ಬೆಳಗಾವಿ: ಲೋಕಸಭಾ ಉಪ ಚುನಾವಣೆಯಲ್ಲಿ ಸೋತರೂ ನಮ್ಮ ಪಕ್ಷದ ಅಭ್ಯರ್ಥಿಗೆ ಹೆಚ್ಚಿನ ಬಲ ಕೊಟ್ಟಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
Advertisement
ಸೆಪ್ಟೆಂಬರ್ 3ರಂದು ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂತೋಷ, ವಿಶ್ವಾಸದಿಂದ ನಾನು ಬೆಳಗಾವಿಗೆ ಆಗಮಿಸಿದ್ದೇನೆ. ಲೋಕಸಭೆ ಉಪಚುನಾವಣೆಯಲ್ಲಿ ಬೆಳಗಾವಿ ಮಹಾಜನತೆ ನಮಗೆ ಅತಿಹೆಚ್ಚು ವಿಶ್ವಾಸ ಕೊಟ್ಟಿದ್ದಾರೆ. ಚುನಾವಣೆಯಲ್ಲಿ ಸೋತರೂ ನಮ್ಮ ಪಕ್ಷದ ಅಭ್ಯರ್ಥಿಗೆ ಹೆಚ್ಚಿನ ಬಲ ಕೊಟ್ಟಿದ್ದಾರೆ. ಬಿಜೆಪಿ ತನ್ನ ಪ್ರಣಾಳಿಕೆ ಮಾಡಿದ್ದಾರೆ ಎಂದು ನಾವು ಸುದ್ದಿಗೋಷ್ಠಿ ಮಾಡ್ತಿಲ್ಲ. ಮೊದಲ ಬಾರಿ ಬಿಜೆಪಿಯವರು ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಅವರೇನೇ ಮಾಡಲಿ ಅದು ಅವರ ಪಕ್ಷಕ್ಕೆ ಬಿಟ್ಟ ವಿಚಾರ ಎಂದು ಹೇಳಿದ್ದಾರೆ.ಇದನ್ನೂ ಓದಿ:ಬಹಳ ಕಡಿಮೆ ಸಮಯದಲ್ಲಿ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ: ಹಾಲಪ್ಪ ಆಚಾರ್
Advertisement
ಹುಬ್ಬಳ್ಳಿ, ಧಾರವಾಡದಲ್ಲಿ 15 ವರ್ಷದಿಂದ ಆಡಳಿತದಲ್ಲಿದ್ದು, ಎರಡು ಪ್ರಣಾಳಿಕೆ ಬಿಡುಗಡೆ ಮಾಡಿದ್ದರು. ಬಿಜೆಪಿ ಪ್ರಣಾಳಿಕೆಯಲ್ಲಿ ಬೆಳಗಾವಿ ಸೇರಿ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಬೆಂಗಳೂರು, ಹುಬ್ಬಳ್ಳಿ, ಬೆಳಗಾವಿ ಹೈಸ್ಪೀಡ್ ರೈಲು ಮಾಡ್ತೀವಿ ಎಂದಿದ್ದಾರೆ. ಎಲ್ಲಿ ಯಾರಿಗೆ ರೈಲು ಬಿಟ್ರು ಎಂದು ಬಿಜೆಪಿಯನ್ನು ವ್ಯಂಗ್ಯ ಮಾಡಿದ್ದಾರೆ.
