ನವದೆಹಲಿ: ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರನ್ನು ಮಂಗಳವಾರ ರಾತ್ರಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ದೆಹಲಿಯ ಆರ್‌ಎಂಎಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದೆ.
ಡಿ.ಕೆ.ಶಿವಕುಮಾರ್ ಎದೆ ನೋವಿನಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಕೂಡ ಡಿ.ಕೆ.ಶಿವಕುಮಾರ್ ಅವರಿಗೆ ಬಿಪಿ ಮತ್ತು ಶುಗರ್ ನಲ್ಲಿ ಭಾರೀ ವ್ಯತ್ಯಾಸ ಕಂಡು ಬಂದಿದೆ. ಜೊತೆಗೆ ರಕ್ತದೊತ್ತಡ ಕೂಡ ಹೆಚ್ಚಳವಾಗಿದೆ. ತಕ್ಷಣ ವೈದ್ಯರು ಚಿಕಿತ್ಸೆ ನೀಡಿ ವಿಶ್ರಾಂತಿಗೆ ಅವಕಾಶ ನೀಡಿದ್ದರು.
ಅವರನ್ನು ಸ್ಪೆಷಲ್ ವಾರ್ಡ್ ಗೆ ಶಿಫ್ಟ್ ಮಾಡಿ ವಿಶ್ರಾಂತಿ ಕಲ್ಪಿಸಿದ್ದರು. ವಿಶ್ರಾಂತಿ ಪಡೆದ ನಂತರ ಡಿಕೆಶಿ ಅವರು ಆರೋಗ್ಯ ಹತೋಟಿಗೆ ಬಂದಿದೆ. ಹೀಗಾಗಿ ಸ್ವಲ್ಪ ಸಮಯದ ನಂತರ ವೈದ್ಯರು ಮತ್ತೊಂದು ರೊಟಿನ್ ಚೆಕಪ್ ನಡೆಸಲಿದ್ದಾರೆ. ಜೊತೆಗೆ ಇನ್ನೂ 24 ಗಂಟೆಗಳ ಕಾಲ ಅವರನ್ನು ನಿಗಾ ಘಟಕದಲ್ಲಿ ಇರಿಸಬೇಕು ಎಂದು ವೈದ್ಯರು ಇಡಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಆದರೆ ಇಡಿ ಅಧಿಕಾರಿಗಳು ಇಂದೇ ಅವರನ್ನು ನಮ್ಮ ಕಸ್ಟಡಿಗೆ ತೆಗೆದುಕೊಳ್ಳಬೇಕು ಎಂದು ಕೇಳುವ ಸಾಧ್ಯತೆ ಇದೆ.