ಬೆಂಗಳೂರು: ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣದ ಮಾಸ್ಟರ್ ಮೈಂಡ್ ಆರೋಪಿ ದಿವ್ಯಾ ಹಾಗರಗಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೊಂದಿಗೆ ಕಾಣಿಸಿಕೊಂಡ ಫೋಟೋಗಳು ವೈರಲ್ ಆದ ಬೆನ್ನಲ್ಲೇ ಮತ್ತೊಂದು ಸ್ಫೋಟಕ ಮಾಹಿತಿ ಹೊರಬಿದ್ದಿದೆ.
Advertisement
ಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ ಪ್ರತಿ ಪಕ್ಷದ ನಾಯಕರು ಬಿಜೆಪಿ ವಿರುದ್ಧ ತಿರುಗಿ ಬಿದ್ದಿದ್ದು, ಟ್ವೀಟ್‌ನಲ್ಲೇ ತಕ್ಕ ಉತ್ತರ ಕೊಟ್ಟಿದ್ದಾರೆ. ದಿವ್ಯಾ ಹಾಗರಗಿ ಅವರು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಗೃಹ ಸಚಿವ ಆರಗ ಜ್ಞಾನೇಂದ್ರ, ಸಚಿವ ಸುಧಾಕರ್ ಇನ್ನೂ ಅನೇಕ ಬಿಜೆಪಿ ಮುಖಂಡರೊಂದಿಗೆ ಕ್ಲಿಕ್ಕಿಸಿದ ಫೋಟೋಗಳನ್ನು ಟ್ವೀಟ್ ಮಾಡಿದ್ದು, ಇದಕ್ಕೇನು ಹೇಳುವರಿ? ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ದಿವ್ಯಾ ಹಾಗರಗಿ ಭೇಟಿಯಾಗಿದ್ದು ನಿಜ, ನನಗೂ ನೋಟಿಸ್ ಕೊಡಲಿ: ಡಿ.ಕೆ ಶಿವಕುಮಾರ್
Advertisement
Advertisement
ಗೃಹ ಸಚಿವರ ರಾಜೀನಾಮೆಗೆ ಆಗ್ರಹ: ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ರಾಜಭವನ ಕದ ತಟ್ಟಿದೆ. ಗೃಹ ಸಚಿವ ಅರಗ ಜ್ಞಾನೇಂದ್ರ ರಾಜೀನಾಮೆಗೆ ಎಎಪಿ ಆಗ್ರಹಿಸಿದ್ದು, ಎಎಪಿ ನಿಯೋಗ ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ.
Advertisement
ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, ಎಎಪಿ ನಾಯಕ ಭಾಸ್ಕರ್ ರಾವ್ ನೇತೃತ್ವದಲ್ಲಿ ರಾಜಭವನಕ್ಕೆ ತೆರಳಿದ್ದ ಎಎಪಿ ನಿಯೋಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ ಮಾಡಿತ್ತು. ಪಿಎಸ್‌ಐ ಪರೀಕ್ಷಾ ಅಕ್ರಮಕ್ಕೆ ಗೃಹ ಸಚಿವರ ವೈಫಲ್ಯ ಕಾರಣ ಎಂದು ಆರೋಪಿಸಿದ್ದು, ಸಂಪುಟದಿಂದ ಗೃಹ ಸಚಿವ ಆರಗ ಜ್ಞಾನೇಂದ್ರರನ್ನು ವಜಾ ಮಾಡಲು ಆಪ್ ಆಗ್ರಹಿಸಿದೆ. ಇದನ್ನೂ ಓದಿ: PSI ನೇಮಕಾತಿಯಲ್ಲಿ ಅಕ್ರಮː ಪ್ರಮುಖ ಆರೋಪಿ ದಿವ್ಯಾ ಹಾಗರಗಿ – ಡಿಕೆಶಿ ಜೊತೆಗಿರುವ ಫೋಟೋ ವೈರಲ್
ಪಿಎಸ್ಐ ನೇಮಕ ಹಗರಣ ಕಾಂಗ್ರೆಸ್ ಕೃಪಾಪೋಷಿತರ ನಾಟಕ ಮಂಡಳಿಯ ಟೂಲ್ ಕಿಟ್ ಎಂದು ಸಾರಿ ಸಾರಿ ಹೇಳುವುದಕ್ಕೆ ಸಾಕ್ಷ್ಯ ಇಲ್ಲಿದೆ.
