ತಮಿಳುನಾಡು: ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರು ಚೆನ್ನೈ ಕಾರ್ಪೊರೇಷನ್ ಪ್ರಧಾನ ಕಚೇರಿಯಲ್ಲಿ ಗ್ರೇಟರ್ ಚೆನ್ನೈ ಕಾರ್ಪೊರೇಷನ್‌ನೊಂದಿಗೆ (Greater Chennai Corporation) ಸಭೆಯಲ್ಲಿ ಭಾಗವಹಿಸಿದರು.
ಈ ಕುರಿತು ಮಾಧ್ಯಮಗಳ ಮುಂದೆ ಮಾತನಾಡಿದ ಅವರು, “ಸಭೆಯು ತುಂಬಾ ಚೆನ್ನಾಗಿತ್ತು. ಬಹಳಷ್ಟು ಮಾಹಿತಿಗಳು ಸಿಕ್ಕಿವೆ. ನಾನು ಗ್ರೇಟರ್ ಚೆನ್ನೈ ಕಾರ್ಪೊರೇಶನ್‌ನನ್ನು ಅಭಿನಂದಿಸುತ್ತೆನೆ ಎಂದರು. ಇದನ್ನೂ ಓದಿ: ಇಂದು ಬ್ರುನೈಗೆ ಪ್ರಧಾನಿ ಮೋದಿ ಭೇಟಿ – 7 ಸಾವಿರ ಕಾರುಗಳ ಒಡೆಯ ಬ್ರುನೈ ಸುಲ್ತಾನನಿಂದ ಸ್ವಾಗತ
ನಗರವನ್ನು ತುಂಬಾ ಚೆನ್ನಾಗಿ ಸ್ವಚ್ಛವಾಗಿ ಇಟ್ಟುಕೊಂಡಿದ್ದಾರೆ. ಸಿಎನ್‌ಜಿ (ನೈಸರ್ಗಿಕ ಅನಿಲ) ಮತ್ತು ತ್ಯಾಜ್ಯ ನಿರ್ವಹಣೆಯ ಸ್ಥಾನವೂ ಉತ್ತಮವಾಗಿದೆ. ಇಲ್ಲಿ ಕಲಿಯಲು ಬಹಳಷ್ಟು ವಿಷಯಗಳಿವೆ. ಇಲ್ಲಿನ ಕೆಲವು ವಿಚಾರಗಳನ್ನು ನಾವು ಕಾರ್ಯಗತಗೊಳಿಸುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ದರ್ಶನ್ ತಪ್ಪು ಮಾಡಿದ್ದಕ್ಕೆ ಜೈಲಿಗೆ ಹೋಗಿದ್ದಾರೆ: ಜಮೀರ್