ಬೆಂಗಳೂರು: ಗ್ಯಾರಂಟಿ ಯೋಜನೆಗಳನ್ನು ರದ್ದು ಮಾಡುವುದಿಲ್ಲ. 5 ವರ್ಷಗಳ ಕಾಲ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ಕೊಡುತ್ತೇವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (D.K Shivakumar) ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ (Bengaluru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ (Congress) ಸೋತರೆ ಗ್ಯಾರಂಟಿ ಯೋಜನೆ ರದ್ದಾಗುತ್ತದೆ ಎಂಬ ಶಾಸಕ ಬಾಲಕೃಷ್ಣ ಅವರ ವಿವಾದಿತ ಹೇಳಿಕೆಗೆ ವಿವರಣೆ ನೀಡಿ ತೇಪೆ ಹಚ್ಚಿದ್ದಾರೆ. ಲೋಕಸಭಾ ಚುನಾವಣೆ ಆದ ಮೇಲೆ ಗ್ಯಾರಂಟಿ ಯೋಜನೆ ಕೊಡಲ್ಲ ಎಂಬುದನ್ನು ಬಾಲಕೃಷ್ಣ ಹೇಳಿರೋದಲ್ಲ. ಬಿಜೆಪಿಯವರು ಹಾಗೆ ಹೇಳಿದ್ದಾರೆ ಎಂದು ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಘೋಷಣೆಗಳು ಬೋಗಸ್ ಭರವಸೆ: ರೇಣುಕಾಚಾರ್ಯ
Advertisement
Advertisement
ಲೋಕಸಭಾ ಚುನಾವಣೆ ಬಳಿಕ ಗ್ಯಾರಂಟಿ ರದ್ದು ಮಾಡ್ತಾರೆ ಎಂದು ಬಿಜೆಪಿಯವರು ಹೇಳಿದ್ದಾರೆ. ನೀವು ಎಚ್ಚರಿಕೆಯಿಂದ ಇರಿ ಎಂದು ಬಾಲಕೃಷ್ಣ ಹೇಳಿದ್ದಾರೆ ಅಷ್ಟೇ ಎಂದು ಸಮಜಾಯಿಷಿ ನೀಡಿದ್ದಾರೆ. ಗ್ಯಾರಂಟಿ ಯೋಜನೆ ಕರ್ನಾಟಕದಲ್ಲಿ ರದ್ದು ಮಾಡೋದಿಲ್ಲ. ರಾಜ್ಯದಲ್ಲಿ 5 ವರ್ಷ ಗ್ಯಾರಂಟಿ ಯೋಜನೆ ಇರಲಿದೆ ಎಂದು ಅವರು ಭರವಸೆ ನೀಡಿದ್ದಾರೆ.
Advertisement
Advertisement
ಶಾಸಕರು ಹೇಳಿದ್ದೇನು..?: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋತರೆ ಗ್ಯಾರಂಟಿ ರದ್ದು ಮಾಡಲಾಗುವುದು. ಬಿಜೆಪಿಯವರು (BJP) ಅಕ್ಷತೆ ಕಾಳು ನೀಡಿ ಮತ ಕೇಳುತ್ತಿದ್ದಾರೆ. ನಾವು ಐದು ಗ್ಯಾರಂಟಿಗಳನ್ನ ನೀಡಿ ಮತ ಕೇಳುತ್ತಿದ್ದೇವೆ. ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲದಿದ್ರೆ ಜನರಿಗೆ ಐದು ಗ್ಯಾರಂಟಿಗಳು ಇಷ್ಟ ಇಲ್ಲ ಅಂತ ಅರ್ಥ. ಹಾಗಾಗಿ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆಯೂ ಚರ್ಚೆ ಮಾಡಿದ್ದೇನೆ ಎಂದರು.
ನಿಮ್ಮ ಮತ ಅಕ್ಷತೆ ಕಾಳಿಗಾ ಅಥವಾ ಐದು ಗ್ಯಾರಂಟಿಗಾ ಯೋಚನೆ ಮಾಡಿ. ಈ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಿಸಿದ್ರೆ ಗ್ಯಾರಂಟಿ ಯೋಜನೆ ಮುಂದುವರಿಸುತ್ತೇವೆ. ಒಂದು ವೇಳೆ ಗೆಲ್ಲಿಸದೇ ಇದ್ದರೆ ಗ್ಯಾರಂಟಿ ಯೋಜನೆ ತಿರಸ್ಕಾರ ಮಾಡಿದ್ದೀರಿ ಅಂತ ಅಲ್ವಾ ಎಂದು ಬಾಲಕೃಷ್ಣ ಪ್ರಶ್ನಿಸುವ ಮೂಲಕ ಮತದಾರರಿಗೆ ಮತ ನೀಡುವಂತೆ ಒತ್ತಾಯಿಸಿದ್ದಾರೆ. ಶಾಸಕರ ಈ ಹೇಳಿಕೆ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ: ಮಂಗಳೂರಿನ ಮೆಸ್ಕಾಂ ಇಇ ಶಾಂತಕುಮಾರ್ ಮನೆ, ಕಚೇರಿಗೆ ಲೋಕಾಯುಕ್ತ ದಾಳಿ