ಅಧಿಕಾರದಲ್ಲಿ ಇಲ್ಲದೇ ಇದ್ದರೂ ವ್ಯವಸ್ಥೆಯಲ್ಲಿ ಭ್ರಷ್ಟಾಚಾರವನ್ನು ತುರುಕುವುದಕ್ಕೆ ಕಾಂಗ್ರೆಸ್ ನಾಯಕರಿಗೆ ಮಾತ್ರ ಸಾಧ್ಯ!#CONgressPSIToolkit pic.twitter.com/84G874HCPy
— BJP Karnataka (@BJP4Karnataka) April 26, 2022
ಈ ಪ್ರಕರಣಕ್ಕೆ ಸಂಭಂದಿಸಿದಂತೆ ಆಮ್‌ಆದ್ಮಿ ಪಕ್ಷದ ನಾಯಕ ಭಾಸ್ಕರ್ ರಾವ್ ಸಹ ಕಿಡಿ ಕಾರಿದ್ದು, ಗೃಹ ಸಚಿವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಅಲ್ಲದೇ, ಇಲ್ಲಿವರೆಗೂ ಮಾಸ್ಟರ್ ಮೈಂಡ್ ಆರೋಪಿ ದಿವ್ಯಾ ಹಾಗರಗಿ ಅವರು ಏಕೆ ಬಂಧನವಾಗಿಲ್ಲ? ಎಂದು ಪ್ರಶ್ನಿಸಿದ್ದಾರೆ.
ಅಲ್ಲದೆ, ಈ ಹಿಂದೆ ಪರೀಕ್ಷೆಯನ್ನು ನಮ್ಮ ಸಹಪಾಠಿಗಳು ಅತ್ಯಂತ ಪಾರದರ್ಶಕತೆಯಿಂದ ಮಾಡ್ತಿದ್ರು. ಈಗ ಪಾರದರ್ಶಕತೆ ಕಳೆದುಕೊಂಡಿದೆ ಅಂತಾ ಆರೋಪಿಸಿದ್ರು. ಸರ್ಕಾರ ನಂಬಿದ ಯುವಕರು ಮೋಸ ಹೋಗಿದ್ದಾರೆ. ತನಿಖೆ ಪಾಡಿಗೆ ತನಿಖೆ ನಡೆಯಲಿ. ಆದರೆ ಅಲ್ಲಿವರೆಗೂ ಕಾಯದೇ ಮರು ಪರೀಕ್ಷೆಗೆ ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ತಾಳಿ ಭಾಗ್ಯ, ಅನ್ನ ಭಾಗ್ಯದಂತಹ ದರಿದ್ರ ಭಾಗ್ಯಗಳು ಬೇಡ: ಸಿಎಂ ಮುಂದೆ ಯತ್ನಾಳ್ ಕಿಡಿ
ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ದೂರು ಬರುತ್ತಿದ್ದಂತೆಯೇ ತನಿಖೆ ಆರಂಭಿಸಿ, ಆರೋಪಿಯೊಬ್ಬರನ್ನೂ ಬಂಧಿಸಲಾಗಿದೆ.
ಪ್ರಕರಣ ತನಿಖೆಯ ಹಂತದಲ್ಲಿರುವಾಗ ಹಸ್ತಕ್ಷೇಪ ಮಾಡದೇ, ವಿಚಾರಣೆ ಪೂರ್ಣಗೊಂಡ ಬಳಿಕ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಲು ಬದ್ಧರಾಗಿದ್ದೇವೆ. pic.twitter.com/ZApJ1aPNXB
— Dr. Ashwathnarayan C. N. (@drashwathcn) April 26, 2022
ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ತನಿಖೆ ಮುಗಿಯುವವರೆಗೂ ಕಾಯದೆ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ಮಾಡಿಕೊಡಬೇಕು. ಪ್ರಕರಣದ ಆರೋಪಿ ದಿವ್ಯಾ ಹಾಗರಗಿ ಅಂತಿದ್ದಾರೆ. ಆದರೆ ಇನ್ನೂ ಅವರ ಬಂಧನ ಆಗಿಲ್ಲ. ಇದನ್ನೆಲ್ಲ ನೋಡ್ತಿದ್ರೆ ಈ ಪ್ರಕರಣದಲ್ಲಿ ಸರ್ಕಾರದ ಪ್ರಭಾವ ಇದೆ ಎಂಬ ಸಂಶಯ ಮೂಡ್ತಿದೆ ಎಂದು ಹೇಳಿದ್ದಾರೆ.
ಗೃಹ ಸಚಿವರಿಗೆ ಅನುಭವದ ಕೊರತೆ ಇದೆ. ಆಗಸ್ಟ್ ನಿಂದ ಇಲ್ಲಿವರೆಗೂ ಮೆಚ್ಯೂರ್ಡ್ ಆದ ಸ್ಟೆಪ್‌ಗಳನ್ನು ತೆಗೆದುಕೊಂಡಿಲ್ಲ. ಇದರಿಂದ ಪೊಲೀಸ್ ಇಲಾಖೆಯ ನೈತಿಕತೆ ಕುಸಿದಿದೆ ಅಂತಾ ವಾಗ್ದಾಳಿ ನಡೆಸಿದ್ರು.