ನವದೆಹಲಿ: ದೆಹಲಿ ಹೈಕೋರ್ಟ್ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಜಾಮೀನು ನೀಡಿದೆ. ಈಗ ಜಾರಿ ನಿರ್ದೇಶನಾಲಯ ಜಾಮೀನು ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಿದೆ. ಅರ್ಜಿ ಗುರುವಾರ ವಿಚಾರಣೆಗೆ ಬರುವ ಸಾಧ್ಯತೆಗಳಿವೆ.
ದೆಹಲಿ ಹೈಕೋರ್ಟಿನ ನ್ಯಾ.ಸುರೇಶ್ ಕುಮಾರ್ ಕೈಟ್ ಜಾಮೀನು ಆದೇಶವನ್ನು ಇಂದು ಪ್ರಕಟಿಸಿದರು. ದೇಶಕ್ಕೆ ತೆರಳುವ ಮೊದಲು ಅನುಮತಿ ಪಡೆಯಬೇಕು, 25 ಲಕ್ಷ ರೂ. ಬಾಂಡ್ ಮತ್ತು ಇಬ್ಬರ ಶ್ಯೂರಿಟಿ ನೀಡಬೇಕು ಎಂಬುದಾಗಿ ಷರತ್ತು ವಿಧಿಸಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
Advertisement
ಸೋದರ ಮತ್ತು ಸಂಸದರಾಗಿರುವ ಡಿ.ಕೆ.ಸುರೇಶ್ ಮತ್ತು ಸುರೇಶ್ ಅವರ ಆಪ್ತ ಸಹಾಯಕ ಜುಬಿನ್ ಇಬ್ಬರು ಶ್ಯೂರಿಟಿ ನೀಡಿದ್ದಾರೆ. ಪಾರ್ಲಿಮೆಂಟ್ ಭವನದ ಎಸ್ ಬಿಐ ಬ್ಯಾಂಕ್ ನಲ್ಲಿ ಡಿ.ಕೆ.ಸುರೇಶ್ ಮತ್ತು ಜುಬೇನ್ ಹೆಸರಲ್ಲಿ ಸೆಕ್ಯೂರಿಟಿ ಅಮೌಂಟ್ ಡೆಪಾಸಿಟ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
Advertisement
Advertisement
ಡಿ.ಕೆ.ಶಿವಕುಮಾರ್ ಜಾಮೀನು ಅರ್ಜಿ ಸಂಬಂಧ ಸುಮಾರು ಗುರುವಾರ (ಅಕ್ಟೋಬರ್ 17) 3 ಗಂಟೆಗೂ ಅಧಿಕ ಕಾಲ ವಾದ-ಪ್ರತಿವಾದ ಆಲಿಸಿದ ದೆಹಲಿ ಹೈಕೋರ್ಟ್ ನ್ಯಾ. ಸುರೇಶ್ ಕುಮಾರ್ ಕೈಟ್ ಇಂದಿಗೆ ಆದೇಶವನ್ನು ಕಾಯ್ದಿರಿಸಿದ್ದರು.