ಹೃದಯಾಘಾತದಿಂದ ಸಾವು

Public TV
Public TV - Digital Head
1 Min Read

ಚಿಕ್ಕೋಡಿ: ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಬೆಳಗಾವಿ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಬಸ್‍ನಲ್ಲಿಯೇ ಮೃತಪಟ್ಟಿದ್ದಾಳೆ.

ರಾಯಭಾಗ ತಾಲೂಕಿನ ಹಾರೂಗೇರಿ ಚನ್ನವೃಷಭೇಂದ್ರ ಕಾಲೇಜ್‍ನ ಮೀನಜಾ ಯಲಿಗಾರ (18) ಮೃತ ವಿದ್ಯಾರ್ಥಿನಿ. ವಿದ್ಯಾರ್ಥಿನಿ ಅಸ್ವಸ್ಥವಾಗಿದ್ದರಿಂದ ಪ್ರವಾಸಿ ಬಸ್ಸನ್ನು ಅಂಕೋಲಾ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ದಾರಿಯ ಮಧ್ಯದಲ್ಲಿಯೇ ಮೀನಜಾ ಸಾವನ್ನಪ್ಪಿದ್ದಾಳೆ.

ಘಟನೆಯ ವಿವರ: ಚನ್ನವೃಷಭೇಂದ್ರ ಕಾಲೇಜ್‍ನಲ್ಲಿ ಮೀನಜಾ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಶೈಕ್ಷಣಿಕ ಪ್ರವಾಸಕ್ಕೆಂದು ಯಾಣ, ಕುಮಟಾ, ಶಿರಸಿ, ಉಡುಪಿ ತಾಣಗಳಿಗೆ ವಿದ್ಯಾರ್ಥಿಗಳು ತೆರಳಿದ್ದರು. ಯಾಣಕ್ಕೆ ಭೇಟಿ ನೀಡಿ ಮುಂದಿನ ಸ್ಥಳಗಳಿಗೆ ಹೋಗುವ ಮುನ್ನವೇ ಮೀನಜಾ ಅಸ್ವಸ್ಥಗೊಂಡಿದ್ದಾಳೆ. ತಕ್ಷಣವೇ ಸಮೀಪದ ಅಂಕೋಲಾ ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದಾರೆ. ಆದರೆ ದಾರಿಯ ಮಧ್ಯದಲ್ಲಿ ಮೀನಜಾ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ.

ಮೀನಜಾ ಮೃತಪಟ್ಟಿದ್ದರಿಂದಾಗಿ ಪ್ರವಾಸವನ್ನು ಮೊಟಕುಗೊಳಿಸಿ ವಿದ್ಯಾರ್ಥಿಗಳು ಹಿಂದಿರುಗಿದ್ದಾರೆ. ಅಂಕೋಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article