ಬೆಂಗಳೂರು/ರಾಮನಗರ: ಸಚಿವ ಡಿ.ಕೆ ಶಿವಕುಮಾರ್ ಗೆ ಮತ್ತೆ ಆದಾಯ ತೆರಿಗೆ ಇಲಾಖೆ ಶಾಕ್ ನೀಡಿದ್ದು, ಡಿಕೆಶಿ ಅವರ ತಾಯಿ ಗೌರಮ್ಮ ರವರಿಗೆ ವಿಚಾರಣೆಗೆ ಹಾಜರಾಗುವಂತೆ ಐಟಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
ಕನಕಪುರ ತಾಲೂಕಿನ ದೊಡ್ಡ ಆಲಹಳ್ಳಿಯ ಡಿಕೆಶಿ ಮನೆ ಹಾಗೂ ಕೋಡಿಹಳ್ಳಿಯ ಡಿ.ಕೆ ಸುರೇಶ್ ಮನೆಗೆ ನಾಲ್ಕು ಜನ ಅಧಿಕಾರಿಗಳು ಬುಧವಾರ ಭೇಟಿ ನೀಡಿದ್ದರು. ಈ ವೇಳೆ ಮನೆಯಲ್ಲಿ ಯಾರೂ ಇಲ್ಲದ ಕಾರಣ ಸಚಿವ ಡಿಕೆ ಶಿವಕುಮಾರ್ ಮನೆಯ ಬಾಗಿಲಿಗೆ ನೋಟಿಸ್ ಅಂಟಿಸಿ ತೆರಳಿದ್ದರು. ಮನೆಯ ಬಾಗಿಲ ಮೇಲೆ ಐಟಿ ಅಧಿಕಾರಿಗಳು ನೋಟಿಸ್ ಅಂಟಿಸಿರುವ ಹಿನ್ನೆಲೆಯಲ್ಲಿ ಸಚಿವ ಡಿಕೆಶಿ ತಾಯಿ ಗೌರಮ್ಮ ರವರು ಬೆಂಗಳೂರಿಗೆ ತೆರಳಿದ್ದು ಐಟಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ ಎಂಬ ಮಾಹಿತಿ ಸಚಿವರ ಆಪ್ತ ವಲಯದಿಂದ ಮಾಹಿತಿ ತಿಳಿದು ಬಂದಿದೆ.
ಮೊದಲಿಗೆ ಐಟಿ ಅಧಿಕಾರಿಗಳು ಕನಕಪುರದಲ್ಲಿನ ಮನೆಗೆ ಭೇಟಿ ನೀಡಿ ನಂತರ ಕೋಡಿಹಳ್ಳಿಯ ಮನೆ ಹಾಗೂ ದೊಡ್ಡ ಆಲಹಳ್ಳಿಯ ಮನೆಗೆ ತೆರಳಿದ್ದಾರೆ. ಆದರೆ ಎಲ್ಲೂ ಕೂಡಾ ಡಿಕೆಶಿ ತಾಯಿ ಗೌರಮ್ಮನವರು ಸಿಗದ ಹಿನ್ನೆಲೆಯಲ್ಲಿ ನೋಟಿಸನ್ನು ಬಾಗಿಲಿಗೆ ಅಂಟಿಸಿ ಹೋಗಿದ್ದಾರೆ. ಇದನ್ನೂ ಓದಿ: ಸ್ಯಾಂಡಲ್‍ವುಡ್ ಗೆ ಐಟಿ ಶಾಕ್, ಇತ್ತ ಡಿಕೆಶಿ ತಾಯಿಗೂ ಶಾಕ್
ಸದ್ಯ ವಿಚಾರಣೆಗೆ ಐಟಿ ಪ್ರಧಾನ ಕಚೇರಿಗೆ ಹಾಜರಾಗಿರುವ ಸಚಿವ ಡಿ.ಕೆ ಶಿವಕುಮಾರ್ ಅವರ ವಿಚಾರಣೆ ನಡೆಸುತ್ತಿರುವ ಐಟಿ ಅಧಿಕಾರಿಗಳು ಮಧ್ಯಾಹ್ನ ಊಟಕ್ಕೆ ಬಿಡದೆ ಮಾಹಿತಿ ಪಡೆದಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ. ಐಟಿ ಕಚೇರಿಗೆ ತೆರಳುವ ಮುನ್ನವೇ ಡಿಕೆ ಶಿವಕುಮಾರ್ ಅವರು ಹಣ್ಣುಗಳನ್ನು ತೆಗೆದುಕೊಂಡು ಹೋಗಿದ್ದರು. ಇತ್ತ ಐಟಿ ಕಚೇರಿಗೆ ಡಿಕೆಶಿ ಆಪ್ತ, ಉದ್ಯಮಿ ಸಚಿನ್ ನಾರಾಯಣ್ ಕೂಡ ಆಗಮಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv