Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರಿನ ಪ್ರಗತಿಗೆ ಅಡ್ಡಿಯಾಗಿರುವ ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ಕೆಂದ್ರಕ್ಕೆ ಡಿಕೆಶಿ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರಿನ ಪ್ರಗತಿಗೆ ಅಡ್ಡಿಯಾಗಿರುವ ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ಕೆಂದ್ರಕ್ಕೆ ಡಿಕೆಶಿ ಮನವಿ

Bengaluru City

ಬೆಂಗಳೂರಿನ ಪ್ರಗತಿಗೆ ಅಡ್ಡಿಯಾಗಿರುವ ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ಕೆಂದ್ರಕ್ಕೆ ಡಿಕೆಶಿ ಮನವಿ

Public TV
Last updated: April 24, 2026 5:48 pm
Public TV
Share
3 Min Read
D.K. Shivakumar Rajnath Singh
SHARE

ನವದೆಹಲಿ: ರಕ್ಷಣಾ ಇಲಾಖೆ ವಿಮಾನ ನಿಲ್ದಾಣಗಳ (Airport) ಸುತ್ತಮುತ್ತಲ ಪ್ರದೇಶದಲ್ಲಿ ವಿಧಿಸಲಾಗಿರುವ ಕಟ್ಟಡಗಳ ಎತ್ತರದ ನಿರ್ಬಂಧ ಬೆಂಗಳೂರಿನ (Bengaluru) ಪ್ರಗತಿಗೆ ಅಡ್ಡಿಯಾಗಿದ್ದು, ಸುರಕ್ಷತೆ ಹಾಗೂ ಪ್ರಗತಿಯ ವಿಚಾರವನ್ನು ಗಮನದಲ್ಲಿಟ್ಟುಕೊಂಡು ನಿರ್ಬಂಧಗಳನ್ನು ಸಡಿಲಗೊಳಿಸಿ ಸಮಸ್ಯೆಗಳಿಗೆ ಪರಿಹಾರ ನೀಡುವಂತೆ ಡಿಸಿಎಂ ಡಿ.ಕೆ. ಶಿವಕುಮಾರ್ (D.K Shivakumar) ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಅವರಿಗೆ ಮನವಿ ಮಾಡಿದರು.

ನವದೆಹಲಿಯಲ್ಲಿ ಅವರು ಕೇಂದ್ರ ಸಚಿವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿ, ಮನವಿ ಪತ್ರ ಸಲ್ಲಿಸಿದರು. ಬೆಂಗಳೂರಿನ ರಕ್ಷಣಾ ಇಲಾಖೆ ಸುಪರ್ದಿಯ ವಿಮಾನ ನಿಲ್ದಾಣಗಳ 20 ಕಿ.ಮೀ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣ ಚಟುವಟಿಕೆಗಳಿಗೆ ನಿರಾಕ್ಷೇಪಣಾ ಪತ್ರ ನೀಡುವಾಗ ವಿಮಾನ ನಿಲ್ದಾಣದ ಅಧಿಕಾರಿಗಳು ವಿಪರೀತ ನಿರ್ಬಂಧಗಳನ್ನು ವಿಧಿಸುತ್ತಿದ್ದಾರೆ. ಇದನ್ನೂ ಓದಿ: ಪಬ್ಲಿಕ್ ಟಿವಿ ‘ವಿದ್ಯಾಪೀಠʼದಲ್ಲಿ ಪಿಯುಸಿ 90% ಗಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ವಿಶೇಷ ಉಡುಗೊರೆ

ಬೆಂಗಳೂರು ವಿಶ್ವದ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಒಂದಾಗಿದೆ. ಹೆಚ್ಎಎಲ್ ವಿಮಾನ ನಿಲ್ದಾಣ ಬೆಂಗಳೂರಿನ ಹೃದಯ ಭಾಗದಲ್ಲಿದ್ದು, ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಬೇಡಿಕೆ ಇದೆ. ಆದರೆ ಹೆಚ್ಚುವರಿಯಾಗಿ ವಿಧಿಸಲಾಗಿರುವ ನಿರ್ಬಂಧಗಳು ಈ ಪ್ರದೇಶಗಳಲ್ಲಿ ಅಭಿವೃದ್ಧಿಗೆ ಅಡ್ಡಿಯಾಗಿವೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.

Had a constructive meeting with Defence Minister @rajnathsingh avaru in New Delhi regarding the height restrictions being imposed around defence airports in Bengaluru while granting NOCs for construction. These restrictions, particularly around HAL and Yelahanka airbases, are… pic.twitter.com/VdEvGF61m8

— DK Shivakumar (@DKShivakumar) April 24, 2026

ಈ ವಿಚಾರವಾಗಿ ನಾಗರಿಕ ವಿಮಾನಯಾನ ಸಚಿವಾಲಯದ ಕಾರ್ಯದರ್ಶಿಗಳು, ರಕ್ಷಣಾ ಸಚಿವಾಲಯದ ರಕ್ಷಣಾ ಉತ್ಪಾದನಾ ಇಲಾಖೆ ಕಾರ್ಯದರ್ಶಿಗಳು ಹಾಗೂ ರಕ್ಷಣಾ ಕಾರ್ಯದರ್ಶಿಗಳಿಗೆ ಪತ್ರಗಳನ್ನು ಬರೆಯಲಾಗಿದೆ. ವಿಮಾನ ಸುರಕ್ಷತೆ ಹಾಗೂ ನಗರದ ಅಭಿವೃದ್ಧಿ ಎರಡರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಪರಿಶೀಲನೆ ನಡೆಸಿ, ಎದುರಾಗಿರುವ ಸಮಸ್ಯೆಗಳನ್ನು ಪರಿಹರಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿ ಎಂದು ಮನವಿ ಮಾಡಿದ್ದಾರೆ.

ಪ್ರಸ್ತುತ ಬೆಂಗಳೂರಿನಲ್ಲಿ ನಾಲ್ಕು ವಿಮಾನ ನಿಲ್ದಾಣಗಳು ಕಾರ್ಯನಿರ್ವಹಿಸುತ್ತಿದ್ದು, ಅವುಗಳಲ್ಲಿ ಹೆಚ್ಎಎಲ್ ಹಾಗೂ ಯಲಹಂಕ ವಾಯುನೆಲೆ ರಕ್ಷಣಾ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಈ ವಿಮಾನ ನಿಲ್ದಾಣಗಳ ಸುತ್ತಮುತ್ತಲಿನ ಪ್ರದೇಶದಲ್ಲಿ ಕಟ್ಟಡ ನಿರ್ಮಾಣ ಮಾಡಲು ವಿಮಾನ ನಿಲ್ದಾಣ ಅಧಿಕಾರಿಗಳಿಂದ ನಿರಾಕ್ಷೇಪಣ ಪತ್ರ ಪಡೆಯಬೇಕಾಗಿದೆ. ವಿಮಾನ ನಿಲ್ದಾಣದ ಸುತ್ತಮುತ್ತಲ 15 ಕಿ.ಮೀ ವ್ಯಾಪ್ತಿಯಲ್ಲಿ ಕಟ್ಟಡಗಳ ಎತ್ತರದ ಮಿತಿಯನ್ನು 150 ಮೀ. ನಿಗದಿಪಡಿಸಲಾಗಿದೆ ಎಂದು ಜಿ.ಎಸ್.ಆರ್ 751 (ಇ) ನಿಯಮದಲ್ಲಿ ಸೂಚಿಸಲಾಗಿದೆ.

ಆದರೆ ರಕ್ಷಣಾ ಇಲಾಖೆ ವಿಮಾನ ನಿಲ್ದಾಣಗಳು ಈ ವಿಪರೀತ ನಿರ್ಬಂಧ ಹೇರುವುದರ ಜತೆಗೆ 150 ಮೀ. ಎತ್ತರದ ಮಿತಿಯನ್ನು 15 ಕಿ.ಮೀ ಮೀರಿ 20 ಕಿ.ಮೀ ವರೆಗೂ ವಿಸ್ತರಿಸಿವೆ. ಈ ನಿರ್ಬಂಧಗಳು ಈ ಬೆಂಗಳೂರು ನಗರದ ಪ್ರಗತಿಗೆ ಮಾರಕವಾಗಿವೆ. ಸಿಂಗಾಪುರ, ಆಂಸ್ಟ್ರಡಾಮ್, ಡಲ್ಲಾಸ್, ಲಂಡನ್ ಹಾಗೂ ದುಬೈ ಸೇರಿದಂತೆ ಅನೇಕ ನಗರಗಳಲ್ಲಿ ವಿಮಾನ ನಿಲ್ದಾಣಗಳನ್ನು ಕಚೇರಿ, ಮನರಂಜನೆ ಸೇರಿದಂತೆ ವಿವಿದೋದ್ದೇಶಕ್ಕೆ ಬಳಸಲಾಗುತ್ತಿದೆ.

