ಮೈಸೂರು: ಟಿ.ನರಸೀಪುರದ ( T.Narasipura) ಕೆಂಪಯ್ಯನಹುಂಡಿ ಗೇಟ್ ಬಳಿಯ ಹೋಟೆಲ್ ಸಮೀಪ 10 ಸ್ಫೋಟಕ ವಸ್ತುಗಳು ಪತ್ತೆಯಾಗಿವೆ.
ಸ್ಫೋಟಕ ವಸ್ತುಗಳನ್ನು ಅಪರಿಚಿತರು ನೀಲಿ ಬಣ್ಣದ ಪ್ಲಾಸ್ಟಿಕ್ ಕವರ್‌ನಲ್ಲಿ ಇಟ್ಟು ಹೋಗಿದ್ದರು. ಸ್ಥಳೀಯರು ಹಾಗೂ ಹೋಟೆಲ್ ಸಿಬ್ಬಂದಿ ಅನುಮಾನಗೊಂಡು ನೋಡಿದಾಗ ಸ್ಫೋಟಕ ವಸ್ತುಗಳು ಎಂದು ತಿಳಿದು ಬಂದಿದೆ. ಬಳಿಕ ಹೋಟೆಲ್ ಸಿಬ್ಬಂದಿ ಪ್ಲಾಸ್ಟಿಕ್ ಕವರ್‍ನ್ನು ಪಕ್ಕದಲ್ಲಿರುವ ಮರಕ್ಕೆ ನೇತು ಹಾಕಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: Kolkata Horror | 36 ಗಂಟೆಗಳ ಅಮಾನುಷ ಶಿಫ್ಟ್ ಸರಿಯಲ್ಲ ಎಂದ ಸುಪ್ರೀಂ – ಸುಳ್ಳುಪತ್ತೆ ಪರೀಕ್ಷೆಗೆ ಅಸ್ತು!
ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳದ ಅಧಿಕಾರಿಗಳು ಭೇಟಿ ನೀಡಿ ಸ್ಫೋಟಕಗಳಿದ್ದ ಕವರ್‌ನ್ನು ಪರಿಶೀಲಿಸಿದ್ದಾರೆ. ಈ ವೇಳೆ ಟ್ಯೂಬ್ ಆಕಾರದಲ್ಲಿರುವ 9 ಸ್ಪೋಟಕಗಳು ಮತ್ತು ಒಂದು ನಾಡ ಬಾಂಬ್ ಆಕಾರದ ವಸ್ತು ಪತ್ತೆಯಾಗಿದೆ. ಸ್ಫೋಟಕ ವಸ್ತುಗಳು ಕಲ್ಲು ಗಣಿಗಾರಿಕೆಗೆ ಹಾಗೂ ನಾಡ ಬಾಂಬ್ ಕಾಡು ಪ್ರಾಣಿಗಳ ಬೇಟೆಗೆ ಬಳಕೆಗೆ ಬಳಸಲಾಗುವ ವಸ್ತುಗಳಂತೆ ಕಂಡುಬಂದಿವೆ.
ಪೊಲೀಸರು (Police) ಹಾಗೂ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಬ್ರಿಜ್ ಭೂಷಣ್ ವಿರುದ್ಧ ಸಾಕ್ಷಿ ಹೇಳಲು ಹೊರಟಿದ್ದ ಮಹಿಳಾ ಕುಸ್ತಿಪಟುಗಳ ಭದ್ರತೆ ಹಿಂಪಡೆಯಲಾಗಿದೆ: ವಿನೇಶ್