ಬೆಂಗಳೂರು: ಪಿಎಸ್‍ಐ ನೇಮಕಾತಿ ಪರೀಕ್ಷೆಯ ಅಕ್ರಮದಲ್ಲಿ ಭಾಗಿಯಾದ ಆರೋಪಿ ಕಲಬುರಗಿಯ ಶಾಲೆಯೊಂದರ ಮುಖ್ಯಸ್ಥೆ ದಿವ್ಯಾ ಹಾಗರಗಿ ಅವರಿಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ. ಅವರು ಪಕ್ಷದ ನಾಯಕಿಯಲ್ಲ ಎಂದು ಬಿಜೆಪಿ ರಾಜ್ಯ ವಕ್ತಾರರು ಮತ್ತು ಶಾಸಕರಾದ ರಾಜಕುಮಾರ್ ಪಾಟೀಲ್ ತೇಲ್ಕೂರ್ ಸ್ಪಷ್ಟಪಡಿಸಿದ್ದಾರೆ ಎಂದು ಬಿಜೆಪಿ ಮಾಧ್ಯಮ ಸಂಚಾಲಕರಾದ ಕರುಣಾಕರ ಖಾಸಲೆ ಮಾಧ್ಯಮ ಪ್ರಕಟನೆ ಹೊರಡಿಸಿದ್ದಾರೆ.
Advertisement
ಈ ಬಗ್ಗೆ ಮಾಧ್ಯಮ ಪ್ರಕಟನೆ ಬಿಡುಗಡೆ ಮಾಡಿದ ಅವರು, ದಿವ್ಯಾ ಹಾಗರಗಿ ಅಥವಾ ಯಾರೇ ಅಕ್ರಮದಲ್ಲಿ ಭಾಗವಹಿಸಿದ್ದರೆ ಅದನ್ನು ಪಕ್ಷ ಮತ್ತು ಸರ್ಕಾರ ಸಹಿಸಿಕೊಳ್ಳುವುದಿಲ್ಲ. ಅಕ್ರಮ ನಡೆದಿರುವುದು ಸಾಬೀತಾದರೆ ಶಿಕ್ಷೆ ಆಗಲಿದೆ. ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರವು ಈ ವಿಷಯದ ಕುರಿತು ಸಿಐಡಿ ತನಿಖೆ ನಡೆಸಲು ಸೂಚಿಸಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಠಕ್ಕೆ ಅನುದಾನ ಬೇಕಿದ್ರೆ ಶೇ.30 ಕಮಿಷನ್ ಕೊಡಿ ಅಂತಾರೆ ಅಧಿಕಾರಿಗಳು: ದಿಂಗಾಲೇಶ್ವರ ಸ್ವಾಮೀಜಿ
Advertisement
Advertisement
ಪಿಎಸ್‍ಐ ನೇಮಕಾತಿ ಅಕ್ರಮದಲ್ಲಿ ಭಾಗಿಯಾಗಿರುವ ಆರೋಪ ದಿವ್ಯಾ ಹಾಗರಗಿ ಮೇಲೆ ಕೇಳಿ ಬಂದಿತ್ತು. ಅವರ ಪತಿ ರಾಜೇಶ್ ಅವರನ್ನು ಸಿಐಡಿ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿದ್ದಾರೆ. ಇತ್ತ ದಿವ್ಯಾ ಹಾಗರಗಿ ಕಳೆದ 4 ದಿನಗಳಿಂದ ನಾಪತ್ತೆಯಾಗಿದ್ದು, ಮೊಬೈಲ್ ಸ್ವಿಚ್ ಆಫ್ ಬರುತ್ತಿದೆ. ಇದನ್ನೂ ಓದಿ: ಹುಬ್ಬಳ್ಳಿ ಗಲಾಟೆಗೆ ಕಾರಣವಾದ ಅಭಿಷೇಕ್‍ಗೆ 14 ದಿನ ನ್ಯಾಯಾಂಗ ಬಂಧನ
Advertisement
ಈ ನಡುವೆ ವಿರೋಧ ಪಕ್ಷಗಳು ಬಿಜೆಪಿ ಪಕ್ಷದ ನಾಯಕಿ ಅಕ್ರಮದಲ್ಲಿ ಭಾಗಿಯಾಗಿರುವ ಆರೋಪ ಹೊರಿಸುತ್ತಿದೆ. ಈ ಎಲ್ಲದರ ನಡುವೆ ಬಿಜೆಪಿ ಸರ್ಕಾರ ಡ್ಯಾಮೆಜ್ ಕಂಟ್ರೋಲ್‍ಗೆ ಮುಂದಾಗಿ ಬಿಜೆಪಿಗೂ ದಿವ್ಯಾ ಹಾಗರಗಿ ಸಂಬಂಧವಿಲ್ಲ ಎಂದು ತಿಳಿಸಿದೆ.