DistrictsKalaburagiKarnatakaLatestMain Post

ಅಕ್ರಮವಾಗಿ ಹಣ ಸಂಪಾದಿಸಲು ಕಾರ್ಯಕರ್ತರಿಗೆ ಸ್ವತಃ ಸರ್ಕಾರ ಸೂಚನೆ: ಶರಣಪ್ರಕಾಶ್‌

ಕಲಬುರಗಿ: ಅಕ್ರಮ ದಾರಿ ಮೂಲಕ ಹಣ ಸಂಪಾದಿಸಿಕೊಳ್ಳಲು ಬಿಜೆಪಿ ಕಾರ್ಯಕರ್ತರಿಗೆ ಸ್ವತಃ ಸರ್ಕಾರ ಹೇಳಿಕೊಟ್ಟಿದೆ ಎಂದು ಮಾಜಿ ಸಚಿವರಾದ ಕಾಂಗ್ರೆಸ್ ಉಪಾಧ್ಯಕ್ಷ ಡಾ. ಶರಣಪ್ರಕಾಶ್‌ ಪಾಟೀಲ್ ಆರೋಪ ಮಾಡಿದರು.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, 545 ಪಿಎಸ್‍ಐ ಹುದ್ದೆಗಳ ನೇಮಕಾತಿಯಲ್ಲಿ ನಡೆದ ಅಕ್ರಮದ ಬಗ್ಗೆ ಪ್ರತಿಕ್ರಿಯಿಸಿ, ಬಿಜೆಪಿ ಸರ್ಕಾರಕ್ಕೆ ನಾಚಿಕೆ ಆಗಬೇಕು. ದಿವ್ಯಾ ಹಾಗರಗಿ ಬಿಜೆಪಿ ಮಾಜಿ ಮಹಿಳಾ ಮೋರ್ಚಾದ ಅಧ್ಯಕ್ಷೆಯಾಗಿದ್ದರು. ದಿಶಾ ಸಮಿತಿ ಸದಸ್ಯರಿದ್ದಾರೆ. ಜೊತೆಗೆ ಕರ್ನಾಟಕ ನಸಿರ್ಂಗ್ ಕೌನ್ಸಿಲ್ ಸದಸ್ಯರಿದ್ದಾರೆ. ಇಷ್ಟಿದ್ದರೂ ಸಹ ಹಗರಣ ಹೊರಬರುತ್ತಿದ್ದಂತೆ ದಿವ್ಯಾಗೂ ಬಿಜೆಪಿಗೂ ಸಂಬಂಧವಿಲ್ಲ ಅಂತಿದ್ದಾರೆ. ದಿವ್ಯಾ ಹಾಗರಗಿ ಮಾತ್ರವಲ್ಲ ಹಗರಣದಲ್ಲಿ ಇನ್ನೂ ಹಲವು ಬಿಜೆಪಿ ನಾಯಕರಿದ್ದಾರೆ ಎಂದು ದೂರಿದರು.

ದಿವ್ಯಾ ಹಾಗರಗಿ ಅವರಿಗೆ ಸೇರಿದ ಜ್ಞಾನಜ್ಯೋತಿ ಶಾಲೆಗೆ ಯಾವ ಮಾನದಂಡದ ಮೇಲೆ ಪರೀಕ್ಷಾ ಕೇಂದ್ರವಾಗಿಸಲಾಗಿತ್ತು. ಕೆಲ ನಾಯಕರು ಒತ್ತಡ ಹಾಕುವ ಮುಖಾಂತರ ಪರೀಕ್ಷಾ ಕೇಂದ್ರ ಮಾಡಲಾಗಿದೆ. ಈ ಕೇಂದ್ರದ ಎಲ್ಲಾ ಅಭ್ಯರ್ಥಿಗಳ ಒಎಮ್‍ಆರ್ ಶೀಟ್ ತಪಾಸಣೆ ಮಾಡಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಬಿಜೆಪಿಯನ್ನು ಬೈದು ಕಾಂಗ್ರೆಸ್ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿರುವುದು ಮುರ್ಖತನ: ಬಿಸಿ ಪಾಟೀಲ್

ಪಿಎಸ್‍ಐ ನೇಮಕಾತಿ ಹಗಣರವನ್ನು ಬಿಜೆಪಿ ಸರ್ಕಾರ ಮುಚ್ಚಿಹಾಕುವ ಯತ್ನ ಮಾಡುತ್ತಿದೆ. ಪ್ರಕರಣವನ್ನು ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳ ಮೂಲಕ ಸೂಕ್ತ ತನಿಖೆ ನಡೆಸಬೇಕು. ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ಸಿಎಂ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಹುಬ್ಬಳ್ಳಿ ಗಲಾಟೆಗೆ ಕಾಂಗ್ರೆಸ್‍ನವರೇ ಕಾರಣ: ಬಿಎಸ್‍ವೈ

Leave a Reply

Your email address will not be published.

Back to top button