ಈ ನಗರಗಳಲ್ಲಿ ವಿಮಾನ ನಿಲ್ದಾಣಗಳು ಕೇವಲ ಸಂಚಾರ ಉದ್ದೇಶಕ್ಕೆ ಮಾತ್ರವಲ್ಲದೇ ಉದ್ಯೋಗದ ಕೇಂದ್ರವಾಗಿ ನಗರ ಪರಿವರ್ತನೆಯಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿವೆ. ಹೀಗಾಗಿ ಜಿ.ಎಸ್.ಆರ್ 751 (ಇ) ನಿಯಮವನ್ನು ಸಡಿಲಗೊಳಿಸಬೇಕು. 150 ಮೀ. ಎತ್ತರದ ಮಿತಿಯನ್ನು 20 ಕಿ.ಮೀ ಬದಲಿಗೆ 15 ಕಿ.ಮೀ ವ್ಯಾಪ್ತಿಗೆ ಸೀಮಿತಗೊಳಿಸಬೇಕು” ಎಂದು ರಾಜ್ಯ ಸರ್ಕಾರದ ವಿವಿಧ ಅಧಿಕಾರಿಗಳು ಕೇಂದ್ರ ರಕ್ಷಣಾ ಇಲಾಖೆ ಅಧಿಕಾರಿಗಳಿಗೆ ಬರೆದ ಪತ್ರದಲ್ಲಿ ಮನವಿ ಮಾಡಿದ್ದರು. ಇದನ್ನೂ ಓದಿ: ದೆಹಲಿ ಅಂಗಳದಲ್ಲಿ ಡಿಸಿಎಂ ಡಿಕೆಶಿ ಪವರ್ ಕ್ಲೈಮ್!

TAGGED:airportbengalurud k shivakumarrajnath singh
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Annabhagya Rice
Districts

ಜಮೀನಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 200 ಟನ್‌ ಅನ್ನಭಾಗ್ಯ ಅಕ್ಕಿ ಜಪ್ತಿ

Public TV
By Public TV
40 minutes ago
sirsis Visually impaired sslc student
Latest

ಶಿರಸಿಯ ಅಂಧ ವಿದ್ಯಾರ್ಥಿನಿಗೆ ಸಿಕ್ತು ನ್ಯಾಯ – 84% ಅಂಕ ತೆಗೆದ್ರೂ ಫೇಲ್ ಮಾಡಿದ್ದ ಬೋರ್ಡ್

Public TV
By Public TV
54 minutes ago
Raghav Chadha
Latest

ಎಎಪಿ ತೊರೆದು ಬಿಜೆಪಿ ಸೇರಿದ 7 ರಾಜ್ಯಸಭಾ ಸಂಸದರು

Public TV
By Public TV
1 hour ago
Gadag Water supply once every 15 20 days Severe crisis in 76 villages
Districts

ಗದಗ|15-20 ದಿನಕ್ಕೊಮ್ಮೆ ನೀರು ಪೂರೈಕೆ- 76 ಹಳ್ಳಿಗಳಲ್ಲಿ ತೀವ್ರ ಬಿಕ್ಕಟ್ಟು

Public TV
By Public TV
2 hours ago
Kerala Aalin Sherin
Latest

ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ ಪಡೆದ ಕಂದನ ಮುದ್ದಾಡಿದ ಅಲಿನ್ ಪೋಷಕರು

Public TV
By Public TV
2 hours ago
14 year boy hangs himself for not giving mobile phone to play video games in hubballi
Crime

ಪ್ರೀ ಫೈರ್ ಗೇಮ್‌ ಆಡಲು ಮೊಬೈಲ್‌ ಕೊಡದಿದ್ದಕ್ಕೆ ನೇಣಿಗೆ ಶರಣಾದ ಬಾಲಕ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?