ಬೆಂಗಳೂರು: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್‌ನ ಮಾಸ್ಟರ್ ಮೈಂಡ್ ಅಫ್ಸರ್ ಪಾಷಾ ಕೆಜೆ ಹಳ್ಳಿ (KJ Halli) ಹಾಗೂ ಡಿಜಿ (DG Halli) ಹಳ್ಳಿ ಗಲಭೆ ಪ್ರಕರಣದಲ್ಲೂ ಭಾಗಿಯಾಗಿದ್ದಾನೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಆರೋಪಿಸಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರು ಸ್ಫೋಟದ ಬಗ್ಗೆ ಕಾಂಗ್ರೆಸ್ ನಾಯಕರು ಭಯೋತ್ಪಾದನಾ ಕೃತ್ಯವಲ್ಲ ಎಂದು ವಾದಿಸಿದ್ದರು. ಆದರೆ ಈಗ ಸತ್ಯಗಳು ಹೊರಗೆ ಬರುತ್ತಿವೆ. ಆದರೆ ಕಾಂಗ್ರೆಸ್ ಓಲೈಕೆ ರಾಜಕಾರಣ ಮಾಡುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ಉಗ್ರ ಅಫ್ಸರ್ ಪಾಷಾ ಮಂಗಳೂರು ಸ್ಫೋಟದ ಮಾಸ್ಟರ್ ಮೈಂಡ್ – ಶಾರೀಕ್‌ಗೆ ಜೈಲಿನಲ್ಲೇ ತರಬೇತಿ
ಬೆಳಗಾವಿಯ ಜೈಲಿನಲ್ಲಿದ್ದ ಅಫ್ಸರ್ ಪಾಷಾ ಪ್ರಕರಣದ ಮಾಸ್ಟರ್ ಮೈಂಡ್ ಎಂದು ತಿಳಿದು ಬಂದಿದೆ. ಅಲ್ಲದೇ ಮಹಾರಾಷ್ಟ್ರ ಎಟಿಎಸ್ ಇಬ್ಬರು ಶಂಕಿತ ಉಗ್ರರನ್ನು ಬಂಧಿಸಿದೆ. ಇವರಿಂದಲೇ ಕೇಂದ್ರ ಸಚಿವರಿಗೆ ಬೆದರಿಕೆ ಸಹ ಬಂದಿತ್ತು. ಈ ಪ್ರಕರಣದ ಆರೋಪಿ ಜಯೇಶ್ ಪೂಜಾರಿ ಶಾಹೀರ್ ಆಗಿ ಮತಾಂತರವಾಗಿದ್ದಾನೆ ಎಂದು ಅವರು ಆರೋಪಿಸಿದ್ದಾರೆ.
ಅಫ್ಸರ್ ಪಾಷಾ ಜಮಾತ್‍ನಿಂದ ಬಂದ ಹಣವನ್ನು ಭಯೋತ್ಪಾದನಾ ಚಟುವಟಿಕೆಗೆ ಬಳಸುತ್ತಿದ್ದ. ಜೈಲಿನಲ್ಲಿ ಕರ್ನಾಟಕದ ಯುವಕರ ಮೈಂಡ್ ವಾಷ್ ಮಾಡುತ್ತಿರುವುದು ಸಹ ಬಯಲಾಗಿದೆ. ಜೈಲಿನಲ್ಲಿದ್ದುಕೊಂಡೇ ಭಯೋತ್ಪಾದಕ ಕೃತ್ಯಗಳು ನಡೆಸಲಾಗುತ್ತಿದೆ. ಕರ್ನಾಟಕ ಉಗ್ರರ ಅಡಗು ತಾಣವಾಗುತ್ತಿದೆ. ಈ ಮೂಲಕ ಮತ್ತೊಂದು ಕೇರಳವಾಗಿ ಮಾರ್ಪಾಡಾಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಕರ್ನಾಟಕದಲ್ಲಿ ನಾವು ಯಾರು ಸುರಕ್ಷಿತವಾಗಿಲ್ಲ. ಕಾಂಗ್ರೆಸ್ ನಾಯಕರು ಭಯೋತ್ಪಾದಕರನ್ನು ರಕ್ಷಣೆ ಮಾಡುತ್ತಿದ್ದಾರೆ. ಕೆಜೆ ಹಳ್ಳಿ ಹಾಗೂ ಡಿಜಿ ಹಳ್ಳಿ ಪ್ರಕರಣವನ್ನು ಎನ್‍ಐಎ ತನಿಖೆಗೆ ವಹಿಸುವಂತೆ ಅವರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಆಗಸ್ಟ್ 1ರಿಂದ ಎಕ್ಸ್‌ಪ್ರೆಸ್ ಹೈವೇಯಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನಗಳ ನಿಷೇಧ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]