ಚಂದನವನದ ನಟ ಪೃಥ್ವಿ ಅಂಬಾರ್ ಪ್ರಧಾನವಾಗಿ ಕನ್ನಡ ಮತ್ತು ತುಳು ಚಲನಚಿತ್ರೋದ್ಯಮಗಳಲ್ಲಿ ನಟಿಸುತ್ತಿದ್ದಾರೆ. ಪೃಥ್ವಿ ಅಂಬಾರ್ ಅವರ ತಾಯಿ ಸುಜಾತ ವೀರಪ್ಪ ಅಂಬಾರ್ ಹೃದಯ ಸಂಬಂಧಿ ಕಾಯಿಲೆಯಿಂದ ಇಂದು(ಜುಲೈ 15) ಮಂಗಳೂರಿನಲ್ಲಿ ನಿಧನರಾಗಿದ್ದಾರೆ.
ಸುಜಾತ ಅವರು ವೀರಪ್ಪ ಅಂಬಾರ್ ಅವರ ಧರ್ಮಪತ್ನಿಯಾಗಿದ್ದು, ಹಾರ್ಟ್ ಪ್ರಾಬ್ಲಮ್‍ನಿಂದ ಬಳಲುತ್ತಿದ್ದರು. ಆದರೆ ಇಂದು ಈ ಸಮಸ್ಯೆ ಹೆಚ್ಚಾಗಿ ಸುಜಾತ ಅವರು ಕೊನೆಯುಸಿರೆಳೆದಿದ್ದಾರೆ. ಅವರ ಅಂತ್ಯಕ್ರಿಯೆ ಮಂಗಳೂರಿನಲ್ಲಿ ಇಂದು ನಡೆಯಲಿದೆ. ದುರ್ಗಾಪರಮೇಶ್ವರಿ ಮಹಿಳಾ ಸಂಘದ ಕಾರ್ಯದರ್ಶಿಯಾಗಿದ್ದ ಸುಜಾತ ಅವರು ಹಲವು ರೀತಿಯ ಸಮಾಜ ಸೇವೆಗಳನ್ನು ಮಾಡಿದ್ದಾರೆ.
ಸುಜಾತ ಅವರ ಪುತ್ರ ಪೃಥ್ವಿ ಅಂಬಾರ್ ಸಿನಿಮಾ ರಂಗದಲ್ಲಿ ತೊಡಗಿಸಿಕೊಂಡಿದ್ದು, ದಿಯಾ ಸಿನಿಮಾ ಮೂಲಕ ಸಾಕಷ್ಟು ಹೆಸರು ಮಾಡಿದ್ದಾರೆ. ಇತ್ತೀಚೆಗೆ ತೆರೆಕಂಡ ಬೈರಾಗಿ ಮತ್ತು ಶುಗರ್ ಲೆಸ್ ಚಿತ್ರದಲ್ಲಿ ಪೃಥ್ವಿ ನಟಿಸಿದ್ದಾರೆ. ಇವರ ಸಿನಿಮಾಗಳು ಪ್ರೇಕ್ಷಕರಿಗೆ ಹತ್ತಿರವಾಗುತ್ತಿದ್ದು, ಈ ಖುಷಿಯಲ್ಲಿ ಇರಬೇಕಾದ ಕುಟುಂಬ ದುಃಖದಲ್ಲಿ ಮುಳುಗಿದೆ. ಇದನ್ನೂ ಓದಿ: ಪುನೀತ್ ರಾಜ್ ಕುಮಾರ್ ಗಂಧದ ಗುಡಿ ರಿಲೀಸ್ ಡೇಟ್ ಘೋಷಣೆ : ಅಕ್ಟೋಬರ್ 28ಕ್ಕೆ ತೆರೆಗೆ
ಪೃಥ್ವಿ ಅಂಬಾರ್ ಅವರು ಸಿನಿಮಾರಂಗಕ್ಕೆ ಪ್ರವೇಶಿಸುವ ಮೊದಲು ಮಂಗಳೂರಿನಲ್ಲಿ ರೇಡಿಯೊ ಜಾಕಿಯಾಗಿಯೂ ಕೆಲಸ ಮಾಡುತ್ತಿದ್ದರು. ಇವರು 2014ರಲ್ಲಿ ಬಿಡುಗಡೆಯಾದ ಬರ್ಕೆ ಎಂಬ ತುಳು ಚಲನಚಿತ್ರದ ಮೂಲಕ ದೊಡ್ಡ ಪರದೆಗೆ ಪ್ರವೇಶ ಮಾಡಿದ್ದರು. ಅವರ ಎರಡನೆಯ ಚಿತ್ರ ಬ್ಲಾಕ್ ಬಸ್ಟರ್ ಪಿಲಿಬೈಲ್ ಯಮುನಕ್ಕ, ಇದನ್ನು ಕೆ.ಸೂರಜ್ ಶೆಟ್ಟಿ ನಿರ್ದೇಶಿಸಿದ್ದಾರೆ. ಕನ್ನಡ ಧಾರವಾಹಿ ‘ಜೊತೆ ಜೊತೆಯಲಿ’ಯಲ್ಲಿ ‘ನೀಲ್’ ಪಾತ್ರದಲ್ಲಿ ಇವರು ನಟಿಸಿದ್ದರು.