Advertisement
Advertisement
ರಾಜ್ಯ, ಕೇಂದ್ರದಲ್ಲಿ ಬಿಜೆಪಿ ಶಾಸಕರಿದ್ದಾರೆ, ಬೆಳಗಾವಿ ನಗರದ ಇಬ್ಬರು ಶಾಸಕರು ಬಿಜೆಪಿಯವರು, ಸಂಸದರು ಬಿಜೆಪಿಯವರು. ಡಬಲ್ ಇಂಜಿನ್ ಸರ್ಕಾರ ಈಗ ತ್ರಿಬಲ್ ಇಂಜಿನ್ ಸರ್ಕಾರ ಎಂದು ಹೇಳುತ್ತಿದ್ದಾರೆ. ಸುವರ್ಣಸೌಧ ನಿರ್ಮಿಸಿ ಬೆಳಗಾವಿ ಎರಡನೇ ರಾಜಧಾನಿ ಎಂದು ಘೋಷಿಸಿ ಉದಾಸೀನತೆ ಮಾಡಿದ್ದಾರೆ. ಬೆಳಗಾವಿಯಲ್ಲಿ ಒಂದು ವಾರ ಸಭೆ ನಡೆಸಿದ್ರೆ ಬೆಳಗಾವಿಗೆ ಆರ್ಥಿಕ ಬಲ ಬರುತ್ತೆ. ಆದರೆ ಬೆಳಗಾವಿ ಬಗ್ಗೆ ಸರ್ಕಾರಕ್ಕೆ ಕಾಳಜಿ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ:ಜಾತಿ, ಭಾಷೆಯ ವಿಷಬೀಜ ಬಿತ್ತಿ ಅಧಿಕಾರ ಹಿಡಿಯುವ ತಂತ್ರ ಪ್ರಾರಂಭವಾಗಿದೆ: ಈರಣ್ಣ ಕಡಾಡಿ
20 ವರ್ಷದಿಂದ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಸಿಡಿಪಿ ಇರಲಿಲ್ಲ. ಸತೀಶ್ ಜಾರಕಿಹೊಳಿ ಸಚಿವರಾಗಿದ್ದಾಗ ಸಿಡಿಪಿ ಬಂದಿದೆ. ಮತ್ತೊಂದು ಸಿಡಿಪಿ ಕೊಡುತ್ತೇವೆ ಎಂದಿದ್ದರು. ಅಭಿವೃದ್ಧಿ ಜೊತೆ ಉದ್ಯೋಗ ಸೃಷ್ಟಿ ಮಾಡುತ್ತೇವೆ. ಜನರು ಉದ್ಯೋಗಕ್ಕೆ ಬೆಂಗಳೂರಿಗೆ ಹೋಗೋದು ತಪ್ಪಬೇಕು. ಕೇವಲ ಬೆಂಗಳೂರಿಗೆ ಬಿಲ್ಡಿಂಗ್‍ಗಳು ಸೀಮಿತ ಆಗಬಾರದು ಇಲ್ಲಿಗೂ ಬೇಕು. ಐಟಿ ಪಾರ್ಕ್, ಕಚೇರಿ, ಹೋಟೆಲ್ ಸೇರಿ ಕಮರ್ಷಿಯಲ್ ಸ್ಥಾಪನೆ ಮಾಡಬೇಕಾಗುತ್ತೆ. ನಮ್ಮ ಕಾರ್ಪೊರೇಷನ್ ವತಿಯಿಂದ ಹೊಸ ಮಾದರಿ ರಚಿಸಿ ಸರ್ಕಾರಕ್ಕೆ ಶಿಫಾರಸು ಮಾಡುತ್ತೇವೆ. ಕಾಂಗ್ರೆಸ್‍ಗೆ ಅಧಿಕಾರ ಕೊಟ್ಟರೆ ಹೊಸ ಸಿಡಿಪಿ ಸರ್ಕಾರಕ್ಕೆ ಶಿಫಾರಸು ಮಾಡುತ್ತೇವೆ ಎಂದು ಭರವಸೆಯನ್ನು ನೀಡಿದ್ದಾರೆ.ಇದನ್ನೂ ಓದಿ:ಸರ್ಕಾರದಿಂದ ಆದೇಶ ಹೊರಡಿಸಿ ಪುಣ್ಯ ಕಟ್ಟಿಕೊಳ್ಳಿ- ಮಾಜಿ ಸ್ಪೀಕರ್ ವಿರುದ್ಧ ಪೊಲೀಸರ ಆಕ್ರೋಶ